Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:35 - ಕನ್ನಡ ಸತ್ಯವೇದವು C.L. Bible (BSI)

35 ರಕ್ಷಿಸುವನು ದೇವನು ಆ ಸಿಯೋನ್ ಪಟ್ಟಣವನು I ಕಟ್ಟಿಸುವನು ಯೆಹೂದ ನಾಡಿನ ನಗರಗಳನು I ಸ್ವಂತವಾಗಿರಿಸಿಕೊಂಬರು ಆತನ ಪ್ರಜೆ ಅದನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ದೇವರು ಚೀಯೋನ್ ಪಟ್ಟಣವನ್ನು ರಕ್ಷಿಸಿ, ಯೆಹೂದ ದೇಶದ ನಗರಗಳನ್ನು ಕಟ್ಟಿಸುವನು; ಆತನ ಪ್ರಜೆಗಳು ಅಲ್ಲಿ ವಾಸಮಾಡುತ್ತಾ ಅದನ್ನು ಸ್ವದೇಶವನ್ನಾಗಿ ಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ದೇವರು ಚೀಯೋನ್ ಪಟ್ಟಣವನ್ನು ರಕ್ಷಿಸಿ ಯೆಹೂದದೇಶದ ನಗರಗಳನ್ನು ಕಟ್ಟಿಸುವನು; ಆತನ ಪ್ರಜೆಗಳು ಅಲ್ಲಿ ವಾಸಮಾಡುತ್ತಾ ಸ್ವದೇಶವಾಗಿ ಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಯೆಹೋವನು ಚೀಯೋನನ್ನು ರಕ್ಷಿಸುವನು! ಆತನು ಯೆಹೂದದ ಪಟ್ಟಣಗಳನ್ನು ಮತ್ತೆ ಕಟ್ಟುವನು. ಆತನ ಜನರು ಅಲ್ಲಿ ವಾಸವಾಗಿದ್ದು ಸ್ವದೇಶವಾಗಿ ಮಾಡಿಕೊಳ್ಳುವರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ದೇವರು ಚೀಯೋನನ್ನು ರಕ್ಷಿಸುವರು. ದೇವರು ಯೆಹೂದದ ಪಟ್ಟಣಗಳನ್ನು ಕಟ್ಟುವರು. ಜನರು ಅಲ್ಲಿ ವಾಸಮಾಡಿ, ಅದನ್ನು ಸ್ವಾಧೀನಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:35
17 ತಿಳಿವುಗಳ ಹೋಲಿಕೆ  

ನನ್ನ ದಾಸನ ಮಾತನ್ನಾದರೋ ದೃಢೀಕರಿಸುವವನು ನಾನೆ ನನ್ನ ದೂತರ ಯೋಜನೆಯನ್ನು ಸಫಲಗೊಳಿಸುವವನು ನಾನೆ ಜನನಿವಾಸವಾಗುವುದು ಜೆರುಸಲೇಮ್ ನಗರವು ಪುನಃ ಕಟ್ಟಲ್ಪಡುವುವು ಜುದೇಯ ಪಟ್ಟಣಗಳು. ಅಲ್ಲಿ ಹಾಳುಬಿದ್ದವುಗಳು ಮರಳಿ ಎದ್ದು ನಿಲ್ಲುವುವು.


ಸಿಯೋನಿಗೆ ದೇವಾ, ಶುಭವನು ಕರುಣಿಸು I ಜೆರುಸಲೇಮ್ ಕೋಟೆಯನು ಮರಳಿ ಎಬ್ಬಿಸು II


ಬರಮಾಡುವೆನು ಮುಕ್ತಿಯನು ಹತ್ತಿರಕೆ ಅದಿನ್ನು ದೂರವಿರದು ನಿಮಗೆ. ತಡವಾಗದು ನಿಮಗೆ ನನ್ನ ರಕ್ಷಣೆ ಸಾಧಿಸುವೆನು ರಕ್ಷಣೆಯನ್ನು ಸಿಯೋನಿನಲೇ, ಬೀರುವೆನು ನನ್ನ ಮಹಿಮೆಯನ್ನು ಇಸ್ರಯೇಲ ಮೇಲೆ.”


“ಆದರೆ ತಪ್ಪಿಸಿಕೊಂಡವರು ಸಿಯೋನ್ ಪರ್ವತದ ಮೇಲೆ ಇರುವರು. ಅದು ಪುಣ್ಯಕ್ಷೇತ್ರ ಎನಿಸಿಕೊಳ್ಳುವುದು; ಯಕೋಬನ ವಂಶಜರು ತಮ್ಮ ಸ್ವತ್ತನ್ನು ಮರಳಿ ಅನುಭವಿಸುವರು.


ಅನಂತರ ಸಿಯೋನ್ ಬೆಟ್ಟದ ಮೇಲೆ ಯಜ್ಞದ ಕುರಿಮರಿಯಾದಾತನು, ನಿಂತಿರುವುದನ್ನು ಕಂಡೆ. ಆತನ ಸಂಗಡ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. ಇವರು ತಮ್ಮ ಹಣೆಯ ಮೇಲೆ ಯಜ್ಞದ ಕುರಿಮರಿಯ ಮತ್ತು ಆತನ ಪಿತನ ನಾಮಾಂಕಿತವನ್ನು ಬರೆಸಿಕೊಂಡಿದ್ದರು.


ಹೊರನಾಡಿನ ರಾಯಭಾರಿಗಳಿಗೆ ನಮ್ಮ ಉತ್ತರವೇನು? “ಸರ್ವೇಶ್ವರ ಸ್ವಾಮಿ ಸ್ಥಾಪಿಸಿಹರು ಸಿಯೋನನ್ನು, ದೀನದಲಿತರು ಆಶ್ರಯಿಸಿಕೊಳ್ಳುವರು ಅದನ್ನು.”


ಏಕೆನೆ ಪುನರುದ್ಧರಿಸುವನು ಸಿಯೋನನು I ಪ್ರತ್ಯಕ್ಷಮಾಡುವನಾತ ತನ್ನ ಮಹಿಮೆಯನು II


ಎದ್ದು ಸಿಯೋನಿಗೆ ತೋರು ಸೌಜನ್ಯತೆ I ಅದಕ್ಕೆ ದಯೆತೋರಿಸುವ ಸಮಯವಿದೇ I ನಿಯಮಿತ ಕಾಲವಿದೋ ಬಂದುಬಿಟ್ಟಿದೆ II


ಪ್ರಭು, ನಿನ್ನನು ಸ್ತುತಿಪುದು ಸೃಷ್ಟಿಯೆಲ್ಲವು I ಕೊಂಡಾಡುವುದು ನಿನ್ನನು ಭಕ್ತ ಸಮೂಹವು II


ಸಲಹುವನು ತನ್ನನು ಪ್ರೀತಿಸುವವರೆಲ್ಲರನು I ನಾಶಮಾಡುವನು ದುರ್ಮಾರ್ಗಿಗಳೆಲ್ಲರನು II


ಉನ್ನತೋನ್ನತ ಆಕಾಶವೇ, ಹೊಗಳು ಆತನನು I ಅದರ ಮೇಲಿನ ಜಲರಾಶಿಗಳೇ, ಹೊಗಳಿ ಆತನನು II


ಜಯ ಜಯಕಾರ ಮಾಡು ಓ ಆಕಾಶವೇ, ಜಯಘೋಷ ಮಾಡು ಭೂ ತಳವೇ, ಹರ್ಷಧ್ವನಿಗೈಯಿರಿ ಬೆಟ್ಟಗುಡ್ಡಗಳೇ ವನವೃಕ್ಷಗಳೇ. ವಿಮೋಚಿಸಿದನು ಸರ್ವೇಶ್ವರ ಯಕೋಬನನು, ಇಸ್ರಯೇಲನ್ನು ರಕ್ಷಿಸಿ ಪ್ರಚಾರಗೊಳಿಸಿದನು ತನ್ನ ಮಹಿಮೆಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು