Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:17 - ಕನ್ನಡ ಸತ್ಯವೇದವು C.L. Bible (BSI)

17 ನಿನ್ನ ದಾಸನಿಗೆ ವಿಮುಖನಾಗಬೇಡಯ್ಯಾ I ಆಪತ್ತಿನಲ್ಲಿರುವೆ, ತಡಮಾಡಬೇಡಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಿನ್ನ ದಾಸನಿಗೆ ವಿಮುಖನಾಗಬೇಡ, ಇಕ್ಕಟ್ಟಿನಲ್ಲಿದ್ದೇನೆ, ತಡಮಾಡದೆ ಸಹಾಯಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಿನ್ನ ದಾಸನಿಗೆ ವಿಮುಖನಾಗಬೇಡ. ಇಕ್ಕಟ್ಟಿನಲ್ಲಿದ್ದೇನೆ; ತಡೆಮಾಡದೆ ಸಹಾಯಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಿನ್ನ ಸೇವಕನಿಗೆ ವಿಮುಖನಾಗಬೇಡ. ನಾನು ಆಪತ್ತಿನಲ್ಲಿದ್ದೇನೆ! ಬೇಗನೆ ನನಗೆ ಸಹಾಯಮಾಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಿಮ್ಮ ಮುಖವನ್ನು ನಿಮ್ಮ ಸೇವಕನಿಗೆ ಮರೆಮಾಡಬೇಡಿರಿ. ನಾನು ಇಕ್ಕಟ್ಟಿನಲ್ಲಿದ್ದೇನೆ. ಬೇಗ ನನಗೆ ಉತ್ತರಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:17
14 ತಿಳಿವುಗಳ ಹೋಲಿಕೆ  

ವಿಮುಖನಾಗಬೇಡ ಪ್ರಭು, ಕೋಪದಿಂದೆನ್ನ ತಳ್ಳಬೇಡಯ್ಯಾ I ರಕ್ಷಕದೇವಾ, ಎನಗೆ ಸಹಾಯಕಾ, ದಾಸನ ಕೈಬಿಡಬೇಡಯ್ಯಾ II


ಕಷ್ಟಕಾಲದೊಳು ವಿಮುಖನಾಗಬೇಡ ನೀನೆನಗೆ I ಕಿವಿಗೊಡು, ಮೊರೆಯಿಡುವಾಗಲೆ, ಸದುತ್ತರಿಸು ಬೇಗನೆ II


ಸುಮಾರು ಮೂರು ಗಂಟೆಯ ಸಮಯದಲ್ಲಿ ಯೇಸುಸ್ವಾಮಿ, “ಏಲೀ, ಏಲೀ, ಲಮಾ ಸಬಕ್ತಾನಿ?” ಅಂದರೆ, “ನನ್ನ ದೇವರೇ, ನನ್ನ ದೇವರೇ, ನನ್ನನ್ನೇಕೆ ಕೈಬಿಟ್ಟಿರಿ?” ಎಂದು ಗಟ್ಟಿಯಾಗಿ ಕೂಗಿಕೊಂಡರು.


ಕರುಣೆಯಿಂದೆನ್ನನು ದೇವಾ, ರಕ್ಷಿಸು I ತ್ವರೆಯಾಗಿ ಬಂದು ಪ್ರಭು, ಉದ್ಧರಿಸು II


ಶತ್ರುಗಳಿಂದ ಪ್ರಭು ಮುಕ್ತಗೊಳಿಸೆನ್ನನು I ನಿನ್ನನೇ ಮೊರೆಹೊಕ್ಕು ನಾ ಬಂದಿರುವೆನು II


ಪೂರೈಸುವೆನು ಬಾಯಾರೆ ಮಾಡಿದ ಹರಕೆಯನು I ಸಂಕಟಕಾಲದಲಿ ನಾ ಮಾಡಿದ ವ್ರತವನು II


ಮರೆಸಿಕೊಂಡಿರುವೆಯೇಕೆ ನಿನ್ನ ಮುಖವನು? I ಮರೆತಿರುವೆಯೇಕೆ ನಮ್ಮ ಹಿಂಸೆ ಬಾಧೆಯನು? II


ಕರುಣೆಯಿಂದೆನ್ನನು ಪ್ರಭು ರಕ್ಷಿಸ ಬಾ I ನನಗೊತ್ತಾಸೆ ಮಾಡಲು ಪ್ರಭು, ಬೇಗ ಬಾ II


ಎಷ್ಟುಕಾಲ ಪ್ರಭು, ನೀ ಎನ್ನ ಪೂರ್ತಿ ಮರೆತಿರುವೆ? I ಇನ್ನೆಷ್ಟರ ತನಕ ನೀನೆನಗೆ ವಿಮುಖನಾಗಿರುವೆ? II


ನನ್ನ ಅಪರಾದವನ್ನು ನೀನು ಕ್ಷಮಿಸಬಾರದೆ? ನನ್ನ ದೋಷವನ್ನು ನೀನು ಪರಿಹರಿಸಬಾರದೆ? ಮಣ್ಣಿನೊಳಗೆ ಬಿದ್ದಿರುವೆ ನಾನು ಈಗ ನಾನು ಇಲ್ಲವಾಗಿರುವೆ ನೀ ಹುಡುಕುವಾಗ.


“ನನ್ನ ಮನೋವೇದನೆ ಪ್ರಾಣಹಿಂಡುವಷ್ಟು ತೀವ್ರವಾಗಿದೆ. ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರಿ,” ಎಂದರು.


ಸದುತ್ತರ ಪಾಲಿಸು ಪ್ರಭೂ, ಸೊರಗಿದೆ ಎನ್ನ ಚೇತನ I ನೀ ವಿಮುಖನಾದರೆ ನಾ ನರಕಹೊಕ್ಕವರಿಗೆ ಸಮಾನ II


ತೃಣೀಕರಿಸನು, ತಿರಸ್ಕರಿಸನು ದಲಿತನನು I ವಿಮುಖನಾಗನು, ಪ್ರಾರ್ಥನೆಗೆ ಕಿವಿಗೊಡುವನು II


ನಾವು ಉಳಿದಿರುವುದು ಸರ್ವೇಶ್ವರನ ಕರುಣೆಯಿಂದ ಆತನ ಕೃಪಾವರಗಳಿಗೆ ಕೊನೆಯೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು