Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:9 - ಕನ್ನಡ ಸತ್ಯವೇದವು C.L. Bible (BSI)

9 ಅಗ್ನಿಯಂತೆನ್ನ ದಹಿಸುತ್ತಿದೆ ನಿನ್ನಾಲಯದಭಿಮಾನ I ಎನ್ನ ಮೇಲೆರಗಿದೆ ನಿನ್ನ ಕಡುದ್ರೋಹಿಗಳ ದೂಷಣ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿನ್ನ ಆಲಯದ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸಿದೆ. ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಂದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿನ್ನ ಆಲಯಾಭಿಮಾನವು ನನ್ನನ್ನು ಬೆಂಕಿಯಂತೆ ದಹಿಸಿದೆ. ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಂದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಿನ್ನ ಆಲಯಾಭಿಮಾನವು ನನ್ನನ್ನು ಬೆಂಕಿಯಂತೆ ದಹಿಸುತ್ತಿದೆ. ನಿನ್ನನ್ನು ಗೇಲಿಮಾಡುವ ಜನರಿಂದ ನನಗೆ ಅಪಮಾನವಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಏಕೆಂದರೆ ನಿಮ್ಮ ಆಲಯದ ಮೇಲಿನ ಆಸಕ್ತಿಯು ಬೆಂಕಿಯಂತೆ ನನ್ನನ್ನು ದಹಿಸಿಬಿಟ್ಟಿದೆ. ನಿಮ್ಮನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:9
11 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸು ತಮ್ಮ ಸ್ವಂತ ಹಿತವನ್ನು ಎಂದಿಗೂ ಬಯಸಲಿಲ್ಲ. “ದೇವರೇ, ನಿಮ್ಮನ್ನು ದೂಷಿಸಿದವರ ದೂಷಣೆಗಳು ನನ್ನ ಮೇಲೆ ಎರಗಿವೆ,” ಎಂದು ಲಿಖಿತವಾಗಿರುವ ವಾಕ್ಯ ಅವರಿಗೆ ಅನ್ವಯಿಸುತ್ತದೆ.


ಮರೆತುಬಿಟ್ಟರು ವಿರೋಧಿಗಳು ನಿನ್ನ ವಾಕ್ಯವನು I ಎಂತಲೆ ದಹಿಸುತಿದೆ ಧರ್ಮಾಸಕ್ತಿ ಎನ್ನನು II


ಸುಲಿಗೆ ಮಾಡುತಿಹರವನನು ದಾರಿಗರೆಲ್ಲರು I ಪರಿಹಾಸ್ಯಕ್ಕೆ ಈಡುಮಾಡುತಿಹರು ನೆರೆಯವರು II


ಅದಕ್ಕೆ ಅವನು, “ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ಇಸ್ರಯೇಲರು ನಿಮ್ಮ ನಿಬಂಧನೆಯನ್ನು ಮೀರಿದ್ದಾರೆ; ಬಲಿಪೀಠಗಳನ್ನು ಕೆಡವಿಹಾಕಿದ್ದಾರೆ; ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ; ನಾನೊಬ್ಬನೇ ಉಳಿದು ನಿಮ್ಮ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿ ಇದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ,” ಎಂದು ಉತ್ತರಕೊಟ್ಟನು.


ಪವಿತ್ರಾಲಯಕ್ಕೆ ಇವುಗಳನ್ನೆಲ್ಲಾ ಸಂಗ್ರಹಿಸಿದ್ದಲ್ಲದೆ, ನನ್ನ ದೇವರಾಲಯದ ಮೇಲಣ ಅಭಿಮಾನದಿಂದ ಅದಕ್ಕಾಗಿ ನನ್ನ ಸ್ವಂತ ಸೊತ್ತಿನಿಂದ


ಸೋದರನನ್ನೂ ನನ್ನಿಂದ ದೇವರು ದೂರವಾಗಿರಿಸಿದ್ದಾನೆ ಪರಿಚಿತರೆಲ್ಲರು ನನ್ನನು ತೊರೆದುಬಿಟ್ಟಿದ್ದಾರೆ.


ಉರಲನೊಡ್ಡಿಹರು ನನ್ನ ಪ್ರಾಣಹಂತಕರು I ನಿರ್ಧರಿಸಿಹರು ವಿನಾಶವನ್ನು ಕೇಡು ಬಗೆವವರು I ಕುತಂತ್ರವ ಮಾಡುವರು ಸತತ ಮೋಸಗಾರರು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು