Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 7:10 - ಕನ್ನಡ ಸತ್ಯವೇದವು C.L. Bible (BSI)

10 ನನಗೆ ರಕ್ಷೆ ನೀಡುವ ಗುರಾಣಿ, ದೇವನೇ I ನೇರಮನಸ್ಕರಿಗೆ ಸಂರಕ್ಷಣೆ ಆತನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನನ್ನು ರಕ್ಷಿಸುವ ಗುರಾಣಿಯು ದೇವರೇ; ಆತನು ಯಥಾರ್ಥರನ್ನು ಕಾಪಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನ್ನನ್ನು ರಕ್ಷಿಸುವ ಗುರಾಣಿಯು ದೇವರೇ; ಆತನು ಯಥಾರ್ಥರನ್ನು ಕಾಪಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನನ್ನ ಗುರಾಣಿಯು ದೇವರೇ. ಆತನು ಯಥಾರ್ಥವಂತರನ್ನು ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮಹೋನ್ನತರಾದ ದೇವರು ನನ್ನ ಗುರಾಣಿಯಾಗಿದ್ದಾರೆ, ಅವರು ಯಥಾರ್ಥ ಹೃದಯವುಳ್ಳವರನ್ನು ರಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 7:10
15 ತಿಳಿವುಗಳ ಹೋಲಿಕೆ  

ಸನ್ಮಾರ್ಗಿಗಳಿಗೆ ಸಂರಕ್ಷಣೆ, ದುರ್ಮಾರ್ಗಿಗಳಿಗೆ ಪತನ ತಟ್ಟನೆ.


ಒಳಿತನು ಮಾಡು ಪ್ರಭು, ಒಳ್ಳೆಯವರಿಗೆ I ಒಳ್ಳೆಯವರಿಗೆ ಮೇಣ್ ನೇರ ಮನಸ್ಕರಿಗೆ II


ದೇವನೆಮಗೆ ಬೆಳಕು ಕೊಡುವ ಸೂರ್ಯನು I ಕಾದಿಟ್ಟು ರಕ್ಷಿಸುವ ಗುರಾಣಿಯು I ಸನ್ಮಾರ್ಗಿಗೆ ಈವನು ಸಕಲ ವರಗಳನು II


ವಕ್ರಹೃದಯರು ಸರ್ವೇಶ್ವರನಿಗೆ ಅಸಹ್ಯರು; ಸನ್ಮಾರ್ಗಿಗಳು ಆತನ ಕೃಪೆಗೆ ಪಾತ್ರರು.


ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯದರ್ಶನ ಆಯಿತು. ಅದರಲ್ಲಿ ಸರ್ವೇಶ್ವರ ಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ".


ಸತ್ಯವಂತರು ನಾಡಿನಲ್ಲಿ ಬಾಳುವರು, ನಿರ್ದೋಷಿಗಳು ಅದರಲ್ಲಿ ನೆಲೆಯಾಗಿರುವರು.


ಬಲಿಷ್ಠವಾಗುವುದು ಜಗದೊಳು ಅವನ ಸಂತಾನ I ಸಜ್ಜನರ ಸಂತತಿ ಪಡೆವುದು ಆಶೀರ್ವಚನ II


ಗುರಾಣಿಯಂತಿಹ ನಮ್ಮ ರಾಜನು ಪ್ರಭುವಿನವನೇ I ಇಸ್ರಯೇಲಿನ ಪರಮಪಾವನ ಸ್ವಾಮಿಗೆ ಸೇರಿದವನೇ II


ನೀನಾದರೋ ಪ್ರಭು, ನನಗೆ ರಕ್ಷೆ, ವಿಜಯದಾತ I ನಾನು ತಲೆಯೆತ್ತಿ ನಡೆಯುವಂತೆ ಮಾಡುವಾತ II


ನಿಶ್ಚಯವಾಗಿ ನಿನಗೋಸ್ಕರ ಎಚ್ಚೆತ್ತು ಬರುವನು ಸತ್ಯವಂತನ ಮನೆಮಾರನು ಸಮೃದ್ಧಿಗೊಳಿಸುವನು.


“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ಮನುಷ್ಯರ ಹೃದಯಗಳನ್ನು ಬಲ್ಲಂಥ ನೀವು ನಿಮ್ಮ ನಿವಾಸವಾಗಿರುವ ಪರಲೋಕದಿಂದ ಆಲಿಸಿರಿ; ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸಿರಿ. ಮನುಷ್ಯರ ಅಂತರಂಗಗಳನ್ನು ಬಲ್ಲವರು ನೀವೊಬ್ಬರೇ. ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕಹಾಗೆ ಫಲವನ್ನು ಕೊಡಿ.


ಆಗ ನಾನು, “ಸೇನಾಧೀಶ್ವರರಾದ ಸರ್ವೇಶ್ವರಾ, ನೀವು ಹೃನ್ಮನಗಳನ್ನು ಪರೀಕ್ಷಿಸಿ ನ್ಯಾಯವಾದ ತೀರ್ಪನ್ನು ನೀಡುವವರು. ನೀವು ಅವರಿಗೆ ಮಾಡುವ ಪ್ರತೀಕಾರವನ್ನು ನಾನು ಕಾಣುವೆನು. ನನ್ನ ವ್ಯಾಜ್ಯವನ್ನು ನಿಮ್ಮ ಕೈಗೊಪ್ಪಿಸಿದ್ದೇನೆ,” ಎಂದೆನು.


ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು