Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 7:15 - ಕನ್ನಡ ಸತ್ಯವೇದವು C.L. Bible (BSI)

15 ಗುಣಿಯನು ತೋಡಿದನು; ಮಣ್ಣನು ಹೊರದೂಡಿದನು I ತೋಡಿದ ಗುಣಿಯಲಿ ತಾನೆ ತಟ್ಟನೆ ಬೀಳುವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವನು ಅಗೆದು ಅಗೆದು ಗುಂಡಿಯನ್ನು ತೋಡಿ, ಅದರೊಳಗೆ ತಾನೇ ಬಿದ್ದುಹೋದನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವನು ಅಗೆದು ಅಗೆದು ಗುಂಡಿಯನ್ನು ತೋಡಿ ಅದರೊಳಗೆ ತಾನೇ ಬಿದ್ದುಹೋದನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವರು ಇತರರನ್ನು ಬಲೆಗೆ ಸಿಕ್ಕಿಸಿ ಕೇಡುಮಾಡಬೇಕೆಂದಿದ್ದಾರೆ; ಆದರೆ ತಾವೇ ಆ ಬಲೆಗಳಿಗೆ ಸಿಕ್ಕಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅಂಥವರು ಕುಣಿಯನ್ನು ಅಗೆದಿದ್ದಾರೆ. ಆದರೆ ತಾವು ಅಗೆದ ಕುಣಿಯೊಳಗೆ ತಾವೇ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 7:15
19 ತಿಳಿವುಗಳ ಹೋಲಿಕೆ  

ನನಗೆ ತಿಳಿದಮಟ್ಟಿಗೆ, ಕೆಟ್ಟದ್ದನ್ನು ನೆಡುವವರು, ದುಷ್ಟತನವನು ಬಿತ್ತುವವರು, ಅದನ್ನೆ ಕೊಯ್ಯುವರು.


ದುರುಳರೊಡ್ಡಿದ ಉರುಲಲಿ ಆ ದುರುಳರೆ ಸಿಕ್ಕಿಬೀಳಲಿ I ನಾನಾದರೊ ನುಗ್ಗಿ ನಡೆವೆನು ಸುರಕ್ಷಿತವಾಗಿಯೆ ಅಲ್ಲಿ II


ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು; ಹೊರಳಿಸುವವನ ಮೇಲೆಯೆ ಗುಂಡು ಹೊರಳುವುದು.


ಸೊಕ್ಕಿನಿಂದ ಶೋಷಿಸುತಿಹರು ದಲಿತರನು ದುರುಳರು I ಸಿಕ್ಕಿಬೀಳಲಿ ತಾವೇ ಒಡ್ಡಿದ ಉರಿಲಿನೊಳವರು II


ಕಂಟಕ ಬಂದಿದೆ ನನ್ನ ಪ್ರಾಣಕೆ I ಹಾಕಿಹರು ಕಾಲಿಗೆ ಜೀರುಗುಣಿಕೆ II ತೋಡಿಹರು ಗುಂಡಿಯನು ನಾ ನಡೆವ ದಾರಿಯಲೆ I ತಾವೆ ತಟಕ್ಕನೆ ಬಿದ್ದುಹೋದರು ಅದರಲೆ II


ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲಿಗೆ ಅವನನ್ನು ಏರಿಸಿದರು. ಅರಸನ ಕೋಪವು ಶಾಂತವಾಯಿತು.


ದುರುಳನನ್ನು ಅವನ ದ್ರೋಹಗಳೆ ಆಕ್ರಮಿಸುತ್ತವೆ; ಅವನ ಪಾಪಪಾಶಗಳೇ ಅವನನ್ನು ಬಂಧಿಸುತ್ತವೆ.


ಮಾಡಿದ ಮೇಲಿಗೆ ಕೇಡಿನ ಪ್ರತಿಫಲವೆ? ನನ್ನ ಪ್ರಾಣ ಹಿಡಿಯಲು ಗುಂಡಿಯನ್ನು ತೋಡಿದ್ದಾರೆ. ಅವರ ಮೇಲೆ ನಿಮಗಿದ್ದ ಕೋಪಾವೇಶವನ್ನು ಶಮನಗೊಳಿಸಲು ನಿಮ್ಮ ಮುಂದೆ ನಿಂತು ನಾನು ವಿನಂತಿಸಿದ್ದನ್ನು ನೆನಪಿಗೆ ತಂದುಕೊಳ್ಳಿ.


ಗುಂಡಿ ಅಗೆದಿಹರು ಎನಗೆ ಗರ್ವಿಷ್ಠರು I ಧರ್ಮಶಾಸ್ತ್ರ ಪಾಲಿಸದ ಆ ದುರುಳರು II


ನೆಮ್ಮದಿ ನೀಡುವೆ ಅವನು ಸಂಕಟದಲಿರುವಾಗ I ದುರುಳರಿಗೆ ನೀನು ಗುಂಡಿಯನು ತೋಡುವಾಗ II


ಅನಾಥನನ್ನು ಕೊಂಡುಕೊಳ್ಳಲು ಚೀಟುಹಾಕುತ್ತೀರಿ ಆಪ್ತನನ್ನು ಮಾರಿಬಿಡಲು ವ್ಯಾಪಾರಮಾಡುತ್ತೀರಿ.


ಉದರದಲ್ಲಿ ವಂಚನೆಯನ್ನು ಗರ್ಭಧರಿಸುವರು ಕೇಡನು ಹಡೆವೆನೆಂದೆಣಿಸಿ ಶೂನ್ಯವ ಹೆರುವುದ ನೋಡು.


ನೀವು ಹೊಟ್ಟನ್ನು ಗರ್ಭದಲ್ಲಿ ಬೆಳೆಸಿ ಕೂಳೆಯನ್ನು ಹೆರುವಿರಿ. ನಿಮ್ಮ ನಿಟ್ಟುಸಿರು ನಿಮ್ಮನ್ನೇ ನುಂಗುವ ಬೆಂಕಿಯಾಗುವುದು.


ನ್ಯಾಯಸ್ಥಾನದಲ್ಲಿ ನ್ಯಾಯಾನುಸಾರ ವಾದಿಸುವವನು ಯಾರೂ ಇಲ್ಲ; ಸತ್ಯಾನುಸಾರ ತೀರ್ಪುಕೊಡುವವನು ಯಾರೂ ಇಲ್ಲ; ನೀವು ಶೂನ್ಯವಾದುದ್ದನ್ನೇ ನಂಬುತ್ತೀರಿ, ಅಬದ್ಧವಾದುದನ್ನೇ ಆಡುತ್ತೀರಿ, ಕೇಡನ್ನು ಬಸಿರಿಸಿ ಅಕ್ರಮವನ್ನು ಹೆರುತ್ತೀರಿ.


ಇದಾದ ಮೇಲೆ ರಾಜ ದಾರ್ಯಾವೆಷನು ಜಗದಲ್ಲಿ ವಾಸಿಸುವ ಸಕಲ ದೇಶ-ಕುಲ-ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿದನು: ನಿಮಗೆ ಹೆಚ್ಚೆಚ್ಚು ಸುಖಶಾಂತಿ ಲಭಿಸಲಿ!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು