Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:8 - ಕನ್ನಡ ಸತ್ಯವೇದವು C.L. Bible (BSI)

8 ನನ್ನವರಿಗೇ ನಾನನ್ಯನಾದೆನಯ್ಯಾ I ಒಡ ಹುಟ್ಟಿದವರಿಗೇ ಹೊರಗಿನವನಾದೆನಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನನ್ನ ಅಣ್ಣತಮ್ಮಂದಿರಿಗೆ ಅಪರಿಚಿತನಂತಾದೆನು; ಒಡಹುಟ್ಟಿದವರಿಗೆ ಪರದೇಶಿಯಂತೆ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನನ್ನ ಅಣ್ಣತಮ್ಮಂದಿರಿಗೆ ಹೆರನಂತಾದೆನು; ಒಡಹುಟ್ಟಿದವರಿಗೆ ಪರಕೀಯನಂತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನನ್ನ ಸಹೋದರರು ನನ್ನನ್ನು ಅಪರಿಚಿತನಂತೆ ಕಾಣುತ್ತಾರೆ. ನನ್ನ ತಾಯಿಯ ಪುತ್ರರು ನನ್ನನ್ನು ಪರಕೀಯನಂತೆ ಕಾಣುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನನ್ನ ಸಹೋದರರಿಗೆ ಅನ್ಯನಾಗಿದ್ದೇನೆ. ನನ್ನ ಒಡಹುಟ್ಟಿದವರಿಗೇ ಪರಕೀಯನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:8
18 ತಿಳಿವುಗಳ ಹೋಲಿಕೆ  

ಶತ್ರುಗಳ ದೂಷಣೆಗೆ ಗುರಿಯಾದೆ, ನೆರೆಯವರಿಗೆ ನಿಂದಾಸ್ಪದನಾದೆ I ಮಿತ್ರರೂ ಬೆದರುವಂತಾದೆ; ದಾರಿಹೋಕರು ದೂರವಾಗುವಂತಾದೆ II


ಅವರು ತಮ್ಮ ಸ್ವದೇಶಕ್ಕೆ ಬಂದರು; ಸ್ವಜನರೇ ಅವರನ್ನು ಬರಮಾಡಿಕೊಳ್ಳದೆಹೋದರು.


ಅವರ ಸೋದರರಿಗೆ ಕೂಡ ಅವರಲ್ಲಿ ವಿಶ್ವಾಸವಿರಲಿಲ್ಲ.


ನನ್ನ ಜಾಡ್ಯ ನೋಡಿ ದೂರ ಸರಿದರು ನೆಂಟರಿಷ್ಟರು I ಬಳಿಬಾರದೆ ಅಲ್ಲೇ ನಿಂತರು ಬಂಧು ಬಳಗದವರು II


ಧಿಕ್ಕರಿಸಲ್ಪಟ್ಟವನು, ಮನುಜರಿಂದ ತಿರಸ್ಕೃತನು, ದುಃಖಕ್ರಾಂತನು, ಕಷ್ಟಸಂಕಟ ಅನುಭವಿಸಿದವನು. ನೋಡಿದವರು ಮುಖ ತಿರುಗಿಸುವಷ್ಟು ನಿಂದಕನು ! ನಾವೋ ಲಕ್ಷ್ಯಕ್ಕೂ ತೆಗೆದುಕೊಳ್ಳಲಿಲ್ಲ ಆತನನು.


ದಾವೀದನು ಜನರ ಸಂಗಡ ಹೀಗೆ ಮಾತಾಡುವುದನ್ನು ಅವನ ಹಿರಿಯ ಅಣ್ಣ ಎಲೀಯಾಬನು ಕೇಳಿದನು. ದಾವೀದನ ಮೇಲೆ ಅವನು ಸಿಟ್ಟುಗೊಂಡು, “ನೀನು ಇಲ್ಲಿಗೆ ಬಂದುದೇಕೆ? ಅಡವಿಯಲ್ಲಿರುವ ನಾಲ್ಕಾರು ಕುರಿಗಳನ್ನು ಯಾರಿಗೊಪ್ಪಿಸಿ ಬಂದೆ? ನಿನ್ನ ಸೊಕ್ಕು, ತುಂಟತನ ನನಗೆ ಗೊತ್ತಿದೆ. ನೀನು ಕದನ-ಕುಚೇಷ್ಟೆ ನೋಡಬಂದಿರುವೆಯಷ್ಟೇ,” ಎಂದು ಗದರಿಸಿದನು.


ಆದರೆ ಪವಿತ್ರಗ್ರಂಥದ ಪ್ರವಾದನೆಗಳು ಈಡೇರಲೆಂದೇ ಇದೆಲ್ಲಾ ಜರುಗಿದೆ,” ಎಂದರು. ಆಗ ಶಿಷ್ಯರೆಲ್ಲರೂ ಯೇಸುವನ್ನು ತೊರೆದು ಪಲಾಯನಮಾಡಿದರು.


ನಿಂದಿಸುತಿಹರು ಪ್ರಭು, ವೈರಿಗಳು ನಿನ್ನಭಿಷಿಕ್ತನನು I ಹೆಜ್ಜೆಹೆಜ್ಜೆಗು ಅವಮಾನಿಸುತಿಹರು ಶತ್ರುಗಳವನನು I ಆಮೆನ್, ಆಮೆನ್, ಪ್ರಭುವಿಗೆ ಸರ್ವದಾ ಧನ್ಯವಾದವು II


ಬೆನ್ನುಕೊಟ್ಟೆನು ಹೊಡೆಯುವವರಿಗೆ ಗಡ್ಡ ಒಡ್ಡಿದೆನು ಅದನ್ನು ಕೀಳುವವರಿಗೆ ಮುಖ ಮರೆಮಾಡಲಿಲ್ಲ ಉಗುಳುಬುಗುಳಿಗೆ.


ನಿಜವಾಗಿ ವಹಿಸಿಕೊಂಡನಾತ ನಮ್ಮ ಬಾಧೆಗಳನು ಹೊರೆಯಂತೆ ಹೊತ್ತನಾತ ನಮ್ಮ ಕಷ್ಟಸಂಕಟಗಳನು ನಾವು ಭಾವಿಸಿದ್ದಾದರು ಏನು? ಆತ ದೇವರಿಂದ ಬಾಧಿತನೆಂದು ದಂಡನೆಗೆ ಗುರಿಯಾದವನು, ತಿರಸ್ಕೃತನಾದವನೆಂದು!


ಅದಕ್ಕೆ ನಾನು : “ಸರ್ವೇಶ್ವರಾ, ನೀವು ಎಲ್ಲವನ್ನು ಬಲ್ಲವರು. ನನ್ನನ್ನು ನೆನಪಿಗೆ ತಂದುಕೊಂಡು ನೆರವುನೀಡಿ. ನನಗಾಗಿ ನನ್ನ ಶತ್ರುಗಳಿಗೆ ಮುಯ್ಯಿತೀರಿಸಿರಿ. ಅವರಿಗೆ ಹೆಚ್ಚು ತಾಳ್ಮೆತೋರಿ ನನ್ನನ್ನು ನಿರ್ಮೂಲಮಾಡಬೇಡಿ. ನಿಮ್ಮ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆ ಎಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು