ಕೀರ್ತನೆಗಳು 71:15 - ಕನ್ನಡ ಸತ್ಯವೇದವು C.L. Bible (BSI)15 ವರ್ಣಿಸುವೆನು ದಿನವೆಲ್ಲ ನಿನ್ನ ನ್ಯಾಯನೀತಿಯನು I ವಿವರಿಸಲು ಅಸದಳವಾದ ನಿನ್ನಗಣಿತ ರಕ್ಷಣೆಯನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನನ್ನ ಬಾಯಿ ನಿನ್ನ ನೀತಿಯನ್ನು, ರಕ್ಷಣೆಯನ್ನು ಹಗಲೆಲ್ಲಾ ವರ್ಣಿಸುತ್ತಿರುವುದು; ಆದರೂ ಅವುಗಳ ವಿವರಣೆ ನನಗೆ ಅಸಾಧ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನನ್ನ ಬಾಯಿ ನಿನ್ನ ನೀತಿಯನ್ನೂ ರಕ್ಷಣೆಯನ್ನೂ ಹಗಲೆಲ್ಲಾ ವರ್ಣಿಸುತ್ತಿರುವದು; ಆದರೂ ಅವುಗಳ ವಿವರಣೆ ನನಗೆ ಅಸಾಧ್ಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಿನ್ನ ಒಳ್ಳೆಯತನವನ್ನೂ ರಕ್ಷಣೆಯನ್ನೂ ನಾನು ಹಗಲೆಲ್ಲಾ ಹೇಳುತ್ತಲೇ ಇರುವೆನು. ಅವು ವರ್ಣಿಸಲಸಾಧ್ಯವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನನ್ನ ಬಾಯಿ ದಿನವೆಲ್ಲಾ ನಿಮ್ಮ ನೀತಿಯನ್ನೂ ನಿಮ್ಮ ರಕ್ಷಣೆಯನ್ನೂ ಪ್ರಕಟಿಸುವುದು. ಅವುಗಳನ್ನು ವಿವರಿಸಲು ನನಗೆ ತಿಳಿಯದು. ಅಧ್ಯಾಯವನ್ನು ನೋಡಿ |