Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:18 - ಕನ್ನಡ ಸತ್ಯವೇದವು C.L. Bible (BSI)

18 ಹತ್ತಿರ ಬಂದೆನ್ನ ಉದ್ಧರಿಸಯ್ಯಾ I ಶತ್ರುಗಳ ಕೈಯಿಂದ ರಕ್ಷಿಸಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಸಮೀಪಿಸಿ ನನ್ನ ಪ್ರಾಣವನ್ನು ವಿಮೋಚಿಸು. ಶತ್ರು ನಿಮಿತ್ತವಾಗಿ ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಸಮೀಪಿಸಿ ನನ್ನ ಪ್ರಾಣವನ್ನು ವಿಮೋಚಿಸು. ಶತ್ರುನಿವಿುತ್ತವಾಗಿ ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಬಂದು ನನ್ನ ಪ್ರಾಣವನ್ನು ರಕ್ಷಿಸು. ನನ್ನ ಶತ್ರುಗಳಿಂದ ನನ್ನನ್ನು ವಿಮೋಚಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನನಗೆ ಸಮೀಪವಾಗಿ ನನ್ನನ್ನು ಕಾಪಾಡಿರಿ. ನನ್ನ ಶತ್ರುಗಳ ನಿಮಿತ್ತ ನನ್ನನ್ನು ಬಿಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:18
15 ತಿಳಿವುಗಳ ಹೋಲಿಕೆ  

ವಿಮೋಚನೆಯನಿತ್ತಿಹನು ಪ್ರಭು ತನ್ನ ಪ್ರಜೆಗೆ I ಸ್ಥಿರಸ್ಥಾಪಿತವಾಗಿಹುದು ಆತನ ಒಡಂಬಡಿಕೆ I ಪರಿಶುದ್ಧ, ಪರಮಪೂಜ್ಯ ಆತನ ನಾಮಾಂಕೆ II


ನನ್ನಿಂದ ದೂರ ಸರಿಯಲುಬೇಡ, ಪ್ರಭು I ನೀನೆನ್ನ ಶಕ್ತಿ, ನೆರವಾಗಲು ತ್ವರೆಮಾಡು II


ದೇವಾ, ಓ ಎನ್ನ ದೇವಾ, ಏಕೆನ್ನ ಕೈಬಿಟ್ಟೆ? I ಕಿವಿಗೊಡದೆ ಏಕೆ ದೂರವಾಗಿಬಿಟ್ಟೆ? II


ಸರ್ವೇಶ್ವರಾ, ಇಸ್ರಯೇಲರಿಗೆ ನೀವೇ ನಿರೀಕ್ಷೆ ಇಕ್ಕಟ್ಟಿನಲ್ಲಿ ಅವರಿಗೆ ನೀವೇ ರಕ್ಷೆ. ನಾಡಿನಲ್ಲಿ ಅನ್ಯದೇಶೀಯನಂತಿರುವಿರಿ, ಏಕೆ? ರಾತ್ರಿ ಕಳೆಯಲು ಗುಡಾರಹಾಕಿದ ಪ್ರಯಾಣಿಕನಂತಿರುವಿರಿ, ಏಕೆ?


ನನ್ನನ್ನಾದರೊ ಸ್ವಾಗತಿಸುವನು ದೇವನು I ಪಾತಾಳದ ಹಿಡಿತದಿಂದ ಬಿಡಿಸುವನು II


ನನಗಾಧಾರ ನೀನಲ್ಲವೆ? ನನ್ನಾತ್ಮವನು ನಿನಗೊಪ್ಪಿಸಿರುವೆ I ನಂಬಿಕಸ್ತನಾದ ದೇವನೆ, ನೀಯೆನ್ನ ಮುಕ್ತಗೊಳಿಸಿರುವೆ II


ನನ್ನಿಂದೇಕೆ ಪ್ರಭು, ಅಷ್ಟು ದೂರವಿರುವೆ? I ಕಷ್ಟಕಾಲದಲೇಕೆ ಕಣ್ಮರೆಯಾಗಿರುವೆ? II


ವಿರೋಧಿಯ ಕೈಯಿಂದ ನನ್ನನು ಬಿಡಿಸಿರೆಂದು ಕೇಳಿಕೊಂಡೆನೋ? ಹಿಂಸಕರಿಂದ ನನ್ನನು ವಿಮೋಚಿಸಿರೆಂದು ಬೇಡಿಕೊಂಡೆನೋ?


ಕಾನಾನ್ಯರು ಮತ್ತು ನಾಡಿನ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತುವರೆದು ಲೋಕದಲ್ಲಿ ನಮ್ಮ ಹೆಸರೇ ಉಳಿಯದಂತೆ ಮಾಡುವರು. ಆಗ ನಿಮ್ಮ ಮಹತ್ತಾದ ಹೆಸರನ್ನು ಉಳಿಸಿಕೊಳ್ಳಲು ಏನು ಮಾಡುವಿರಿ?” ಎಂದನು.


ಆದರೆ ತಪ್ಪು ತಿಳಿಯುತ್ತಿದ್ದರು ಅವರ ವಿರೋಧಿಗಳು; ‘ಇದಾಯಿತು ನಮ್ಮ ಶಕ್ತಿಯಿಂದ, ಸರ್ವೇಶ್ವರನಿಂದಲ್ಲ’ವೆಂದುಕೊಂಡು ಈ ಕಾರಣ ಹಿಂತೆಗೆದುಕೊಂಡೆನು ನನ್ನ ನಿಗದಿನಿರ್ಣಯವನು.


ಸುತ್ತಿಕೊಂಡಿವೆಯೆನ್ನನು ಬಲವಂತ ಹೋರಿಗಳು I ಮುತ್ತಿಕೊಂಡಿವೆ ಬಾಷಾನಿನ ಹಲವು ಗೂಳಿಗಳು II


ಕತ್ತಿಗೆ ತುತ್ತಾಗದಂತೆ ತಪ್ಪಿಸು I ಕುಕ್ಕುರಗಳಿಂದ ಪ್ರಾಣವನುಳಿಸು II


ವಿಮುಖನಾಗಬೇಡ ಪ್ರಭು, ಕೋಪದಿಂದೆನ್ನ ತಳ್ಳಬೇಡಯ್ಯಾ I ರಕ್ಷಕದೇವಾ, ಎನಗೆ ಸಹಾಯಕಾ, ದಾಸನ ಕೈಬಿಡಬೇಡಯ್ಯಾ II


ಸದುತ್ತರ ಪಾಲಿಸು ಪ್ರಭೂ, ಸೊರಗಿದೆ ಎನ್ನ ಚೇತನ I ನೀ ವಿಮುಖನಾದರೆ ನಾ ನರಕಹೊಕ್ಕವರಿಗೆ ಸಮಾನ II


ನಿನ್ನನ್ನು ಕೂಗಿಕೊಂಡಾಗ ಸಮೀಪಕ್ಕೆ ಬಂದೆ “ಭಯಪಡಬೇಡ” ಎಂದು ಅಭಯನೀಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು