Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:2 - ಕನ್ನಡ ಸತ್ಯವೇದವು C.L. Bible (BSI)

2 ಮುಳುಗುತಿಹೆನು ಕಳ್ಳುಸುಬಿನಲಿ; ಕಾಲೂರಲೆನಗೆ ನೆಲವಿಲ್ಲ I ಸಿಕ್ಕಿಹೆನು ಆಳ ಮಡುವಿನಲ್ಲಿ, ಹುಚ್ಚುಹೊಳೆ ಕೊಚ್ಚುತ್ತಿದೆಯಲ್ಲಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಳವಾದ ಕೆಸರಿನಲ್ಲಿ ಕುಸಿಯುತ್ತಿದ್ದೇನೆ; ನೆಲೆ ಸಿಕ್ಕುತ್ತಿಲ್ಲ. ಜಲರಾಶಿಯೊಳಗೆ ಮುಳುಗುತ್ತಿದ್ದೇನೆ; ಪ್ರವಾಹವು ನನ್ನನ್ನು ಹೊಡೆದುಕೊಂಡು ಹೋಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಳವಾದ ಕಳ್ಳುಸುಬಿನಲ್ಲಿ ಮುಳುಗುತ್ತಿದ್ದೇನೆ; ನೆಲೆ ಸಿಕ್ಕುವದಿಲ್ಲ. ದೊಡ್ಡ ಮಡುವಿನೊಳಕ್ಕೆ ಬಂದಿದ್ದೇನೆ; ಪ್ರವಾಹವು ನನ್ನನ್ನು ಬಡಕೊಂಡು ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿಂತುಕೊಳ್ಳಲು ನೆಲೆ ಸಿಕ್ಕುತ್ತಿಲ್ಲ; ಆಳವಾದ ಮರಳಿನೊಳಕ್ಕೆ ಮುಳುಗಿಹೋಗುತ್ತಿದ್ದೇನೆ. ನಾನು ಆಳವಾದ ನೀರಿನಲ್ಲಿದ್ದೇನೆ. ಅಲೆಗಳು ನನ್ನನ್ನು ಆವರಿಸಿಕೊಳ್ಳುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೆಲವಿಲ್ಲದಿರುವ ಆಳವಾದ ಕೆಸರಿನಲ್ಲಿ ನಾನು ಮುಳುಗುತ್ತಿದ್ದೇನೆ. ಪ್ರವಾಹಗಳು ನನ್ನ ಮೇಲೆ ಹಾದುಹೋಗುವ ನೀರಿನ ಅಗಾಧಕ್ಕೆ ನಾನು ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:2
11 ತಿಳಿವುಗಳ ಹೋಲಿಕೆ  

ಮೇಲೆತ್ತಿದನು ವಿನಾಶದ ಕೆಸರಿಂದ, ಕರಾಳ ಕೂಪದಿಂದ I ಗೋರ್ಕಲ್ಲ ಮೇಲಿರಿಸಿ ಹೆಜ್ಜೆಯಿಡಿಸಿದನು ಅತಿ ಧೈರ್ಯದಿಂದ II


ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆದರೂ ಅದು ಬೀಳಲಿಲ್ಲ. ಕಾರಣ ಅದರ ಅಡಿಗಟ್ಟು ಬಂಡೆಯ ಮೇಲಿತ್ತು.


ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿದ್ದ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದ ಇಳಿಸಿ ಅಲ್ಲೇ ಬಿಟ್ಟುಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು. ಯೆರೆಮೀಯನು ಅದರೊಳಗೆ ಹೂತುಕೊಂಡನು.


ಎಂತಲೇ ಭಕ್ತರೆಲ್ಲರು ನಿನ್ನ ಪ್ರಾರ್ಥಿಸಲಿ ಸಕಾಲದಲಿ I ಹುಚ್ಚುಹೊಳೆ ಉಕ್ಕಿಬಂದಾಗ ನೀ ಸಿಕ್ಕಲಿಲ್ಲವೆನ್ನದಿರಲಿ II


ಜುದೇಯದ ಅರಸನ ಮನೆಯಲ್ಲಿ ಉಳಿದಿರುವ ಎಲ್ಲ ಮಹಿಳೆಯರನ್ನು ಬಾಬಿಲೋನಿಯದ ಅರಸನ ದಳಪತಿಗಳ ಬಳಿಗೆ ತರಲಾಗುವುದು. ಆ ಮಹಿಳೆಯರೇ: ‘ಆಪ್ತ ಮಿತ್ರರು ನಿನ್ನನ್ನು ವಂಚಿಸಿ ಒಳಪಡಿಸಿಕೊಂಡರು; ನಿನ್ನ ಕಾಲುಗಳು ಬದಿಯಲ್ಲಿ ಹೂತಿರುವುದನ್ನು ನೋಡಿಯೂ ನಿನ್ನಿಂದ ದೂರವಾದರು’ ಎಂದು ತಮ್ಮನ್ನು ನಿಂದಿಸುವರು.


ನಿನಗೆ ದಾರಿಕಾಣದಿರಲು ಬೆಳಕೇ ಕತ್ತಲಾಗಿದೆ ನಿನ್ನನು ಮುಳುಗಿಸಲು ಜಲಪ್ರವಾಹವಿದೆ.


ಪರ್ವತಗಳ ತಳಹದಿಗೆ ದೇವಾ, ನಾನಿಳಿದೆ ಮುಚ್ಚಿಕೊಂಡವು ಜಗದ ದ್ವಾರಗಳು ನನ್ನ ಹಿಂದೆ. ಎನ್ನ ಕಾಪಾಡಿದೆ ಅಂಥ ಕೋಪದಿಂದ ಸರ್ವೇಶ್ವರಾ, ಮೇಲಕ್ಕೆತ್ತಿದೆಯೆನ್ನ ಜೀವಸಹಿತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು