Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:27 - ಕನ್ನಡ ಸತ್ಯವೇದವು C.L. Bible (BSI)

27 ದಂಡನೆ ಮೇಲೆ ದಂಡನೆಯನು ಅವರಿಗೆ ವಿಧಿಸು I ಅವರು ನಿರಪರಾಧಿಗಳೆಂಬುದನು ತಪ್ಪಿಸು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವರ ಅಪರಾಧಗಳು ಒಂದೊಂದಾಗಿ ಹೆಚ್ಚುತ್ತಾ ಬರಲಿ. ನಿನ್ನ ನೀತಿಯಲ್ಲಿ ಅವರಿಗೆ ಪಾಲುಕೊಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವರ ಅಪರಾಧಗಳು ಒಂದೊಂದಾಗಿ ಹೆಚ್ಚುತ್ತಾ ಬರಲಿ. ನಿನ್ನ ನೀತಿಯಲ್ಲಿ ಅವರಿಗೆ ಪಾಲುಕೊಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಅವರ ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸು. ನಿನ್ನ ರಕ್ಷಣೆಯಲ್ಲಿ ಅವರಿಗೆ ಪಾಲುಕೊಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅಪರಾಧದ ಮೇಲೆ ಅಪರಾಧವು ಅವರ ಮೇಲೆ ಬರಲಿ. ಅವರು ನಿಮ್ಮ ರಕ್ಷಣೆಯಲ್ಲಿ ಸೇರದೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:27
23 ತಿಳಿವುಗಳ ಹೋಲಿಕೆ  

ದಯೆತೋರಿದರೂ ಕಲಿಯನು ದುಷ್ಟನು ಆ ನ್ಯಾಯನೀತಿಯನು ಧರ್ಮಕ್ಷೇತ್ರದೊಳು ಸಹ ಗೈವನು ಅಕ್ರಮವನು ಗೌರವಿಸನು ಸರ್ವೇಶ್ವರನ ಮಹಿಮೆಯನು.


ಅವರ ಅಪರಾಧವನ್ನು ಕ್ಷಮಿಸಬೇಡಿ. ನಿಮ್ಮೆದುರಿಗಿರುವ ಅವರ ಪಾಪವನ್ನು ಅಳಿಸಿಬಿಡಬೇಡಿ. ಏಕೆಂದರೆ ಕಟ್ಟುವವರ ಮುಂದೆಯೇ ಅವರು ನಿಮ್ಮನ್ನು ಕೆಣಕಿದ್ದಾರೆ,” ಎಂದು ನಾನು ಪ್ರಾರ್ಥಿಸಿದೆ.


ಕಂಚುಗಾರನಾದ ಅಲೆಗ್ಸಾಂಡರನು ನನಗೆ ಬಹಳ ಕೇಡುಮಾಡಿದ್ದಾನೆ. ಪ್ರಭು ಅವನ ಕೃತ್ಯಗಳಿಗೆ ತಕ್ಕ ಶಿಕ್ಷೆಯನ್ನು ವಿಧಿಸುವರು.


ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟರು.


ಇದಕ್ಕೆ ಕಾರಣವಾದರೂ ಏನು? ಅವರು ಸತ್ಕಾರ್ಯಗಳನ್ನು ಆಧಾರವಾಗಿಟ್ಟುಕೊಂಡರೇ ಹೊರತು ವಿಶ್ವಾಸವನ್ನಲ್ಲ.


ದೇವರ ಇಚ್ಛೆಗೆ ಅನುಗುಣವಾಗಿ ಮಾನವರಿಗೆ ಕರುಣೆಯೂ ಲಭಿಸುತ್ತದೆ, ಕಾಠಿಣ್ಯವೂ ಲಭಿಸುತ್ತದೆ.


ಮರೆಯದಿರಲಿ ಪ್ರಭು ಅವನಾ ಹಿರಿಯರ ದೋಷವನು I ಪರಿಹರಿಸದಿರಲಿ ಅವನ ತಾಯಿಯು ಗೈದ ಪಾಪವನು II


“ಎಂತಲೇ ಕೈಬಿಟ್ಟೆ ಅವರನು ಹಟಮಾರಿಗಳೆಂದು I ತಮಗಿಷ್ಟಬಂದಂತೆಯೆ ನಡೆದುಕೊಳ್ಳಲಿಯೆಂದು, II


ನಿಮ್ಮಲ್ಲಿ ಅಳಿದುಳಿದವರು ತಮ್ಮ ಪಾಪದ ಪ್ರಯುಕ್ತ ಹಾಗು ತಮ್ಮ ಪಿತೃಗಳ ಪಾಪದ ಪ್ರಯುಕ್ತ ಅವರಂತೆಯೇ ಶತ್ರುಗಳ ನಾಡುಗಳಲ್ಲಿ ಕ್ಷೀಣವಾಗಿ ಹೋಗುವರು.


ಆದರೂ ಸರ್ವೇಶ್ವರ, ಮೋಶೆಗೆ ಮುಂತಿಳಿಸಿದಂತೆಯೇ ಆಯಿತು. ಸರ್ವೇಶ್ವರ ಫರೋಹನ ಹೃದಯವನ್ನು ಕಠಿಣಗೊಳಿಸಿದ್ದರಿಂದ ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.


ಆದರೂ ಫರೋಹನು ಮತ್ತೆ ತನ್ನ ಹೃದಯವನ್ನು ಮೊಂಡುಮಾಡಿಕೊಂಡು ಜನರಿಗೆ ಹೋಗಲು ಅಪ್ಪಣೆಕೊಡದೆ ಹೋದನು.


ಕಾಟ ತೀರಿತೆಂದು ತಿಳಿದುಕೊಂಡಾಗ ಫರೋಹನು ತನ್ನ ಹೃದಯವನ್ನು ಮೊಂಡಾಗಿಸಿಕೊಂಡನು. ಸರ್ವೇಶ್ವರ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆಹೋದನು.


ದಾರಿಯ ಪಕ್ಕದಲ್ಲಿ ಒಂದು ಅಂಜೂರದ ಮರ ಕಣ್ಣಿಗೆ ಬಿದ್ದಿತು. ಹತ್ತಿರಕ್ಕೆ ಹೋಗಿ ನೋಡುವಾಗ ಅದರಲ್ಲಿ ಬರೀ ಎಲೆಗಳೇ ಹೊರತು ಮತ್ತೇನೂ ಕಾಣಲಿಲ್ಲ. ಯೇಸು ಆ ಮರಕ್ಕೆ, “ಇನ್ನು ಮುಂದೆ ನೀನೆಂದಿಗೂ ಹಣ್ಣುಬಿಡದಂತಾಗಲಿ,” ಎಂದರು. ಅದೇ ಕ್ಷಣದಲ್ಲಿ ಆ ಮರ ಒಣಗಿಹೋಯಿತು.


ಬಂಜರು ಭೂಮಿಯಾಗಿಸುವೆನು ಅದನ್ನು; ಕುಡಿಕತ್ತರಿಸುವರಾರೂ ಇರರು ಅದಕ್ಕೆ. ಮುಳ್ಳುಕಳೆ ಬೆಳೆಯುವುದು ಅದರೊಳಗೆ. ನೀಡುವೆನು ಆಣತಿಯೊಂದನು ಮೋಡಗಳಿಗೆ; ಸುರಿಸವು ತುಂತುರು ಮಳೆಯನ್ನೂ ಅದಕ್ಕೆ.


ಲಭಿಸುವುದಾತನಿಗೆ ಶುಭ ಪ್ರಭುವಿನಿಂದ I ನೀತಿಯ ಸತ್ಫಲ ರಕ್ಷಕ ದೇವನಿಂದ II


ದೇವರಂತೆ ನೀವೂ ನನ್ನನು ದಂಡಿಸುವುದೇಕೆ? ನನ್ನನ್ನು ಛಿನ್ನಪನ್ನವಾಗಿಸಿದ್ದೀರಿ, ಇದು ಸಾಲದೆ ನಿಮಗೆ?


ನಿಜವಾಗಿ ವಹಿಸಿಕೊಂಡನಾತ ನಮ್ಮ ಬಾಧೆಗಳನು ಹೊರೆಯಂತೆ ಹೊತ್ತನಾತ ನಮ್ಮ ಕಷ್ಟಸಂಕಟಗಳನು ನಾವು ಭಾವಿಸಿದ್ದಾದರು ಏನು? ಆತ ದೇವರಿಂದ ಬಾಧಿತನೆಂದು ದಂಡನೆಗೆ ಗುರಿಯಾದವನು, ತಿರಸ್ಕೃತನಾದವನೆಂದು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು