Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 7:12 - ಕನ್ನಡ ಸತ್ಯವೇದವು C.L. Bible (BSI)

12 ತೀಡುವನು ಕತ್ತಿಯನು, ಹೂಡುವನು ಬಾಣವನು I ಪಡೆಯದಿರೆ ದುರುಳನು ಮನಪರಿವರ್ತನೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದೋಷಿಯು ಮನಸ್ಸನ್ನು ಬದಲಾಯಿಸಿಕೊಳ್ಳದೆ ಹೋದರೆ ಆತನು ತನ್ನ ಕತ್ತಿಯನ್ನು ಮಸೆಯುವನು. ತನ್ನ ಬಿಲ್ಲನ್ನು ಬಗ್ಗಿಸಿ ಸಿದ್ಧಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದೋಷಿಯು ಮನಸ್ಸನ್ನು ಬೇರೆಮಾಡಿಕೊಳ್ಳದೆ ಹೋದರೆ ಆತನು ತನ್ನ ಕತ್ತಿಯನ್ನು ಮಸೆಯುವನು. ತನ್ನ ಬಿಲ್ಲನ್ನು ಬೊಗ್ಗಿಸಿ ಸಿದ್ಧಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆತನು ತಾನು ಮಾಡಿದ ತೀರ್ಮಾನವನ್ನು ಬದಲಾಯಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅಂಥವರು ತಿರುಗಿಕೊಳ್ಳದಿದ್ದರೆ ದೇವರು ತಮ್ಮ ಖಡ್ಗ ಮಸೆಯುವರು; ತಮ್ಮ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 7:12
15 ತಿಳಿವುಗಳ ಹೋಲಿಕೆ  

ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.


ಈಗಾಗಲೇ ಮರದ ಬುಡಕ್ಕೆ ಕೊಡಲಿ ಬಿದ್ದಿದೆ; ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಗೆ ಹಾಕಲಾಗುವುದು.


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಇಸ್ರಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪು ನೀಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ಪಾಪಕ್ಕೆ ವಿಮುಖರಾಗಿರಿ; ನಿಮ್ಮ ಅಪರಾಧಗಳನ್ನೆಲ್ಲಾ ತೊರೆದುಬಿಡಿ.


ಥಳಥಳಿಸುವ ಕತ್ತಿಯನು ಹದಮಾಡಿ ನ್ಯಾಯಸ್ಥಾಪಿಸುವೆನು ಮುನ್ನುಗ್ಗಿ. ಮುಯ್ಯಿ ತೀರಿಸುವೆನು ನನ್ನ ಶತ್ರುಗಳಿಗೆ ಪ್ರತಿದಂಡಿಸುವೆನು ನನ್ನ ದ್ವೇಷಿಸಿದವಗೆ.


ಪುನಶ್ಚೇತನಗೊಳಿಸೆಮ್ಮನು ದೇವ, ಉದ್ಧಾರಕ I ತೊರೆದುಬಿಡು ನಮ್ಮ ಬಗ್ಗೆ ನಿನಗಿರುವ ಸಿಟ್ಟುಸಿಡುಕ II


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲವಲೇಶವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿ, ಬಿಟ್ಟುಬಿಡಿ; ನೀವು ಏಕೆ ಸಾಯಬೇಕು?” ಇದು ಸರ್ವೇಶ್ವರನಾದ ದೇವರ ನುಡಿ.


ಆದರೆ ಪುರನಿವಾಸಿಗಳು ತಾವು ಆ ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ಭರವಸೆಯಿಟ್ಟು, ಈ ಶಕುನವು ಸುಳ್ಳೆಂದು ಭಾವಿಸುವರು; ಆದರೆ ಅವರು ತನ್ನ ಕೈಗೆ ಸಿಕ್ಕಿಬೀಳಲೆಂದು ಅವರ ಅಧರ್ಮವನ್ನು ಅವನು ಬೆಳಕಿಗೆ ತರುವನು.


ಆಕಾಶದಲ್ಲಿ ನನ್ನ ಖಡ್ಗವು ಆವೇಶದಿಂದ ಕಾರ್ಯಮಾಡಿದೆ. ಇಗೋ, ನಾನು ಶಪಿಸಿದ ಎದೋಮ್ ಎಂಬ ಜನಾಂಗದ ಮೇಲೆ ನ್ಯಾಯತೀರಿಸಲು ಅದು ಎರಗಲಿದೆ.


ಆ ದಿನದಂದು ಸರ್ವೇಶ್ವರ ಸ್ವಾಮಿ ತಮ್ಮ ಘೋರವಾದ, ಕ್ರೂರವಾದ, ಮಾರಕವಾದ ಖಡ್ಗದಿಂದ ವೇಗವಾಗಿ ಧಾವಿಸುವ ಹಾಗೂ ಡೊಂಕಾಗಿ ಹರಿಯುವ ಸರ್ಪವನ್ನು ಹೊಡೆಯುವರು. ಮಹಾನದಿಯಲ್ಲಿನ ಘಟಸರ್ಪವನ್ನು ಸಹ ಕೊಂದುಹಾಕುವರು.


ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.


ಭ್ರಷ್ಟರನು ದಂಡಿಸಿದೆ, ರಾಷ್ಟ್ರಗಳನು ಖಂಡಿಸಿದೆ I ಎಂದೆಂದೂ ಹೆಸರಿಲ್ಲದಂತೆ ಅವರನು ಅಳಿಸಿಹಾಕಿದೆ II


ನಮ್ಮ ಪ್ರಭುವಾದರೋ ಸತ್ಯಸ್ವರೂಪನು I ಕಡಿದಿಹನು ದುರುಳರು ಹಾಕಿದ ಕಟ್ಟುಗಳನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು