Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 7:16 - ಕನ್ನಡ ಸತ್ಯವೇದವು C.L. Bible (BSI)

16 ತಾನು ಮಾಡಿದ ಕುತಂತ್ರ ತನ್ನ ತಲೆಗೆ ಗಂಡಾಂತರ I ತಾನು ಕೊಟ್ಟ ಉಪದ್ರವ ತನ್ನ ಬುರುಡೆಗೆ ಅವಾಂತರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವನು ಮಾಡಿದ ಕುಯುಕ್ತಿ ಅವನ ತಲೆಯ ಮೇಲೆಯೇ ಬರುವುದು; ಅವನು ಮಾಡಬೇಕೆಂದಿದ್ದ ಅನ್ಯಾಯವು ಸ್ವಂತ ತಲೆಯ ಮೇಲೆ ಬೀಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವನು ಮಾಡಿದ ಕುಯುಕ್ತಿ ಅವನ ತಲೆಯ ಮೇಲೆಯೇ ಬರುವದು; ಅವನು ಮಾಡಬೇಕೆಂದಿದ್ದ ಅನ್ಯಾಯವು ಸ್ವಂತ ಬುರುಡೆಯ ಮೇಲೆ ಬೀಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅವರು ತಮ್ಮ ಕುಯುಕ್ತಿಗೆ ತಕ್ಕ ದಂಡನೆಯನ್ನು ಹೊಂದುವರು. ಅವರು ಇತರರ ವಿಷಯದಲ್ಲಿ ಕ್ರೂರವಾಗಿ ನಡೆದುಕೊಂಡರು. ಅವರು ಮಾಡಿದ ಹಿಂಸೆಯು ಅವರಿಗೇ ಸಂಭವಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅಂಥವರ ಕೇಡು ಅವರ ಮೇಲೆಯೇ ತಿರುಗುವುದು; ಅವರ ತಲೆಯ ಮೇಲೆ ಅವರ ಬಲಾತ್ಕಾರವೇ ಇಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 7:16
21 ತಿಳಿವುಗಳ ಹೋಲಿಕೆ  

ಈ ವಿಷಯ ಅರಸನ ಕಿವಿಗೆ ಬಿದ್ದಾಗ, ಅವನು, ‘ಹಾಮಾನನು ಯೆಹೂದ್ಯರ ವಿರುದ್ಧ ಯೋಚಿಸಿದ ಕೇಡು ಅವನ ತಲೆಯ ಮೇಲೆಯೇ ಬರಲಿ. ಅವನನ್ನು ಅವನ ಮಕ್ಕಳನ್ನೂ ಗಲ್ಲಿಗೇರಿಸಿರಿ,’ ಎಂದು ಅಪ್ಪಣೆಮಾಡಿದ್ದನು.


ಸರ್ವೇಶ್ವರ ಈ ರಕ್ತ ಅಪರಾಧವನ್ನು ಅವನ ತಲೆಯ ಮೇಲೆಯೇ ಬರಮಾಡಲಿ; ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಅಂದರೆ, ಇಸ್ರಯೇಲ್ ಸೇನಾಪತಿಯೂ ನೇರನ ಮಗನೂ ಆದ ಅಬ್ನೇರನನ್ನೂ ಯೆಹೂದ ಸೇನಾಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕೊಂದನಲ್ಲವೆ?


ಕೇಡು ಮಾಡಿದವರಿದೋ ಕೆಳಗೆ ಬಿದ್ದಿಹರು I ಮರಳಿ ಏಳಲಾಗದೆ ಮಡಿದು ಬಿದ್ದಿಹರು II


ನಿನ್ನ ಸಮೇತ ಇಸ್ರಯೇಲರನ್ನು ಫಿಲಿಷ್ಟಿಯರ ಕೈಗೆ ಒಪ್ಪಿಸುವರು. ನಾಳೆ ನೀನೂ ನಿನ್ನ ಮಕ್ಕಳೂ ನಾನಿರುವಲ್ಲಿಗೆ ಬರುವಿರಿ. ಸರ್ವೇಶ್ವರ ಇಸ್ರಯೇಲ್ ಸೈನ್ಯವನ್ನು ಫಿಲಿಷ್ಟಿಯರ ಕೈಗೆ ಒಪ್ಪಿಸುವರು,” ಎಂದು ಹೇಳಿದನು.


ಇದಲ್ಲದೆ ದಾವೀದನು, “ಸರ್ವೇಶ್ವರನಾಣೆ, ಅವನು ಸರ್ವೇಶ್ವರನಿಂದಲೇ ಸಾಯುವನು; ಇಲ್ಲವೆ ಕಾಲತುಂಬಿ ಮರಣಹೊಂದುವನು; ಅಥವಾ ಯುದ್ಧದಲ್ಲಿ ಮಡಿಯುವನು.


ಸೌಲನು ತನಗೆ ಕೇಡುಮಾಡಬೇಕೆಂದಿದ್ದಾನೆಂದು ದಾವೀದನು ತಿಳಿದು ಯಾಜಕನಾದ ಎಬ್ಯಾತಾರನಿಗೆ, “ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ,” ಎಂದು ಹೇಳಿ ತರಿಸಿ,


ಆಲೋಚಿಸುತ್ತಿಹನು ಅಕ್ರಮವನು ಹಾಸಿಗೆಯಿಂದಲೆ I ಹೇಸನು ದುಷ್ಕೃತ್ಯಕ್ಕೆ, ಮುನ್ನುಗ್ಗುವನು ದುರ್ಮಾರ್ಗದಲೆ II


ಅವನಿಗೆ, “ನೀನು ಕೊಲೆಮಾಡಿ, ಸೊತ್ತನ್ನು ಸಂಪಾದಿಸಿಕೊಂಡೆಯಲ್ಲವೇ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವುವು, ಎನ್ನುತ್ತಾರೆ ಸರ್ವೇಶ್ವರ’ ಎಂದು ಹೇಳು.”


ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲಿಗೆ ಅವನನ್ನು ಏರಿಸಿದರು. ಅರಸನ ಕೋಪವು ಶಾಂತವಾಯಿತು.


ನನಗೆ ತಿಳಿದಮಟ್ಟಿಗೆ, ಕೆಟ್ಟದ್ದನ್ನು ನೆಡುವವರು, ದುಷ್ಟತನವನು ಬಿತ್ತುವವರು, ಅದನ್ನೆ ಕೊಯ್ಯುವರು.


ಪ್ರಭುವಿತ್ತ ನ್ಯಾಯತೀರ್ಪೇ ಆತನಿಗೆ ಪ್ರಚಾರಕ I ದುಷ್ಟರು ಗೈದ ಕುಯುಕ್ತಿಯೇ ಅವರಿಗೆ ಸಂಹಾರಕ II


ಒಡ್ಡಿದ ಬಲೆಯಲಿ ಒಡ್ಡಿದವನೇ ಪಟಕ್ಕನೆ ಸಿಕ್ಕಿಬೀಳಲಿ I ತೋಡಿದ ಗುಣಿಯಲಿ ತೋಡಿದವನೇ ತಟಕ್ಕನೆ ಬಿದ್ದುಹೋಗಲಿ II


ಸ್ಥಿರವಿದೆ ದೇವಾ, ಸುಸ್ಥಿರವಿದೆ ನನ್ನ ಮನ I ಹಾಡುತ ಪಾಡುತ ನಾ ರಚಿಸುವೆ ಗಾಯನ II


ದುರುಳರೊಡ್ಡಿದ ಉರುಲಲಿ ಆ ದುರುಳರೆ ಸಿಕ್ಕಿಬೀಳಲಿ I ನಾನಾದರೊ ನುಗ್ಗಿ ನಡೆವೆನು ಸುರಕ್ಷಿತವಾಗಿಯೆ ಅಲ್ಲಿ II


ಸೂರೆ ಮಾಡುವವರೆಲ್ಲರ ಪಾಡು ಇದುವೆ; ಕೊಳ್ಳೆಯು, ಕೊಳ್ಳೆಗಾರರ ಪ್ರಾಣವನ್ನೇ ಕೊಳ್ಳೆಮಾಡುತ್ತದೆ.


ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು; ಹೊರಳಿಸುವವನ ಮೇಲೆಯೆ ಗುಂಡು ಹೊರಳುವುದು.


ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು; ಗೋಡೆ ಒಡೆಯುವವನನ್ನು ಹಾವು ಕಡಿಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು