Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:7 - ಕನ್ನಡ ಸತ್ಯವೇದವು C.L. Bible (BSI)

7 ನಿನಗಾಗಿಯೇ ನಾ ನಿಂದೆಗೊಳಗಾದೆನಯ್ಯಾ I ನಾಚಿಕೆಯಿಂದಲೆ ಮುಖ ಮುಚ್ಚಿಕೊಂಡೆನಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿನಗೋಸ್ಕರವಾಗಿ ನಿಂದೆಗೆ ಒಳಗಾದೆನಲ್ಲಾ; ನಾಚಿಕೆಯು ನನ್ನ ಮುಖವನ್ನು ಕವಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿನಗೋಸ್ಕರವಾಗಿ ನಿಂದೆಗೆ ಒಳಗಾದೆನಲ್ಲಾ; ನಾಚಿಕೆಯು ನನ್ನ ಮುಖವನ್ನು ಕವಿದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾಚಿಕೆಯು ನನ್ನ ಮುಖವನ್ನು ಕವಿದಿದೆ. ನಿನಗೋಸ್ಕರವಾಗಿ ಈ ನಾಚಿಕೆಯನ್ನು ಹೊತ್ತುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನು ನಿಮ್ಮ ನಿಮಿತ್ತ ನಿಂದೆಗೆ ಒಳಗಾಗಿದ್ದೇನೆ. ಅವಮಾನವು ನನ್ನ ಮುಖವನ್ನು ಮುಚ್ಚಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:7
13 ತಿಳಿವುಗಳ ಹೋಲಿಕೆ  

ಅದಕ್ಕೆ ನಾನು : “ಸರ್ವೇಶ್ವರಾ, ನೀವು ಎಲ್ಲವನ್ನು ಬಲ್ಲವರು. ನನ್ನನ್ನು ನೆನಪಿಗೆ ತಂದುಕೊಂಡು ನೆರವುನೀಡಿ. ನನಗಾಗಿ ನನ್ನ ಶತ್ರುಗಳಿಗೆ ಮುಯ್ಯಿತೀರಿಸಿರಿ. ಅವರಿಗೆ ಹೆಚ್ಚು ತಾಳ್ಮೆತೋರಿ ನನ್ನನ್ನು ನಿರ್ಮೂಲಮಾಡಬೇಡಿ. ನಿಮ್ಮ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆ ಎಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿ.


ಬೆನ್ನುಕೊಟ್ಟೆನು ಹೊಡೆಯುವವರಿಗೆ ಗಡ್ಡ ಒಡ್ಡಿದೆನು ಅದನ್ನು ಕೀಳುವವರಿಗೆ ಮುಖ ಮರೆಮಾಡಲಿಲ್ಲ ಉಗುಳುಬುಗುಳಿಗೆ.


ಎಣಿಕೆಯಾಗಿಹೆವು ಕೊಯ್ಗುರಿಗಳಂತೆ ನಾವೆಲ್ಲ I ಬಲಿಯಾಗುತಿಹೆವು ನಿನ್ನ ನಿಮಿತ್ತವೆ ದಿನವೆಲ್ಲ II


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ಕಡೆಗೆ ಹೆರೋದನು ತನ್ನ ಸೈನಿಕರೊಡನೆ ಸೇರಿ ಯೇಸುವನ್ನು ಅಣಕಿಸಿ ಅವಮಾನಪಡಿಸಿದನು. ರಾಜವಸ್ತ್ರವನ್ನು ವೇಷಭೂಷಣವಾಗಿ ಅವರಿಗೆ ತೊಡಿಸಿ ಪಿಲಾತನ ಬಳಿಗೆ ಮರಳಿ ಕಳುಹಿಸಿಕೊಟ್ಟನು.


ಧಿಕ್ಕರಿಸಲ್ಪಟ್ಟವನು, ಮನುಜರಿಂದ ತಿರಸ್ಕೃತನು, ದುಃಖಕ್ರಾಂತನು, ಕಷ್ಟಸಂಕಟ ಅನುಭವಿಸಿದವನು. ನೋಡಿದವರು ಮುಖ ತಿರುಗಿಸುವಷ್ಟು ನಿಂದಕನು ! ನಾವೋ ಲಕ್ಷ್ಯಕ್ಕೂ ತೆಗೆದುಕೊಳ್ಳಲಿಲ್ಲ ಆತನನು.


ನನ್ನ ಕಣ್ಮುಂದಿದೆ ಈ ಅವಮಾನ ದಿನವೆಲ್ಲ I ಲಜ್ಜೆಯಿಂದ ನಾ ಮುಖ ಮುಚ್ಚಿಕೊಳ್ಳುವಂತಾಗಿದೆಯಲ್ಲಾ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು