Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 70:4 - ಕನ್ನಡ ಸತ್ಯವೇದವು C.L. Bible (BSI)

4 ನಿನ್ನ ದರ್ಶನಾರ್ಥಿಗಳು ಹರ್ಷಿಸಲಿ, ನಿನ್ನಲಿ ನಲಿದು ಆನಂದಿಸಲಿ I ನಿನ್ನ ಉದ್ಧಾರಕ ಶಕ್ತಿ ಪ್ರಿಯರು ಸತತ “ದೇವನಿಗೆ ಉಘೇ” ಎನ್ನಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; ನಿನ್ನ ಜಯದಲ್ಲಿ ಆನಂದಿಸುವವರು, “ದೇವರು ಮಹೋನ್ನತನು” ಎಂದು ಯಾವಾಗಲೂ ಹೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; ನಿನ್ನ ಜಯದಲ್ಲಿ ಆನಂದಿಸುವವರು - ದೇವರಿಗೆ ಸ್ತೋತ್ರವೆಂದು ಯಾವಾಗಲೂ ಅನ್ನುವವರಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನನ್ನ ಆರಾಧಕರೆಲ್ಲರೂ ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ. ನಿನ್ನ ರಕ್ಷಣೆಯಲ್ಲಿ ಆನಂದಿಸುವವರು ನಿನ್ನನ್ನು ಯಾವಾಗಲೂ ಕೊಂಡಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ, ನಿಮ್ಮನ್ನು ಹುಡುಕುವವರೆಲ್ಲರೂ ನಿಮ್ಮಲ್ಲಿ ಹರ್ಷಾನಂದಗೊಳ್ಳಲಿ. ನಿಮ್ಮ ರಕ್ಷಣೆಯನ್ನು ಪ್ರೀತಿಸುವವರು, “ದೇವರು ಮಹೋನ್ನತರು,” ಎಂದು ಯಾವಾಗಲೂ ಹೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 70:4
8 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಒಳ್ಳೆಯವನು ಆತನನ್ನು ನಿರೀಕ್ಷಿಸುವವರಿಗೆ ಆತನನ್ನು ಹರಸಿ ಹಂಬಲಿಸುವ ಜನರಿಗೆ.


ನಿನ್ನನು ಅರಸುವವರೆಲ್ಲರು ಹರ್ಷಾನಂದಗೊಳ್ಳಲಿ I ನಿನ್ನ ರಕ್ಷಣಾಪ್ರಿಯರು ಸತತ “ಪ್ರಭು ಪರಾಕ್ರಮಿ” ಎನ್ನಲಿ II


ನನಗೆ ನ್ಯಾಯ ಬಯಸುವವರು ನಲಿದು ಮಾಡಲಿ ಜಯಕಾರ I “ದಾಸನ ಹಿತೈಷಿ ಪ್ರಭುಗೆ, ಜೈ” ಎಂಬ ನಿರಂತರ ಪ್ರಚಾರ II


ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು.


ಸಜ್ಜನರೇ, ಪ್ರಭುವಿನಲಿ ಆನಂದಿಸಿರಿ I ಆತನ ಶ್ರೀನಾಮವನು ಕೊಂಡಾಡಿರಿ II


ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ನೀವು ಅತ್ತುಗೋಳಾಡುವಿರಿ; ಲೋಕವಾದರೋ ನಕ್ಕು ನಲಿದಾಡುವುದು. ನೀವು ದುಃಖಪಡುವಿರಿ. ಆದರೆ ನಿಮ್ಮ ದುಃಖ ಆನಂದವಾಗಿ ಮಾರ್ಪಡುವುದು.


ದೊರಕುವುದು ದೇವಾ, ನಿನ್ನಾಶೀರ್ವಾದ ಸಜ್ಜನರಿಗೆ I ಕವಚವಾದಂತಿಹುದು ನಿನ್ನ ಕರುಣೆ ಅಂಥವರಿಗೆ II ಎಂದೇ ಹರ್ಷಾನಂದಗೊಳ್ವರು ನಿನ್ನನಾಶ್ರಯಿಸಿದವರೆಲ್ಲರು I ನೀ ರಕ್ಷಿಸೆ, ಉಲ್ಲಾಸಗೊಳ್ಳುವರು ನಿನ್ನ ನಾಮಪ್ರಿಯರೆಲ್ಲರು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು