Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:28 - ಕನ್ನಡ ಸತ್ಯವೇದವು C.L. Bible (BSI)

28 ಉಳಿಸಬೇಡವರನು ಜೀವಬಾಧ್ಯರ ಪಟ್ಟಿಯಲಿ I ಸೇರಿಸಬೇಡವರನು ಸಜ್ಜನರ ಸಂಖ್ಯೆಯಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆದು ಹಾಕು, ಸದ್ಭಕ್ತರ ಹೆಸರಿನ ಸಂಗಡ ಅವರ ಹೆಸರು ಬರೆಯಲ್ಪಡದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆಯಲ್ಪಡಲಿ; ಸದ್ಭಕ್ತರ ಹೆಸರಿನ ಸಂಗಡ ಅವರದು ಬರೆಯಲ್ಪಡದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಜೀವಬಾಧ್ಯರ ಪುಸ್ತಕದಿಂದ ಅವರ ಹೆಸರುಗಳನ್ನು ಅಳಿಸಿಬಿಡು. ನೀತಿವಂತರ ಹೆಸರುಗಳೊಂದಿಗೆ ಅವರು ಹೆಸರುಗಳನ್ನು ಜೀವಬಾಧ್ಯರ ಪುಸ್ತಕದಲ್ಲಿ ಬರೆಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಜೀವಪುಸ್ತಕದೊಳಗಿಂದ ಅವರ ಹೆಸರು ಅಳಿದು ಹೋಗಲಿ. ನೀತಿವಂತರ ಸಂಗಡ ಅವರ ಹೆಸರು ಬರೆಯದೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:28
12 ತಿಳಿವುಗಳ ಹೋಲಿಕೆ  

ನನ್ನ ಜೊತೆ ಸೇವಕನಾದ ನೀನು ಈ ಮಹಿಳೆಯರಿಗೆ ನೆರವಾಗಬೇಕು. ಇವರು ಸಹ ಕ್ಲೇಮಂತನು ಮತ್ತು ಇತರ ಸಹಸೇವಕರೊಡನೆ ನನ್ನೊಂದಿಗೆ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ಸಹಕರಿಸಿರುತ್ತಾರೆ. ಇವರೆಲ್ಲರ ಹೆಸರುಗಳು ನಿತ್ಯಜೀವಬಾಧ್ಯರ ಪಟ್ಟಿಯಲ್ಲಿವೆ.


ಆದರೂ ದೆವ್ವಗಳು ನಿಮಗೆ ಅಧೀನವಾಗಿವೆಯೆಂದು ಸಂತೋಷಪಡುವುದಕ್ಕಿಂತ ನಿಮ್ಮ ಹೆಸರುಗಳು ಸ್ವರ್ಗದಲ್ಲಿ ಲಿಖಿತವಾಗಿವೆ ಎಂದು ಸಂತೋಷಪಡಿ,” ಎಂದು ಹೇಳಿದರು.


ಸ್ವರ್ಗದಲ್ಲಿ ದಾಖಲೆಯಾಗಿರುವ ಜೇಷ್ಠಪುತ್ರನ ಸಭೆಗೆ; ನೀವು ಬಂದಿರುವುದು ಸಕಲ ಮಾನವರ ನ್ಯಾಯಮೂರ್ತಿಯಾದ ದೇವರ ಸನ್ನಿಧಿಗೆ; ಸಿದ್ಧಿಗೆ ಬಂದ ಸತ್ಪುರುಷರ ಆತ್ಮಗಳ ಸಮೂಹಕ್ಕೆ;


ಮಿಥ್ಯದರ್ಶನ ಹೊಂದಿ ಸುಳ್ಳು ಭವಿಷ್ಯ ಹೇಳುವ ಪ್ರವಾದಿಗಳ ಮೇಲೆ ನಾನು ಕೈಮಾಡುವೆನು; ಅವರು ನನ್ನ ಜನರ ಹಿರಿಯ ಸಭೆಯಲ್ಲಿ ಸೇರಕೂಡದು, ಇಸ್ರಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರು ಲಿಖಿತವಾಗಬಾರದು, ಅವರು ಇಸ್ರಯೇಲ್ ನಾಡನ್ನು ಪ್ರವೇಶಿಸಲೂಬಾರದು. ನಾನೇ ಸರ್ವೇಶ್ವರನಾದ ದೇವರು ಎಂದು ನಿಮಗೆ ಗೊತ್ತಾಗುವುದು.


ಭೂನಿವಾಸಿಗಳೆಲ್ಲರೂ ಅಂದರೆ, ಜಗತ್ತು ಸೃಷ್ಟಿ ಆಗುವ ಮೊದಲೇ ಯಾರಯಾರ ಹೆಸರುಗಳು ವಧೆಯಾದ ಯಜ್ಞದ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ, ಅಂಥವರೆಲ್ಲರೂ ಆ ಮೃಗವನ್ನು ಆರಾಧಿಸುವರು.


ಯಾವನಾದರೂ ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳಲ್ಲಿ ಏನನ್ನಾದರೂ ತೆಗೆದುಹಾಕಿದರೆ, ಈ ಪುಸ್ತಕದಲ್ಲಿ ವಿವರಿಸಿರುವ ಜೀವವೃಕ್ಷದಲ್ಲಿಯೂ ಪವಿತ್ರನಗರದಲ್ಲಿಯೂ ಅವನಿಗೆ ಸಿಗುವ ಪಾಲನ್ನು ದೇವರು ತೆಗೆದುಬಿಡುವರು.”


ಜಯಹೊಂದುವವನು ಹೀಗೆ ಶ್ವೇತಾಂಬರನಾಗುವನು. ಜೀವಬಾಧ್ಯರ ಪಟ್ಟಿಯಿಂದ ಅವನ ಹೆಸರನ್ನು ನಾನು ಅಳಿಸಿಹಾಕುವುದಿಲ್ಲ. ನನ್ನ ಪಿತನ ಸಾನ್ನಿಧ್ಯದಲ್ಲಿಯೂ ಅವರ ದೂತರ ಮುಂದೆಯೂ ಅವನು ನನ್ನವನೆಂದು ನಾನು ಒಪ್ಪಿಕೊಳ್ಳುತ್ತೇನೆ.


ಹಳೆಯ ಕಷ್ಟದುಃಖಗಳು ಇನ್ನು ಕಣ್ಮರೆಯಾಗಿಹೋಗುವುವು: ನಾಡಿನಲ್ಲಿ ಆಶೀರ್ವಾದ ಪಡೆಯುವವನು ಸತ್ಯಸ್ವರೂಪನಾದ ದೇವರ ಹೆಸರಿನಲ್ಲಿ ಆಶೀರ್ವಾದ ಪಡೆಯುವನು. ಶಪಥ ಮಾಡುವವನು ಸತ್ಯಸ್ವರೂಪನಾದ ದೇವರ ಹೆಸರಿನಲ್ಲಿ ಶಪಥಮಾಡುವನು.”


ಆಗ ಸರ್ವೇಶ್ವರ: “ಈ ಮಗುವಿಗೆ ‘ಲೋ-ಅಮ್ಮಿ’ ಎಂದು ನಾಮಕರಣ ಮಾಡು. ಏಕೆಂದರೆ, ಇನ್ನು ನೀವು ನನ್ನ ಪ್ರಜೆಯಲ್ಲ; ನಾನು ನಿಮ್ಮ ದೇವರಲ್ಲ,” ಎಂದರು.


ಸಿಯೋನಿನಲ್ಲಿ ಉಳಿದವರು, ಜೆರುಸಲೇಮಿನಲ್ಲಿ ಮಿಕ್ಕವರು - ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿರುವ ಜೆರುಸಲೇಮಿನ ನಿವಾಸಿಗಳೆಲ್ಲರು - ಪವಿತ್ರರೆನಿಸಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು