Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:3 - ಕನ್ನಡ ಸತ್ಯವೇದವು C.L. Bible (BSI)

3 ಕಾಯ್ದು ಕಾಯ್ದು ಕಣ್ಣು ಗುಳಿಬಿದ್ದಿದೆ ದೇವಾ, ನಿನಗಾಗಿ I ಗಂಟಲು ಒಣಗಿದೆ, ಜೀವ ಸೊರಗಿದೆ, ನಿನ್ನ ಕೂಗಿ ಕೂಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮೊರೆಯಿಟ್ಟು ಬೇಸತ್ತು ಹೋಗಿದ್ದೇನೆ; ಗಂಟಲು ಒಣಗಿಹೋಯಿತು. ನನ್ನ ದೇವರನ್ನು ನಿರೀಕ್ಷಿಸುತ್ತಾ ಕಣ್ಣುಗಳು ಕ್ಷೀಣಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮೊರೆಯಿಟ್ಟಿಟ್ಟು ಬೇಸತ್ತು ಹೋಗಿದ್ದೇನೆ; ಗಂಟಲು ಒಣಗಿಹೋಯಿತು. ನನ್ನ ದೇವರನ್ನು ನಿರೀಕ್ಷಿಸುತ್ತಾ ದೃಷ್ಟಿ ಮಂದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಸಹಾಯಕ್ಕಾಗಿ ಕೂಗಿಕೂಗಿ ಬಲಹೀನನಾಗಿರುವೆ. ನನ್ನ ಗಂಟಲು ನೋಯುತ್ತಿದೆ. ನಿನ್ನ ಸಹಾಯಕ್ಕಾಗಿ ಎದುರುನೋಡುತ್ತಾ ನನ್ನ ಕಣ್ಣುಗಳು ನೋಯುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ಮೊರೆಯಿಟ್ಟು ದಣಿದಿದ್ದೇನೆ. ನನ್ನ ಗಂಟಲು ಒಣಗಿದೆ. ನಾನು ದೇವರನ್ನು ಎದುರು ನೋಡುವುದರಿಂದ ನನ್ನ ಕಣ್ಣು ಕ್ಷೀಣವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:3
18 ತಿಳಿವುಗಳ ಹೋಲಿಕೆ  

ದಣಿದಿರುವೆ ನಾ ದುಃಖದಿಂದ ನರಳಿ ನರಳಿ I ತೊಯ್ದಿದೆ ಹಾಸಿಗೆ ಇರುಳಿರುಳ ಕಂಬನಿಯಲಿ I ತೇಲಿದೆ ಮಂಚ ಈ ಕಣ್ಣೀರ ಪ್ರವಾಹದಲಿ II


ಕಿಚುಗುಟ್ಟಿದೆ ನಾ ಬಾನಕ್ಕಿ-ಬಕಗಳಂತೆ ಗುಬ್ಬಳಿಸಿದೆ ನಾ ಪಾರಿವಾಳದಂತೆ ಕಂಗೆಟ್ಟೆ, ನಾ ಮೇಲೆ ಮೇಲಕ್ಕೆ ನೋಡುತಾ ಸರ್ವೇಶ್ವರಾ, ನಾನಿರುವೆ ಬಾಧೆಪಡುತಾ ನೀ ಎನಗೆ ನೆರವಾಗಲು ಬಾ ಎನ್ನುತಾ.


ಮಂದವಾಯಿತೆನ್ನ ನೇತ್ರ ನಿನ್ನ ರಕ್ಷಣೆಗಾಗಿ ಕಾಯುತ I ನೀತಿಯುತ ನಿನ್ನ ನುಡಿ ಈಡೇರುವುದನು ನಿರೀಕ್ಷಿಸುತ II


ನಿನ್ನ ವಾಗ್ದಾನದ ನಿರೀಕ್ಷೆಯಲೆ ನನ್ನ ಕಣ್ಣು ಸೊರಗಿವೆ I “ನನಗೆಂದು ನೀಡುವೆ ಸಾಂತ್ವನ?” ಎಂದು ನಾ ಕೇಳುತ್ತಿರುವೆ II


ನಿಮ್ಮ ಗಂಡು ಹೆಣ್ಣು ಮಕ್ಕಳನ್ನು ನಿಮ್ಮ ಮುಂದೆಯೇ ಹಿಡಿದು ಅನ್ಯರಿಗೆ ವಶಪಡಿಸುವರು; ನೀವು ಹಗಲೆಲ್ಲಾ ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಕಂಗೆಡುವಿರಿ; ಆದರೆ ನಿಮ್ಮ ಯತ್ನವೇನೂ ಸಾಗುವುದಿಲ್ಲ.


ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು‍ ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.


ಇದಾದ ಮೇಲೆ ಯೇಸು ಸ್ವಾಮಿ ನೆರವೇರಬೇಕಾದುದೆಲ್ಲವೂ ನೆರವೇರಿದೆ ಎಂದು ತಿಳಿದು ಪವಿತ್ರಗ್ರಂಥದಲ್ಲಿ ಬರೆದುದು ಈಡೇರುವಂತೆ, “ನನಗೆ ದಾಹವಾಗಿದೆ,” ಎಂದು ನುಡಿದರು.


ಕಂಬನಿಗರೆದು ಇಂಗಿಹೋಗಿದೆ ಕಣ್ಣು ಕುದಿಯುತ್ತಿದೆ ನನ್ನೊಳಗೆ ಕರುಳು ! ನನ್ನ ಜನತೆಯೆಂಬ ಯುವತಿ ಹಾಳಾಗಿ ಮಕ್ಕಳು ಹಾದಿಬೀದಿಗಳಲ್ಲಿ ಮೂರ್ಛೆಹೋಗಿ ನನ್ನ ಕರುಳು ಕರಗಿಹೋಗಿದೆ ನೀರಾಗಿ.


ಹಸಿದ ನನಗೆ ವಿಷಬೆರೆತ ಆಹಾರವಿತ್ತರಯ್ಯಾ I ಬಾಯಾರಿದೆನಗೆ ಕಹಿ ಕಾಡಿಯನು ಕೊಟ್ಟರಯ್ಯಾ II


ಇಂತಿರಲು ಪ್ರಭು, ನಾನೇತಕೆ ಕಾದಿರಬೇಕು? I ನೀನೆ ಅಲ್ಲವೆ ನನಗೆ ನಂಬಿಕೆ, ಇದು ಸಾಕು II


ನಿರ್ದೋಷ, ನಿಷ್ಕಪಟ ನಡತೆ ನನಗೆ ರಕ್ಷೆ I ನೀನೆ ಪ್ರಭು ನನಗಿರುವ ದೃಢ ನಿರೀಕ್ಷೆ II


ಎನ್ನ ಗೋಣು ಒಣಗಿಹೋಗಿದೆ ಒಡೆದ ಮಡಕೆಯಂತೆ I ಅಂಗುಳಕೆ ಜಿಹ್ವೆ ಅಂಟಿದೆ; ಮಣ್ಣಿಗೆನ್ನ ಸೇರಿಸಿದೆ II


ಹಗಲೆಲ್ಲ ಕೂಗಿಕೊಂಡರೂ ನೀ ಬರಲಿಲ್ಲವಲ್ಲಾ I ಇರುಳೆಲ್ಲಾ ಮೊರೆಯಿಟ್ಟರೂ ನೆಮ್ಮದಿಯಿಲ್ಲವಲ್ಲಾ II


ಕಣ್ಣೀರು ಸುರಿಸಿ ನನ್ನ ಮುಖ ಕೆಂಪೇರಿದೆ ನನ್ನ ಕಣ್ಣುಗಳಿಗೆ ಕಾರಿರುಳು ಕವಿದಿದೆ.


ದುರ್ಜನರು ನಿರಾಶೆಯಿಂದ ಕಂಗೆಡುವರು ಪ್ರಾಣಬಿಡಬೇಕೆಂಬುದೇ ಅವರ ಆಶೆಯಾಗಿರುವುದು.”


ಬರಿಸಿದನು ನವಗೀತೆಯನು, ದೇವಸ್ತುತಿಯನು ನನ್ನ ಬಾಯಲಿ I ಇದ ಕಂಡವರು ಭಯಪಡುವರು, ಇಡುವರು ಭರವಸೆ ಪ್ರಭುವಿನಲಿ II


ನಿನ್ನ ಕಡುಕೋಪ ಎರಗಿಬಿಟ್ಟಿದೆ ನನ್ನ ಮೇಲೆ II ನನ್ನ ಬಾಧಿಸುತ್ತಿವೆ ಅದರ ಕಲ್ಲೋಲ ಮಾಲೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು