Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 7:7 - ಕನ್ನಡ ಸತ್ಯವೇದವು C.L. Bible (BSI)

7 ಸಭೆ ಸೇರಲಿ ಸಕಲ ಜನಾಂಗಗಳು ನಿನ್ನ ಸುತ್ತಲು I ನೀ ಆಸ್ಥಾನವನೇರು, ಅವರನು ಪರಿಪಾಲಿಸಲು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಎಲ್ಲಾ ಜನಾಂಗಗಳು ನಿನ್ನ ಸುತ್ತಲು ಸಭೆಯಾಗಿ ಕೂಡಿರುವಲ್ಲಿ ನೀನು ಪುನಃ ಆರೋಹಣಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಎಲ್ಲಾ ಜನಾಂಗಗಳು ನಿನ್ನ ಸುತ್ತಲು ಸಭೆಯಾಗಿ ಕೂಡಿರುವಲ್ಲಿ ನೀನು ಪುನಹ ಆರೋಹಣಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಜನಾಂಗಗಳನ್ನು ನಿನ್ನ ಸುತ್ತಲೂ ಸೇರಿಸಿ ನಿನ್ನ ಉನ್ನತಸ್ಥಾನದಲ್ಲಿ ಆಸೀನನಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ರಾಷ್ಟ್ರಗಳು ನಿಮ್ಮ ಸುತ್ತಲು ಬಂದು ಸೇರಲಿ, ಉನ್ನತದಿಂದ ನೀವು ಅವರ ಮೇಲೆ ಸಿಂಹಾಸನದಲ್ಲಿದ್ದು ಆಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 7:7
13 ತಿಳಿವುಗಳ ಹೋಲಿಕೆ  

ಆತನ ನ್ಯಾಯತೀರ್ಪು ಸತ್ಯವಾದುದು, ನೀತಿಬದ್ಧವಾದುದು. ಇತ್ತಿರುವನಾತ ತೀರ್ಪನು ಮಹಾ ವೇಶ್ಯೆಯ ವಿರುದ್ಧ ಪೃಥ್ವಿಯನೇ ಹೊಲಸೆಬ್ಬಿಸಿದ ವ್ಯಭಿಚಾರಿಯ ವಿರುದ್ಧ ತನ್ನ ದಾಸರ ರಕ್ತಪಾತದ ಸೇಡನು ತೀರಿಸಿಹನಾತ,” ಎಂದು ಜನಸಮೂಹವು ಘೋಷಿಸಿತು.


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಉನ್ನತನಾದರೂ ಗಮನಿಸುವನು ಪ್ರಭು ದೀನರನು I ದೂರದಿಂದಲೇ ಗುರುತಿಸುವನಾತನು ಗರ್ವಿಷ್ಠರನು II


ಸಾಗರಗಳ ಗರ್ಜನೆಗಿಂತ I ಸಮುದ್ರ ತರಂಗಗಳಿಗಿಂತ I ಮಹೋನ್ನತ ಪ್ರಭು ಬಲವಂತ II


ಸಿಯೋನ್ ಪಟ್ಟಣಿಗರು ಹರ್ಷಗೊಳ್ಳಲಿ I ಯೆಹೂದ್ಯ ನಗರಗಳು ಆನಂದಪಡಲಿ I ನಿನ್ನ ನ್ಯಾಯವನು ನೆನಪಿಸಿಕೊಳ್ಳಲಿ II


ನನ್ನ ನ್ಯಾಯವನು ನಿರ್ಣಯಿಸು ದೇವಾ ಎಚ್ಚೆತ್ತು I ನನ್ನ ವಿವಾದವನು ವಿಚಾರಿಸು ಪ್ರಭು ನೀನೆದ್ದು ನಿಂತು II


ನಿರ್ಣಯಿಸು ನನ್ನ ನ್ಯಾಯವನು ಓ ದೇವಾ I ವಾದಿಸು ಆ ಭಕ್ತಿಹೀನ ಜನತೆಯ ವಿರುದ್ಧ I ಬಿಡಿಸೆನ್ನನು ವಂಚಕರಿಂದ, ಅಧರ್ಮಿಗಳಿಂದ II


ಇಸ್ರಯೇಲರ ದೇವ, ಸೇನಾಧೀಶ್ವರ ಪ್ರಭು, ನೀನು I ದಂಡಿಸು ನೀನೆಚ್ಚರಗೊಂಡು ಅನ್ಯಜನರೆಲ್ಲರನು I ತೋರಬೇಡ ದುರುಳ ದ್ರೋಹಿಗಳಾರಿಗೂ ದಯೆಯನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು