Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 7:1 - ಕನ್ನಡ ಸತ್ಯವೇದವು C.L. Bible (BSI)

1 ನಿನ್ನಾಶ್ರಯವನರಸಿ ಹೇ ಸ್ವಾಮಿ ದೇವಾ, ನಾ ಬಂದಿಹೆನು I ಬೆನ್ನಟ್ಟಿ ಬರುವವರ ಕೈಯಿಂದ ತಪ್ಪಿಸಿ, ಕಾಪಾಡೆನ್ನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ನನ್ನ ದೇವರೇ, ನಿನ್ನ ಮೊರೆಹೊಕ್ಕಿದ್ದೇನೆ; ಬೆನ್ನಟ್ಟುವವರೆಲ್ಲರಿಂದ ತಪ್ಪಿಸಿ ನನ್ನನ್ನು ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ನನ್ನ ದೇವರೇ, ನಿನ್ನ ಮರೆಹೊಕ್ಕಿದ್ದೇನೆ; ಹಿಂದಟ್ಟುವವರೆಲ್ಲರಿಂದ ತಪ್ಪಿಸಿ ನನ್ನನ್ನು ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನನ್ನ ದೇವರಾದ ಯೆಹೋವನೇ, ನಿನ್ನನ್ನೇ ಆಶ್ರಯಿಸಿಕೊಂಡಿರುವೆ. ನನ್ನನ್ನು ಹಿಂದಟ್ಟುತ್ತಿರುವವರಿಂದ ನನ್ನನ್ನು ತಪ್ಪಿಸಿ ಕಾಪಾಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನನ್ನ ಯೆಹೋವ ದೇವರೇ, ನಿಮ್ಮನ್ನೇ ಆಶ್ರಯಿಸಿದ್ದೇನೆ; ನನ್ನನ್ನು ಬೆನ್ನಟ್ಟಿದ ಎಲ್ಲರಿಂದಲೂ ನನ್ನನ್ನು ರಕ್ಷಿಸಿ ಕಾಪಾಡಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 7:1
29 ತಿಳಿವುಗಳ ಹೋಲಿಕೆ  

ನಿನ್ನ ಕೈಯಲ್ಲಿದೆ ನನ್ನ ಇಡೀ ಜೀವಮಾನ I ಬೆನ್ನಟ್ಟಿಬರುವ ವೈರಿಯಿಂದ ರಕ್ಷಿಸೆನ್ನ II


ಸರ್ವೇಶ್ವರಾ, ಕೇಳಿರುವೆ ನಿನ್ನ ಕೀರ್ತಿಯನು ಬೆರಗಾದೆ ಕೇಳಿ ನಿನ್ನ ಮಹತ್ಕಾರ್ಯವನು.


ಆದ್ದರಿಂದ, ದೇವರ ಚಿತ್ತಾನುಸಾರ ಹಿಂಸೆಬಾಧೆಯನ್ನು ಅನುಭವಿಸುವವರು ತಮ್ಮ ಸತ್ಕ್ರಿಯೆಗಳಲ್ಲಿ ನಿರತರಾಗಿರಲಿ. ಸೃಷ್ಟಿಕರ್ತನಿಗೆ ಶರಣಾಗಲಿ. ಆತ ಅವರನ್ನೆಂದಿಗೂ ಕೈಬಿಡನು.


ನೀವು ಆ ಗುಡ್ಡಗಳ ನಡುವೆ ಉಂಟಾಗುವ ಕಣಿವೆಯ ಮೂಲಕ ಪಲಾಯನಗೈಯುವಿರಿ. ಆ ಕಣಿವೆ ಆಚೆಲಿನವರೆಗೆ ಹಬ್ಬಿರುವುದು. ಜುದೇಯದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪವಾದಾಗ ನೀವು ಮಾಡಿದಂತೆ ಪಲಾಯನ ಗೈಯುವಿರಿ. ಆಗ ನನ್ನ ದೇವರಾದ ಸರ್ವೇಶ್ವರ ತಮ್ಮ ದೂತರ ಸಮೇತ ಬರುವರು.


ಪಾಪವನ್ನು ಅರಿಕೆಮಾಡಿ ನನ್ನ ದೇವರಾದ ಸರ್ವೇಶ್ವರನಿಗೆ ಹೀಗೆಂದು ಬಿನ್ನವಿಸಿದೆ: “ಹೇ ಸರ್ವೇಶ್ವರಾ, ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆದ ದೇವರೇ, ನಿಮ್ಮನ್ನು ಪ್ರೀತಿಸಿ, ನಿಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ವಾಗ್ದಾನಗಳನ್ನು ಪ್ರೀತಿಯಿಂದ ನೆರವೇರಿಸುತ್ತೀರಿ.


ಎಫ್ರಯಿಮಿನ ಈ ಪ್ರಲಾಪ ನನ್ನ ಕಿವಿಗೆ ಬಿದ್ದಿದೆ: ‘ನೀನು ನನಗೆ ಶಿಕ್ಷೆ ವಿಧಿಸಿದೆ ಪಳಗದ ಹೋರಿಯಂತೆ ನಾನು ಆ ಶಿಕ್ಷೆಯನ್ನು ಅನುಭವಿಸಿದೆ. ನೀನು ನನ್ನನ್ನು ತಿರುಗಿಸು, ನೀ ತಿರುಗಿಸಿದ ಹಾಗೆ ನಾನು ತಿರುಗುವೆ. ನೀನೆ ನನ್ನ ದೇವರಾದ ಸರ್ವೇಶ್ವರನಲ್ಲವೆ?


ಆದರೆ ನನ್ನ ಸಂಗಡ ಇರುವರು ಸರ್ವೇಶ್ವರ ಭಯಂಕರ ಶೂರನಂತೆ ನನ್ನ ಹಿಂಸಕರು ಮುಗ್ಗರಿಸಿ ಬೀಳುವರು ಜಯಸಾಧಿಸದೆ. ನಾಚಿಕೆಗೆ ಈಡಾಗುವರು ತಮ್ಮ ಯೋಜನೆ ಕೈಗೂಡದೆ ಶಾಶ್ವತ ಅವಮಾನಕ್ಕೆ ಗುರಿಯಾಗುವರು ಎಂದಿಗೂ ಮರೆಯಲಾಗದಂತೆ.


ಅದಕ್ಕೆ ನಾನು : “ಸರ್ವೇಶ್ವರಾ, ನೀವು ಎಲ್ಲವನ್ನು ಬಲ್ಲವರು. ನನ್ನನ್ನು ನೆನಪಿಗೆ ತಂದುಕೊಂಡು ನೆರವುನೀಡಿ. ನನಗಾಗಿ ನನ್ನ ಶತ್ರುಗಳಿಗೆ ಮುಯ್ಯಿತೀರಿಸಿರಿ. ಅವರಿಗೆ ಹೆಚ್ಚು ತಾಳ್ಮೆತೋರಿ ನನ್ನನ್ನು ನಿರ್ಮೂಲಮಾಡಬೇಡಿ. ನಿಮ್ಮ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆ ಎಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿ.


ಸರ್ವೇಶ್ವರನ ದಾಸನಾದ ನನ್ನ ಮಾತುಗಳನು ಕೇಳಿ : ಭಯಭಕ್ತಿಯುಳ್ಳವನಾರು ನಿಮ್ಮೊಳು ಆ ಸರ್ವೇಶ್ವರನಲಿ? ಬೆಳಕಿಲ್ಲದೆ ಕತ್ತಲಲಿ ನಡೆಯುವವನು ಭರವಸೆಯಿಡಲಿ ಆ ಸರ್ವೇಶ್ವರನ ನಾಮದಲಿ; ಆಶ್ರಯ ಪಡೆಯಲಿ ತನ್ನಾ ದೇವನಲಿ.


‘ನನಗೆ ಪಿತ, ದೈವ, ದುರ್ಗ, ಉದ್ಧಾರಕ, ನೀನು’ I ಇಂತೆಂದೇ ನನ್ನನು ಸಂಬೋಧಿಸುವನವನು II


ಬರುವೆನಾಗ ನಿನ್ನ ಬಲಿಪೀಠದ ಬಳಿಗೆ I ನನ್ನಾನಂದ ನಿಧಿಯಾದ ನಿನ್ನ ಸನ್ನಿಧಿಗೆ I ವೀಣೆ ನುಡಿಸಿ ದೇವಾ, ನಿನ್ನ ಸ್ತುತಿಸಲಿಕೆ II


‘ದುಷ್ಟರ ಕಷ್ಟನಷ್ಟಗಳು ಅನೇಕ I ಪ್ರಭುವನು ನಂಬಿದವರ ಸುತ್ತ ಮರುಕ’ ” II


ಎಂದೇ ಮೌನವಿರದೆ ಎನ್ನ ಮನವು ನಿನಗೆ ಹಾಡಲಿ ಕೀರ್ತನೆ I ಹೇ ಪ್ರಭು, ಎನ್ನ ದೇವ, ನಿನಗೆನ್ನ ಅನಂತ ಧನ್ಯ ವಂದನೆ II


‘ಹೇ ಪ್ರಭು, ಎನ್ನ ದೇವಾ ‘ ಎಂದೆ I ನಾ ಮೊರೆಯಿಡೆ, ನೀ ಗುಣಪಡಿಸಿದೆ II


ಸಾಚವಾದುದೆನ್ನ ನಡತೆ, ಅಚಲವಾದುದೆನ್ನ ನಂಬುಗೆ I ನೀಚ ನಾನಲ್ಲವೆಂದು ಪ್ರಭು, ನ್ಯಾಯ ತೀರಿಸೆನಗೆ II


ಹೊತ್ತಿಸುವೆ ಪ್ರಭು, ನೀನೆನ್ನ ಬಾಳಿನ ದೀಪವನು I ಕತ್ತಲನು ನೀಗಿಸಿ ಜ್ಯೋತಿ ಬೆಳಗುವನಾ ದೇವನು II


ಪ್ರಭುವೇ ನನ್ನ ಕಲ್ಲುಕೋಟೆ, ನನಗೆ ವಿಮೋಚಕ I ಆತನೇ ನನ್ನ ದೇವ, ನನ್ನಾಶ್ರಯ ದುರ್ಗ I ಆತನೆನಗೆ ಗುರಾಣಿ, ಗಿರಿ, ರಕ್ಷಣಾಶೃಂಗ II


ನಿನ್ನಚಲ ಪ್ರೀತಿಯಲ್ಲಿದೆ ನನಗಿದೆ ವಿಶ್ವಾಸ I ನಿನ್ನ ರಕ್ಷಣೆ ತಂದಿದೆ ನನ್ನ ಮನಕೆ ಹರುಷ II


ಹೇ ಪ್ರಭು, ಹೇ ದೇವ, ಎನ್ನ ವೀಕ್ಷಿಸಿ ಸದುತ್ತರ ಪಾಲಿಸು I ಮರಣ ನಿದ್ರೆ ಬಾರದಂತೆ ನನ್ನ ನೇತ್ರಗಳನು ಬೆಳಗಿಸು II


ನಾನು ಆಶ್ರಯಿಸಿಕೊಂಡಿರಲು ಪ್ರಭುವನು I ನೀವು ಹೇಳುವುದೆಂತು ನನಗೀ ಮಾತನು: II


ಎದ್ದೇಳು ದೇವ, ಕಾಪಾಡ ಬಾ ಪ್ರಭುವೆ I ವೈರಿಗಳ ದವಡೆ ಬಡಿದವನು ನೀನಲ್ಲವೇ I ದುರುಳರ ಹಲ್ಲುದುರಿಸಿದವನು ನೀನಲ್ಲವೆ? II


ನನ್ನ ಜೊತೆಯಲ್ಲಿ ಬಂದಿದ್ದ ಸಹೋದರರು ಜನರನ್ನು ಎದೆಗೆಡಿಸಿದರು. ನಾನಾದರೋ ನನ್ನ ದೇವರಾದ ಸರ್ವೇಶ್ವರನನ್ನೇ ಸಂಪೂರ್ಣವಾಗಿ ನಂಬಿ ಶ್ರದ್ಧೆಯಿಂದ ಅನುಸರಿಸಿದೆ.


ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ.


ಶತ್ರುಗಾಗದಿರಲಿ ಸಡಗರ I ನನಗೊದಗದಿರಲಿ ಮುಜುಗರ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು