Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 7:13 - ಕನ್ನಡ ಸತ್ಯವೇದವು C.L. Bible (BSI)

13 ಸೇರಿಸಿಟ್ಟಿರುವನಾತ ಮಾರಕಾಸ್ತ್ರಗಳನು I ಗುರಿಯಿಟ್ಟು ನಿಂತಿರುವನು ಅಗ್ನಿಬಾಣಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನು ಅದಕ್ಕೆ ಮರಣಕರವಾದ ಅಗ್ನಿಬಾಣಗಳನ್ನು ಹೂಡಿ ಅವನ ಮೇಲೆ ಪ್ರಯೋಗಿಸುವುದಕ್ಕೆ ಗುರಿಯಿಟ್ಟು ನಿಂತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆತನು ಅದಕ್ಕೆ ಮರಣಕರವಾದ ಅಗ್ನಿ ಬಾಣಗಳನ್ನು ಹೂಡಿ ಅವನ ಮೇಲೆ ಪ್ರಯೋಗಿಸುವದಕ್ಕೆ ಗುರಿಯಿಟ್ಟು ನಿಂತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದುಷ್ಟರನ್ನು ಶಿಕ್ಷಿಸಲು ಆತನು ಸಿದ್ಧನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅಂಥವರಿಗೆ ಮರಣಾಯುಧಗಳನ್ನು ಸಹ ಸಿದ್ಧಮಾಡಿದ್ದಾರೆ; ತಮ್ಮ ಅಗ್ನಿಬಾಣಗಳನ್ನು ಸಿದ್ಧಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 7:13
17 ತಿಳಿವುಗಳ ಹೋಲಿಕೆ  

ನ್ಯಾಯವಾದುದ್ದನ್ನೇ ಮಾಡುವ ದೇವರು ನಿಮ್ಮನ್ನು ಹಿಂಸಿಸುವವರಿಗೆ ಪ್ರತಿಹಿಂಸೆಯನ್ನೂ ಮತ್ತು ಹಿಂಸೆಯನ್ನು ಸಹಿಸುತ್ತಿರುವ ನಿಮಗೆ, ನಮ್ಮೊಡನೆ ಉಪಶಮನವನ್ನೂ ದಯಪಾಲಿಸುವರು.


ಹೊರಟಿರುವೆ ನಿನ್ನ ಪ್ರಜೆಗಳ ರಕ್ಷಣೆಗೆ ನಿನ್ನ ಅಭಿಷಿಕ್ತನ ಜೀವೋದ್ಧಾರಕೆ. ಬಡಿದುಹಾಕಿರುವೆ ದುರುಳನ ಬುರುಡೆಯನು ನೆಲಸಮಮಾಡಿರುವೆ ಅವನ ಮನೆಯನು.


ಆದರೆ ಎಸೆವನು ಬಾಣವನು ದೇವನೆ I ಪಡೆವರು ಅಪಘಾತವನು ಫಕ್ಕನೆ II


ನಿನ್ನಂಬು ಬಾಣಗಳು ಹರಿತವಾದುವು I ರಾಜದ್ರೋಹಿಗಳನು ಅವು ಇರಿಯುವುವು I ಜನಾಂಗಗಳು ನಿನ್ನ ಪಾದಕ್ಕೆರಗುವುವು II


ಚದರಿಸಿದನು ಶತ್ರುಗಳನು ಬಾಣಗಳನ್ನೆಸೆದು I ತಳಮಳಗೊಳಿಸಿದನವರನು ಸಿಡಿಲನು ಹೊಡೆದು II


ದೇವಜನರ, ಪೂಜ್ಯಪ್ರವಾದಿಗಳ ರಕ್ತಪಾತಕರಿಗೆ ಕುಡಿಯಲು ನೀನಿತ್ತೆ ಆ ರಕ್ತವ ನೇ ಅವರ ಕೃತ್ಯಕ್ಕದುವೇ ತಕ್ಕ ಸಂಭಾವನೆ,” ಎಂದು ಹಾಡುವುದನ್ನು ನಾನು ಕೇಳಿಸಿಕೊಂಡೆ.


ಅವರು ಆರ್ತಧ್ವನಿಯಿಂದ, ‘ಸರ್ವಶಕ್ತ ಪ್ರಭುವೇ, ಸತ್ಯವಂತರೇ, ಪರಿಶುದ್ಧರೇ, ನಮ್ಮನ್ನು ಕೊಲೆಮಾಡಿದ ಭೂನಿವಾಸಿಗಳಿಗೆ ಇನ್ನೆಷ್ಟುಕಾಲ ನ್ಯಾಯವಿಚಾರಣೆ ಮಾಡದೆ, ಸೇಡನ್ನು ತೀರಿಸಿಕೊಳ್ಳದೆ ಇರುತ್ತೀರಿ?” ಎಂದು ಕೇಳಿದರು.


ಹಾರಿ ಓಡುವ ನಿನ್ನ ಬಾಣಗಳ ಬೆಳಕಿಗೆ ಥಳಥಳಿಸುವ ನಿನ್ನ ಈಟಿಯ ಹೊಳಪಿಗೆ ಸೂರ್ಯಚಂದ್ರ ಅಡಗುತ್ತವೆ ಗೂಡಿನೊಳಗೆ.


ಸಿಡಿಲಿನಿಂದ ಚೆದರಿಸಿಬಿಡು ಶತ್ರುಗಳನು I ನಿನ್ನಂಬುಗಳಿಂದ ಭ್ರಾಂತಗೊಳಿಸವರನು II


ನಾಲಗೆಯೆಂಬ ಅಲಗನವರು ಮಸೆದಿಹರು I ನಂಜುಮಾತೆಂಬ ಅಂಬನು ಹೂಡಿಹರು II


“ನೇರ ಮನಸ್ಕರನು ಕೊಲ್ಲಲು ಇರುಳೊಳು I ಬಿಲ್ಲು ಬಗ್ಗಿಸಿಹರಿದೋ ಆ ದುರುಳರು I ಎದೆಗೆ ಬಾಣವನು ಹೂಡಿ ನಿಂತಿರುವರು” II “ಓಡಿರಿ, ಪಕ್ಷಿಪಾರಿವಾಳಗಳಂತೆ ಗಿರಿಶಿಖರಗಳಿಗೆ I ಅಸ್ತಿವಾರವೆ ಕಿತ್ತಿರಲು, ಗತಿಯೆನಿತು ಸತ್ಯವಂತರಿಗೆ?” II


ನನ್ನ ಮನದೊಳು ಸರ್ವಶಕ್ತನ ಬಾಣಗಳು ನಾಟಿವೆ ನನ್ನ ಅಂತರಂಗದೊಳು ಅವುಗಳ ವಿಷ ಹೀರಲಾಗುತ್ತಿದೆ ದೇವರಿಂದ ಬಂದ ಆತಂಕಗಳು ನನ್ನನು ಸುತ್ತುವರೆದಿವೆ.


ಮತ್ತವಾಗುವುವು ನನ್ನ ಬಾಣಗಳು ರಕ್ತಕುಡಿದು; ನನ್ನ ಕತ್ತಿಯು ತಿನ್ನುವುದು ಸತ್ತವರ, ಖೈದಿಗಳ ರಕ್ತಮಾಂಸವನು; ಚೆಂಡಾಡುವುವು ಶತ್ರುವೀರರ ತಲೆಬುರುಡೆಗಳು.


‘ಉಪದ್ರವಗಳನು ಬರಮಾಡುವೆನು ಒಂದರ ಮೇಲೊಂದಾಗಿ ಬಿಲ್ಲುಬಾಣಗಳನು ಪ್ರಯೋಗಿಸುವೆನು ಅವರಿಗೆ ವಿರುದ್ಧವಾಗಿ.


ಥಳಥಳಿಸುವ ಕತ್ತಿಯನು ಹದಮಾಡಿ ನ್ಯಾಯಸ್ಥಾಪಿಸುವೆನು ಮುನ್ನುಗ್ಗಿ. ಮುಯ್ಯಿ ತೀರಿಸುವೆನು ನನ್ನ ಶತ್ರುಗಳಿಗೆ ಪ್ರತಿದಂಡಿಸುವೆನು ನನ್ನ ದ್ವೇಷಿಸಿದವಗೆ.


ಬಿಲ್ಲುಹಿಡಿದು ಬಂದ ಆತ ವೈರಿಯಂತೆ ಬಲಗೈಯೆತ್ತಿ ನಿಂತ ವಿರೋಧಿಯಂತೆ, ಸಂಹರಿಸಿಬಿಟ್ಟ ಸುಂದರ ಪ್ರಜೆಯೆಲ್ಲರನ್ನು ರೋಷಾಗ್ನಿ ಸುರಿಸಿ ಭಸ್ಮಮಾಡಿದ ಸಿಯೋನ್ ಗುಡಾರವನ್ನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು