Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 71:11 - ಕನ್ನಡ ಸತ್ಯವೇದವು C.L. Bible (BSI)

11 “ಹಿಡಿಯಿರಿ ಬೆನ್ನಟ್ಟಿ, ದೇವನವನನ್ನು ಕೈಬಿಟ್ಟಿಹನು I ರಕ್ಷಿಸುವಂಥವರಾರು ಇನ್ನಿಲ್ಲ” ಎನ್ನುತಿಹರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ದೇವರು ಅವನನ್ನು ಕೈಬಿಟ್ಟಿದ್ದಾನೆ; ಬೆನ್ನಟ್ಟಿ ಹಿಡಿಯಿರಿ; ಬಿಡಿಸುವವರು ಯಾರೂ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದೇವರು ಅವನನ್ನು ಕೈಬಿಟ್ಟಿದ್ದಾನೆ; ಬೆನ್ನಟ್ಟಿ ಹಿಡಿಯಿರಿ; ಬಿಡಿಸುವವರು ಯಾರೂ ಇಲ್ಲ ಎಂದು ಹೇಳಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ದೇವರು ಅವನನ್ನು ಕೈಬಿಟ್ಟಿದ್ದಾನೆ; ಬೆನ್ನಟ್ಟಿ ಅವನನ್ನು ಹಿಡಿಯಿರಿ; ಅವನಿಗೆ ಸಹಾಯಕರೇ ಇಲ್ಲ” ಎಂದು ಅವರು ಹೇಳಿಕೊಳ್ಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದೇನೆಂದರೆ, “ದೇವರು ಅವನನ್ನು ಕೈಬಿಟ್ಟಿದ್ದಾನೆ. ಅವನನ್ನು ಬೆನ್ನಟ್ಟಿ ಹಿಡಿಯಿರಿ, ಅವನನ್ನು ಬಿಡಿಸುವವರು ಯಾರೂ ಇಲ್ಲ,” ಎನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 71:11
13 ತಿಳಿವುಗಳ ಹೋಲಿಕೆ  

ಇಲ್ಲದಿರೆ ಶತ್ರು ತಿಳಿದಾನು ನನಗೆ ರಕ್ಷಕನಿಲ್ಲವೆಂದು I ಝಲ್ಲನೆ ಸೀಳಿಬಿಟ್ಟಾನು ಸಿಂಹದಂತೆ ಮೇಲೆಬಿದ್ದು II


ಸುಮಾರು ಮೂರು ಗಂಟೆಯ ಸಮಯದಲ್ಲಿ ಯೇಸುಸ್ವಾಮಿ, “ಏಲೀ, ಏಲೀ, ಲಮಾ ಸಬಕ್ತಾನಿ?” ಅಂದರೆ, “ನನ್ನ ದೇವರೇ, ನನ್ನ ದೇವರೇ, ನನ್ನನ್ನೇಕೆ ಕೈಬಿಟ್ಟಿರಿ?” ಎಂದು ಗಟ್ಟಿಯಾಗಿ ಕೂಗಿಕೊಂಡರು.


“ಈತನಿಗೆ ದೇವರ ನೆರವೆನಿತು?” I ಇಂತಿದೆ ಹಲವರ ಕೆಣಕು ಮಾತು II


ಮಿಕ್ಕವರು, “ತಾಳು, ಇವನನ್ನು ರಕ್ಷಿಸಲು ಎಲೀಯನು ಬರುವನೋ, ನೋಡೋಣ,” ಎಂದರು.


ಈಗಲಾದರು ನೀವು ಸಿದ್ಧರಾಗಿದ್ದು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿ ಕೇಳಿದ ಕೂಡಲೆ ಅಡ್ಡಬಿದ್ದು ನಾನು ಸ್ಥಾಪಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಇಲ್ಲವಾದರೆ ಈ ಗಳಿಗೆಯಲ್ಲೆ ನಿಮ್ಮನ್ನು ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲಾಗುವುದು. ನಿಮ್ಮನ್ನು ನನ್ನ ಕೈಯಿಂದ ಬಿಡಿಸಬಲ್ಲ ದೇವರು ಯಾರಿದ್ದಾನೆ?” ಎಂದು ಹೇಳಿದನು.


ದೇವನ ನೆನೆಯದವರೇ, ನೀಡಿರಿ ಗಮನವನು I ಇಲ್ಲವಾದರೆ ಛಿನ್ನಛಿನ್ನವಾಗಿಸಿಬಿಟ್ಟೇನು I ನನ್ನ ಕೈಯಿಂದ ತಪ್ಪಿಸುವವರಾರು ನಿಮ್ಮನು? II


“ನಿನ್ನ ದೇವನೆಲ್ಲಿ?” ಎಂದು ವಿರೋಧಿಗಳು ಸತತ ಹಂಗಿಸುವಾಗ I ನನ್ನೆಲುಬುಗಳು ಮುರಿದಂತಾಗುತ್ತದೆ ಆ ಜರೆಯ ಕೇಳಿದಾಗ II


ಪ್ರಭುವು ನ್ಯಾಯಪ್ರಿಯನು, ಭಕ್ತಜನರ ಪರಿಪಾಲಕನು I ಚಿರವುಳಿಸುವನು ಇವರನು, ಅಳಿಸುವನು ದುರುಳರ ಪೀಳಿಗೆಯನು II


ಸಜ್ಜನ ದಿಕ್ಕಿಲ್ಲದಿರುವುದನು, ಅವನ ಸಂತತಿ ಭಿಕ್ಷೆ ಬೇಡುವುದನು I ನಾ ಕಾಣೆನು, ವೃದ್ಧ ನಾನೆಂದೂ ಕಾಣೆನು, ಬಾಲ್ಯದಿಂದ ಕಾಣೆನು II


ದಾವೀದನು ಕೆಯೀಲಾದಲ್ಲಿದ್ದಾನೆಂಬ ಸಮಾಚಾರ ಸೌಲನಿಗೆ ಮುಟ್ಟಿತು. ಆಗ ಅವನು, “ದೇವರು ದಾವೀದನನ್ನು ನನ್ನ ಕೈಗೆ ಒಪ್ಪಿಸಿದ್ದಾರೆ. ಅವನು ಅಗುಳಿಕದಗಳಿಂದ ಭದ್ರವಾಗಿರುವ ಕೋಟೆಯನ್ನು ಪ್ರವೇಶಿಸಿದ್ದಾನಲ್ಲವೆ? ಅವನು ಅಲ್ಲಿಂದ ತಪ್ಪಿಸಿಕೊಳ್ಳಲಾರನು,” ಎಂದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು