Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 7:5 - ಕನ್ನಡ ಸತ್ಯವೇದವು C.L. Bible (BSI)

5 ಎನ್ನ ಬೆನ್ನಟ್ಟಿ ಬರಲಿ ವೈರಿ, ಕಾಲಿಂದೆನ್ನ ಮೆಟ್ಟಿ ತುಳಿಯಲಿ I ಎನ್ನ ಮಾನವನು ಮಣ್ಣುಪಾಲಾಗಿಸಲಿ, ನನ್ನನು ಸೋಲಿಸಿಬಿಡಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನನ್ನ ಮಾನವನ್ನು ಮಣ್ಣುಪಾಲು ಮಾಡಲಿ. ನಾನಂಥವನಲ್ಲ; ನಿಷ್ಕಾರಣ ವೈರಿಯನ್ನು ರಕ್ಷಿಸಿದೆನಲ್ಲ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನನ್ನ ಮಾನವನ್ನು ಮಣ್ಣುಪಾಲು ಮಾಡಲಿ. ನಾನಂಥವನಲ್ಲ; ನಿಷ್ಕಾರಣವೈರಿಯನ್ನೂ ರಕ್ಷಿಸಿದೆನಲ್ಲಾ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇವುಗಳಲ್ಲಿ ನಾನು ಯಾವುದನ್ನೇ ಮಾಡಿದ್ದರೂ, ಶತ್ರುವು ನನ್ನನ್ನು ಹಿಂದಟ್ಟಿ ಬಂದು ನನ್ನನ್ನು ಹಿಡಿದು ನೆಲಕ್ಕೆ ಕೆಡವಿ ತುಳಿಯಲಿ; ನನ್ನ ಪ್ರಾಣವನ್ನು ಮಣ್ಣುಪಾಲು ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ನನ್ನ ವೈರಿಯು ಬೆನ್ನಟ್ಟಿ ನನ್ನನ್ನು ಹಿಡಿದುಕೊಳ್ಳಲಿ. ನನ್ನ ಜೀವವನ್ನು ನೆಲಕ್ಕೆ ಹಾಕಿ ತುಳಿದು ಬಿಡಲಿ ಮತ್ತು ನನ್ನ ಮಾನವನ್ನು ಮಣ್ಣು ಪಾಲಾಗುವಂತೆ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 7:5
17 ತಿಳಿವುಗಳ ಹೋಲಿಕೆ  

ನಾನು ಕಾರ್ಯತತ್ಪರನಾಗುವ ದಿನದಂದು ನೀವು ದುಷ್ಟರನ್ನು ತುಳಿದುಬಿಡುವಿರಿ. ಅವರು ನಿಮ್ಮ ಕಾಲಡಿಯ ಧೂಳಿಯಾಗುವರು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಇವರೆಲ್ಲರು ರಣವೀರರಂತೆ ಶತ್ರುಗಳನ್ನು ಬೀದಿಕೆಸರಿನಲ್ಲಿ ತುಳಿದುಬಿಡುವರು. ಸರ್ವೇಶ್ವರ ತಮ್ಮ ಸಂಗಡ ಇದ್ದಾರೆಂದು ಧೈರ್ಯದಿಂದ ಯುದ್ಧಮಾಡುವರು, ಎದುರಿಸುವ ಕುದುರೆ ಸವಾರರನ್ನು ಭ್ರಾಂತಿಗೊಳಿಸುವರು.”


ಹೊರಟಿರುವೆ ನಿನ್ನ ಪ್ರಜೆಗಳ ರಕ್ಷಣೆಗೆ ನಿನ್ನ ಅಭಿಷಿಕ್ತನ ಜೀವೋದ್ಧಾರಕೆ. ಬಡಿದುಹಾಕಿರುವೆ ದುರುಳನ ಬುರುಡೆಯನು ನೆಲಸಮಮಾಡಿರುವೆ ಅವನ ಮನೆಯನು.


ಸ್ವಾಮಿ ಸರ್ವೇಶ್ವರಾ, ನೀವು ಇಸ್ರಯೇಲರ ಆಶ್ರಯ ! ನಿಮ್ಮನ್ನು ಬಿಟ್ಟುಹೋಗುವವರು ಆಶಾಭಂಗಪಡುವರು ಅವರು ಜೀವಜಲದ ಬುಗ್ಗೆಯನ್ನೆ ತೊರೆದವರು ತಮ್ಮ ಹೆಸರನ್ನು ಧೂಳಿನಲ್ಲಿ ಬರೆಸಿಕೊಂಡವರು.


“ದ್ರಾಕ್ಷಿಹಣ್ಣನು ತುಳಿವಂತೆ ತುಳಿದಿದ್ದೇನೆ ರಾಷ್ಟ್ರಗಳನು ಒಬ್ಬಂಟಿಗನಾಗೇ ಯಾರು ಇರಲಿಲ್ಲ ನನಗೆ ಸಹಾಯಕ್ಕೆ. ಅವರನ್ನು ತುಳಿದೆ ಕೋಪದಿಂದ ರೋಷಾವೇಶದಿಂದ ಹೊಸಕಿದೆ ಕಾಲಿನಿಂದ. ಅವರ ರಕ್ತ ನನ್ನ ಬಟ್ಟೆಗಳ ಮೇಲೆ ಸಿಡಿದಿದೆ. ನನ್ನ ಉಡುಪಿಗೆಲ್ಲಾ ಆ ಬಿಸಿರಕ್ತ ಮೆತ್ತಿಕೊಂಡಿದೆ.


ಆ ಧರ್ಮಭ್ರಷ್ಟ ಪ್ರಜೆಗೆ ಇದಿರಾಗಿ ಅಸ್ಸೀರಿಯವನ್ನು ಕಳುಹಿಸುತ್ತೇನೆ. ನನ್ನ ಕೋಪಕ್ಕೆ ಗುರಿಯಾದ ಜನರಿಗೆ ವಿರುದ್ಧ ಕಾರ್ಯವನ್ನು ಕೈಗೊಳ್ಳಲು ಆಜ್ಞೆ ಮಾಡುತ್ತೇನೆ. ನನ್ನ ಪ್ರಜೆಯನ್ನು ಸೂರೆಮಾಡಲು, ಕೊಳ್ಳೆಹೊಡೆಯಲು, ಬೀದಿಯ ಕಸದಂತೆ ತುಳಿದುಬಿಡಲು ಅದಕ್ಕೆ ಆಜ್ಞೆಮಾಡುತ್ತೇನೆ.


ನಮ್ಮ ಪರ ದೇವನಿರಲು ಹೆಣಗುವೆವು ಶೂರರಾಗಿ I ವೈರಿಗಳನು ತುಳಿದುಬಿಡುವನಾತ ಖರೆಯಾಗಿ II


ನೆಲೆಯಾಗಿರನು ನರನು ಪಟ್ಟಪದವಿಯಲಿ I ನಾಶವಾಗುವನು ಪಶುಪ್ರಾಣಿಗಳ ಪರಿ II


ಶತ್ರುಗಳನು ಸದೆಬಡಿವೆವು ನಿನ್ನ ಬೆಂಬಲದಿಂದ I ಎದುರಾಳಿಯನು ತುಳಿವೆವು ನಿನ್ನ ಆವೇಶದಿಂದ II


“ಈತನಿಗೆ ದೇವರ ನೆರವೆನಿತು?” I ಇಂತಿದೆ ಹಲವರ ಕೆಣಕು ಮಾತು II


ಗೋಣಿತಟ್ಟನ್ನು ಹೊಲಿದು ಮೈಗೆ ಹಾಕಿಕೊಂಡಿರುವೆ ನನ್ನ ಕೊಂಬನ್ನು ಬೂದಿಯೊಳಗೆ ಬಾಗಿಸಿಟ್ಟಿರುವೆ.


ನೀವು ನನ್ನ ತಂದೆ; ಇಗೋ ನೋಡಿ! ನನ್ನ ಕೈಯಲ್ಲಿ ನಿಮ್ಮ ನಿಲುವಂಗಿಯ ತುಂಡು ಇದೆ; ನಾನು ನಿಮ್ಮನ್ನು ಕೊಲ್ಲದೆ ನಿಮ್ಮ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡೆನಷ್ಟೆ. ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವುದಿಲ್ಲ; ನಾನು ನಿಮಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೊಳ್ಳಿ; ಆದರೂ ನೀವು ನನ್ನ ಪ್ರಾಣಕ್ಕೆ ಹೊಂಚು ಹಾಕುತ್ತಿರುವಿರಲ್ಲವೆ?


ಸರ್ವೇಶ್ವರ ನನ್ನನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟರೂ ನೀನು ನನ್ನನ್ನು ಕೊಲ್ಲಲಿಲ್ಲ. ಇದರಿಂದ ನೀನು ನನಗೆ ಹಿತವನ್ನೇ ಮಾಡುವಂಥವನೆಂಬುದು ಈ ದಿನ ಖಚಿತವಾಯಿತು.


ಕೇಳು; ನೀನು ಹೇಗೂ ಅರಸನಾಗುವೆಯೆಂದೂ ಇಸ್ರಯೇಲ್ ರಾಜ್ಯ ನಿನ್ನ ಆಳ್ವಿಕೆಯಲ್ಲಿ ಸ್ಥಿರವಾಗುವುದೆಂದೂ ಬಲ್ಲೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು