Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:19 - ಕನ್ನಡ ಸತ್ಯವೇದವು C.L. Bible (BSI)

19 ನನಗಾದ ನಿಂದೆ, ಅಪಮಾನ, ಲಜ್ಜೆ ನಿನಗೆ ತಿಳಿದಿದೆಯಯ್ಯಾ I ನನ್ನ ವೈರಿ ವಿರೋಧಿಗಳು ನಿನಗೆ ಮರೆಯಾಗಿಲ್ಲವಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನನಗುಂಟಾದ ನಿಂದೆ, ಲಜ್ಜೆ, ಅಪಮಾನ ಇವು ನಿನಗೇ ಗೊತ್ತು; ನನ್ನ ವಿರೋಧಿಗಳು ನಿನಗೆ ಮರೆಯಾಗಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನನಗುಂಟಾದ ನಿಂದೆ, ಲಜ್ಜೆ, ಅಪಮಾನ ಇವು ನಿನಗೇ ಗೊತ್ತು; ನನ್ನ ವಿರೋಧಿಗಳು ನಿನಗೆ ಮರೆಯಾಗಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನನ್ನ ನಾಚಿಕೆ ನಿನಗೆ ಗೊತ್ತಿದೆ. ಶತ್ರುಗಳು ನನಗೆ ಮಾಡಿದ ಅವಮಾನ ನಿನಗೆ ಗೊತ್ತಿದೆ. ಅವರು ಮಾಡಿದ್ದನ್ನೆಲ್ಲಾ ನೀನು ಕಣ್ಣಾರೆ ನೋಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀವು ನನಗಿರುವ ನಿಂದೆ, ನಾಚಿಕೆ ಹಾಗೂ ನನ್ನ ಅವಮಾನವನ್ನೂ ತಿಳಿದಿದ್ದೀರಿ. ನನ್ನ ವೈರಿಗಳೆಲ್ಲರು ನಿಮ್ಮ ಮುಂದೆ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:19
9 ತಿಳಿವುಗಳ ಹೋಲಿಕೆ  

ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ಅವರು, ಅವಮಾನಪಡಿಸಿದವರನ್ನು ಪ್ರತಿಯಾಗಿ ಅವಮಾನಪಡಿಸಲಿಲ್ಲ. ಅವರು ಯಾತನೆಯನ್ನು ಅನುಭವಿಸುವಾಗಲೂ ಯಾರಿಗೂ ಬೆದರಿಕೆ ಹಾಕಲಿಲ್ಲ. ಬದಲಿಗೆ, ಸತ್ಯಸ್ವರೂಪರೂ ನ್ಯಾಯಾಧಿಪತಿಯೂ ಆದ ದೇವರಿಗೆ ತಮ್ಮನ್ನೇ ಒಪ್ಪಿಸಿಕೊಂಡರು.


ಧಿಕ್ಕರಿಸಲ್ಪಟ್ಟವನು, ಮನುಜರಿಂದ ತಿರಸ್ಕೃತನು, ದುಃಖಕ್ರಾಂತನು, ಕಷ್ಟಸಂಕಟ ಅನುಭವಿಸಿದವನು. ನೋಡಿದವರು ಮುಖ ತಿರುಗಿಸುವಷ್ಟು ನಿಂದಕನು ! ನಾವೋ ಲಕ್ಷ್ಯಕ್ಕೂ ತೆಗೆದುಕೊಳ್ಳಲಿಲ್ಲ ಆತನನು.


ಅದಕ್ಕೆ ಯೇಸು, “ನಾನು ದೆವ್ವಹಿಡಿದವನಲ್ಲ, ನನ್ನ ಪಿತನನ್ನು ನಾನು ಗೌರವಿಸುತ್ತೇನೆ. ನೀವಾದರೋ ನನ್ನನ್ನು ಅವಮಾನಪಡಿಸುತ್ತೀರಿ.


ನನ್ನ ಗೋಳಾಟ ಪ್ರಭು, ನಿನಗೆ ಗೊತ್ತಿದೆಯಯ್ಯಾ I ನನ್ನ ಮನದಾಸೆ ನಿನಗೆ ಬಯಲಾಗಿದೆಯಯ್ಯಾ II


ಅವರ ಬಾಯಲಿ ಹುಸಿನುಡಿ, ಹೃದಯವಾದರೊ ವಿನಾಶದ ಶರಧಿ I ಅವರ ಜಿಹ್ವೆಯಲಿ ಮುಖಸ್ತುತಿ, ಕಂಠವಾದರೋ ತೆರೆದ ಸಮಾಧಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು