Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:33 - ಕನ್ನಡ ಸತ್ಯವೇದವು C.L. Bible (BSI)

33 ಬಡಬಗ್ಗರ ಮೊರೆಗೆ ಪ್ರಭು ಕಿವಿಗೊಡದಿರನು I ಸೆರೆಯಲ್ಲಿಹ ತನ್ನವರನು ತಿರಸ್ಕರಿಸನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಯೆಹೋವನು ಬಡವರ ಮೊರೆಗೆ ಲಕ್ಷ್ಯಕೊಡುವನು; ಸೆರೆಯಲ್ಲಿರುವ ತನ್ನವರನ್ನು ತಿರಸ್ಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಯೆಹೋವನು ಬಡವರ ಮೊರೆಗೆ ಲಕ್ಷ್ಯಕೊಡುವನು; ಸೆರೆಯಲ್ಲಿರುವ ತನ್ನವರನ್ನು ತಿರಸ್ಕರಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಯೆಹೋವನು ಬಡವರಿಗೂ ನಿಸ್ಸಹಾಯಕರಿಗೂ ಕಿವಿಗೊಡುತ್ತಾನೆ. ಸೆರೆಯಲ್ಲಿರುವ ತನ್ನ ಜನರನ್ನು ಸಹ ಕಡೆಗಣಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಯೆಹೋವ ದೇವರು ಬಡವರ ಮೊರೆಗೆ ಕಿವಿಗೊಡುತ್ತಾರೆ. ಸೆರೆಯಲ್ಲಿರುವ ತಮ್ಮ ಜನರನ್ನು ತಿರಸ್ಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:33
20 ತಿಳಿವುಗಳ ಹೋಲಿಕೆ  

ನೀಡುವನು ಮಡದಿ ಮಕ್ಕಳನು ಒಂಟಿಗನಿಗೆ I ಬಿಡುಗಡೆಯ ಭಾಗ್ಯವನು ನೊಂದ ಬಂಧಿಗಳಿಗೆ I ದ್ರೋಹಿಗಳಿಗಾದರೋ ಮರಳುಗಾಡೇ ಮಾಳಿಗೆ II


ದೊರಕಿಸುವನು ನ್ಯಾಯ ದಲಿತರಿಗೆ I ಒದಗಿಸುವನು ಆಹಾರ ಹಸಿದವರಿಗೆ I ನೀಡುವನು ಬಿಡುಗಡೆ ಬಂಧಿತರಿಗೆ II


ಬಡವರ ಬವಣೆ ತಿಳಿಯಿತೆನಗೆ; ದಲಿತರ ನರಳಾಟ ಕೇಳಿಸಿತೆನಗೆ I ಎದ್ದು ಬರುವೆ, ಹಗೆಗಳಿಂದವರನು ಉದ್ಧರಿಸುವೆ” ಇದು ಪ್ರಭುವಿನ ಹೇಳಿಕೆ II


ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ.


ಅನ್ಯಜನರಾದ ನಿಮ್ಮ ನಿಮಿತ್ತ ಯೇಸುಕ್ರಿಸ್ತರ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನೆಂದರೆ:


“ದೇವರಾತ್ಮ ನನ್ನ ಮೇಲಿದೆ ದೀನದಲಿತರಿಗೆ ಶುಭಸಂದೇಶವನ್ನು ಬೋಧಿಸಲೆಂದು ಅವರೆನ್ನನು ಅಭಿಷೇಕಿಸಿದ್ದಾರೆ; ಬಂಧಿತರಿಗೆ ಬಿಡುಗಡೆಯನ್ನು, ಅಂಧರಿಗೆ ದೃಷ್ಟಿದಾನವನ್ನು ಪ್ರಕಟಿಸಲೂ ಶೋಷಿತರಿಗೆ ಸ್ವಾತಂತ್ರ್ಯ ನೀಡಲೂ


ಆಲಿಸಿದಾತನು ಬಂಧಿತರ ಗೋಳಾಟವನು I ಬಿಡಿಸಿಹನು ಮರಣತೀರ್ಪಿಗೆ ಗುರಿಯಾದವರನು II


ತಿರಸ್ಕರಿಸನಾತ ನಿರ್ಗತಿಕರ ಮೊರೆಯನು I ನೆರವೇರಿಸದೆ ಬಿಡನು ಅವರ ಕೋರಿಕೆಯನು II


ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು I ಸರ್ವಾಪತ್ತಿನಿಂದವನು ಮುಕ್ತಗೊಂಡನು II


ದೀನ ಕೋರಿಕೆಯನು ಪ್ರಭು, ತೀರಿಸುವೆ I ಹುರಿದುಂಬಿಸಿ, ಅವರ ಮೊರೆಗೆ ಕಿವಿಗೊಡುವೆ II


ಇವುಗಳನ್ನೆಲ್ಲ ನಿರ್ಮಿಸಿದ್ದು ನನ್ನ ಕೈಯೇ. ಹೌದು, ಇವುಗಳೆಲ್ಲ ಆದುವು ನನ್ನಿಂದಲೇ . ವಿನಮ್ರನು, ಪಶ್ಚಾತ್ತಾಪ ಪಡುವವನು, ನನ್ನ ಮಾತಿನಲ್ಲಿ ಭಯಭಕ್ತಿಯುಳ್ಳವನು, ಇಂಥವರೇ ನನಗೆ ಮೆಚ್ಚುಗೆಯಾದವರು.


ದೇವರಾಜ್ಞೆಯನು ವಿರೋಧಿಸಿದ ಕಾರಣ I ಪರಾತ್ಪರನಾಜ್ಞೆಯನು ಹೀಗಳೆದ ಕಾರಣ II


ಎಚ್ಚೆತ್ತು ಅಭಿಮುಖವಾಗುವುದು ಜಗದಾದ್ಯಂತ ಪ್ರಭುಗೆ I ಸಾಷ್ಟಾಂಗವೆರಗುವುವು ಧರೆಯ ಸರ್ವಜನಾಂಗಗಳು ಆತನಿಗೆ II


ಬನ್ನಿ, ಕೊಂಡಾಡುವ ಪ್ರಭು ದೇವನನು II ಘನಪಡಿಸೋಣ ಅವನ ಶ್ರೀನಾಮವನು II


ಇಸ್ರಯೇಲ್ ಮನೆತನಕ್ಕೆ ಸರ್ವೇಶ್ವರ ಹೇಳುವುದೇನೆಂದರೆ: “ನನ್ನನ್ನು ಅರಸಿರಿ, ನೀವು ಬದುಕುವಿರಿ.


ಸರ್ವೇಶ್ವರಸ್ವಾಮಿಗೆ ಅಭಿಮುಖರಾಗಿರಿ, ನೀವು ಬದುಕುವಿರಿ. ಇಲ್ಲವಾದರೆ ಅವರು ಬೆಂಕಿಯೋಪಾದಿ ಜೋಸೆಫನ ಮನೆತನದ ಮೇಲೆ ಎರಗಿಯಾರು. ಬೇತೇಲಿನ ಜನರನ್ನು ಭಸ್ಮಮಾಡಿಯಾರು. ಆ ಬೆಂಕಿಯನ್ನು ಯಾರೂ ಆರಿಸರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು