Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 71:14 - ಕನ್ನಡ ಸತ್ಯವೇದವು C.L. Bible (BSI)

14 ನಾನಂತು ನಂಬಿರುವೆ ನಿನ್ನ ನಿರಂತರವಾಗಿ I ನಿನ್ನನು ಕೀರ್ತಿಸುತ್ತಿರುವೆ ಅಧಿಕಾಧಿಕವಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನಂತೂ ನಿರೀಕ್ಷಿಸಿಕೊಂಡೇ ಇರುವೆನು; ನಿನ್ನನ್ನು ಅಧಿಕಾಧಿಕವಾಗಿ ಹೊಗಳುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನಂತೂ ನಿರೀಕ್ಷಿಸಿಕೊಂಡೇ ಇರುವೆನು; ನಿನ್ನನ್ನು ಅಧಿಕಾಧಿಕವಾಗಿ ಹೊಗಳುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನಂತೂ ನಿನ್ನಲ್ಲೇ ಭರವಸವಿಟ್ಟಿರುವೆ. ನಿನ್ನನ್ನು ಹೆಚ್ಚೆಚ್ಚಾಗಿ ಕೊಂಡಾಡುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ನಾನು ಎಂದೆಂದೂ ನಿಮ್ಮನ್ನು ನಿರೀಕ್ಷಿಸುತ್ತಾ, ನಿಮ್ಮನ್ನು ಇನ್ನೂ ಹೆಚ್ಚೆಚ್ಚಾಗಿ ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 71:14
14 ತಿಳಿವುಗಳ ಹೋಲಿಕೆ  

ಇಸ್ರಯೇಲೇ, ನಂಬಿಕೊಂಡಿರು ಪ್ರಭುವನೆ I ಆತನಲ್ಲಿದೆ ಕರುಣೆ, ಪೂರ್ಣವಿಮೋಚನೆ II


ಕ್ರಿಸ್ತಯೇಸುವಿನಲ್ಲಿ ನಂಬಿಕೆ ನಿರೀಕ್ಷೆಯನ್ನಿಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧವಾಗಿಟ್ಟುಕೊಳ್ಳುತ್ತಾನೆ.


ಸರ್ವೇಶ್ವರನು ನಮ್ಮನ್ನು ಉದ್ಧರಿಸುವನೆಂದು ಎದುರುನೋಡುತ್ತಾ ತಾಳ್ಮೆಯಿಂದಿರುವುದು ಒಳಿತು.


ಹುಟ್ಟಿನಿಂದಲೆ ನಾ ನಿನಗಂಟಿಕೊಂಡಿರುವೆನಯ್ಯಾ I ಗರ್ಭದಿಂದಲೆ ನೀ ಎನ್ನನು ಕರೆದುತಂದೆಯಯ್ಯಾ I ನಿರಂತರವೂ ನಿನ್ನನು ಕೊಂಡಾಡುತ್ತಿರುವೆನಯ್ಯಾ II


ಎನ್ನ ಮನವೆ, ಚಿಂತಿಸುವೆಯೇಕೆ? ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ ಪರಮಾತ್ಮ ಆತನೆನಗೆ II


ಆದ್ದರಿಂದ ನೀವು ಸ್ವಸ್ಥಚಿತ್ತರಾಗಿರಿ. ನಿಮ್ಮ ಮನಸ್ಸು ಕಾರ್ಯೋನ್ಮುಖವಾಗಿರಲಿ. ಯೇಸುಕ್ರಿಸ್ತರು ಪ್ರತ್ಯಕ್ಷವಾಗುವಾಗ ನಿಮಗೆ ಲಭಿಸಲಿರುವ ಸೌಭಾಗ್ಯದಲ್ಲಿ ಪೂರ್ಣ ನಿರೀಕ್ಷೆ ಉಳ್ಳವರಾಗಿರಿ.


ಆ ದೃಢ ನಂಬಿಕೆಯನ್ನು ಕಳೆದುಕೊಳ್ಳಬೇಡಿ; ಅದರ ಪ್ರತಿಫಲ ಮಹತ್ತಾದುದು.


ಇಂತಿರಲು ನಿನ್ನ ಕರುಣೆಯನ್ನು ನೆನಪಿಗೆ ತಂದುಕೊಳ್ಳುತ್ತೇನೆ ಅದರಿಂದಲೆ ನನಗೆ ನಂಬಿಕೆ-ನಿರೀಕ್ಷೆ ಮರುಕಳಿಸುತ್ತದೆ.


ನೀವು ಪ್ರೀತಿಯಲ್ಲಿ ಪ್ರವರ್ಧಿಸುತ್ತಾ, ಪೂರ್ಣ ಜ್ಞಾನ ಹಾಗೂ ವಿವೇಕದಿಂದ ಕೂಡಿದವರಾಗಬೇಕೆಂಬುದೇ ನನ್ನ ಪ್ರಾರ್ಥನೆ.


ಮಕೆದೋನಿಯದಲ್ಲಿ ವಾಸಿಸುವ ಎಲ್ಲ ಸಹೋದರರನ್ನೂ ನೀವು ಪ್ರೀತಿಸುತ್ತಿರುವುದೇನೋ ನಿಜ. ಆದರೂ ಸಹೋದರರೇ, ನಿಮ್ಮ ಈ ಪ್ರೀತಿ ಇನ್ನೂ ಅಧಿಕಾಧಿಕವಾಗಬೇಕೆಂಬುದೇ ನಮ್ಮ ಆಶಯ.


ಇಗೋ, ದೇವರು ಕೊಲ್ಲುವನೆನ್ನನು ಅದಕ್ಕಾಗಿ ನಾನು ಕಾದಿರುವೆನು. ಆದರೂ ನನ್ನ ನಡತೆ ಸರಿಯೆಂಬುದನು ಆತನ ಮುಂದೆಯೆ ರುಜುವಾತುಪಡಿಸುವೆನು.


ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.


“ನನ್ನ ಪಾಲಿನ ಸೊತ್ತು ಸರ್ವೇಶ್ವರನೇ, ನಿರೀಕ್ಷಿಸುತ್ತಿರುವೆನು ನಾನು ಆತನನ್ನೇ” ಇಂತೆಂದುಕೊಳ್ಳುತ್ತದೆ ನನ್ನ ಅಂತರಾತ್ಮ.


ಸರ್ವೇಶ್ವರ ಒಳ್ಳೆಯವನು ಆತನನ್ನು ನಿರೀಕ್ಷಿಸುವವರಿಗೆ ಆತನನ್ನು ಹರಸಿ ಹಂಬಲಿಸುವ ಜನರಿಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು