Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 71:19 - ಕನ್ನಡ ಸತ್ಯವೇದವು C.L. Bible (BSI)

19 ನಿನ್ನ ಶಕ್ತಿ, ನಿನ್ನ ನೀತಿ ದೇವಾ, ಗಗನ ಮುಟ್ಟುತ್ತಿಹವು I ಮಹತ್ಕಾರ್ಯಗಳೆಸಗಿದ ನಿನಗೆ ದೇವಾ, ಯಾರು ಸಾಟಿಯು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ದೇವರೇ, ನಿನ್ನ ನೀತಿಯು ಆಕಾಶವನ್ನು ನಿಲುಕುವಷ್ಟು ಮಹೋನ್ನತವಾಗಿದೆ. ಮಹತ್ತರವಾದ ಕೃತ್ಯಗಳನ್ನು ನಡೆಸಿದ ದೇವರೇ, ನಿನಗೆ ಸಮಾನರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ದೇವರೇ, ನಿನ್ನ ನೀತಿಯು ಆಕಾಶವನ್ನು ನಿಲುಕುವಷ್ಟು ಮಹೋನ್ನತವಾಗಿದೆ. ಮಹತ್ಕೃತ್ಯಗಳನ್ನು ನಡಿಸಿದ ದೇವರೇ, ನಿನಗೆ ಸಮಾನರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದೇವರೇ, ನಿನ್ನ ನೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ. ನೀನು ಅದ್ಭುತಕಾರ್ಯಗಳನ್ನು ಮಾಡಿರುವೆ. ದೇವರೇ, ನಿನ್ನಂಥ ದೇವರು ಬೇರೆಲ್ಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ದೇವರೇ, ನಿಮ್ಮ ನೀತಿಯು ಆಕಾಶವನ್ನು ಮುಟ್ಟುತ್ತದೆ. ಮಹತ್ಕಾರ್ಯಗಳನ್ನು ಮಾಡಿದ ದೇವರೇ, ನಿಮ್ಮ ಹಾಗೆ ಯಾರಿದ್ದಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 71:19
20 ತಿಳಿವುಗಳ ಹೋಲಿಕೆ  

“ಬಿಡಿಸಿದೆ ಬಡವನನು ದರೋಡೆಗಾರರಿಂದ I ರಕ್ಷಿಸಿದೆ ದುರ್ಬಲನನು ಬಲಾಢ್ಯರಿಂದ I ಹೇ ಪ್ರಭು, ನಿನಗೆ ಸಮಾನರಾರೆಂದು” I ಹೊಗಳುವುವು ನನ್ನೆಲುಬುಗಳೊಂದೊಂದು II


ನಿನ್ನಚಲ ಪ್ರೀತಿ ಮುಟ್ಟುತ್ತಿದೆ ಗಗನಮಂಡಲವನು I ನಿನ್ನ ಸತ್ಯಸಂಧತೆ ತಾಕುತ್ತಿದೆ ಮೇಘಮಂಡಲವನು II


“ಎಷ್ಟೋ ಉನ್ನತ ಆಕಾಶವು ಭೂಮಿಯಿಂದ ಅಷ್ಟೂ ಉನ್ನತ ನನ್ನ ಮಾರ್ಗ ನಿಮ್ಮ ಮಾರ್ಗಗಳಿಗಿಂತ, ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತ.


ಏಕೆನೆ ಮಾಡಿಹನೆನಗೆ ಸರ್ವಶಕ್ತನು ಮಹತ್ಕಾರ್ಯ I ನಿಜಕ್ಕೂ ಆತನ ನಾಮಧೇಯ ಪರಮಪೂಜ್ಯ II


ಜನಾಂಗಗಳ ಒಡೆಯಾ, ಅರಸರೇ, ನಿಮಗೆ ಅಂಜದೆ ಇರುವವರಾರು? ಹೌದು, ನೀವು ಭಯಭಕ್ತಿಗೆ ಪಾತ್ರರು ರಾಷ್ಟ್ರಗಳ ಜ್ಞಾನಿಗಳಲ್ಲೂ ರಾಜಪರಂಪರೆಯಲ್ಲೂ ಯಾವನೂ ಇಲ್ಲ ನಿಮಗೆ ಸಮಾನನು.


“ಇಂತಿರಲು ನನ್ನನ್ನು ಯಾರಿಗೆ ಹೋಲಿಸಬಲ್ಲಿರಿ?” ಯಾರಿಗೆ ನನ್ನನ್ನು ಸರಿಸಮಾನ ಮಾಡಬಲ್ಲಿರಿ?” ಎಂದು ಕೇಳುತ್ತಿಹರು ಪರಮಪಾವನ ಸ್ವಾಮಿ.


ಇಂತಿರಲು ಯಾರಿಗೆ ಹೋಲಿಸಬಲ್ಲಿರಿ ದೇವರನು? ಕೊಡಬಲ್ಲಿರಾ ಆತನಿಗೆ ಯಾವುದಾದರೊಂದು ಉಪಮಾನವನು?


ದೇವರುಗಳಲಿ ಪ್ರಭು, ನಿನ್ನಂಥವನಿಲ್ಲ I ನಿನ್ನ ಮಹತ್ಕಾರ್ಯಗಳಿಗೆ ಸಾಟಿಯೇ ಇಲ್ಲ II


ಸುತ್ಯರ್ಹನು ಸ್ವಾಮಿದೇವನು, ಇಸ್ರಯೇಲರ ದೇವನು I ಆತನೋರ್ವನೇ ಮಹತ್ಕಾರ್ಯಗಳನು ಎಸಗುವಂತವನು II


ದೇವರೆಸಗುತ್ತಾನೆ ಅಸಾಧ್ಯ ಅತಿಶಯಗಳನು ಅಸಂಖ್ಯವಾದ ಅದ್ಭುತಕಾರ್ಯಗಳನು.


ಹೇ ಸರ್ವೇಶ್ವರಾ, ದೇವರುಗಳಲ್ಲಿ ನಿನಗಾರು ಸಮಾನನು? ಎಲ್ಲಿ ನಿನ್ನಂತೆ ಪವಿತ್ರತೆಯಲ್ಲಿ ಸರ್ವೋತ್ತಮನು? ಪ್ರಖ್ಯಾತ ಕಾರ್ಯವೆಸಗುವುದರಲ್ಲಿ ನಿನ್ನಂತೆ ಭಯಂಕರನು? ಅದ್ಭುತಗಳ ನಡೆಸುವುದರಲ್ಲಿ ನಿನ್ನ ಹೋಲುವವನು?


ಸೇನಾಧೀಶ್ವರ ಸ್ವಾಮಿಯಾದರೋ ನ್ಯಾಯತೀರಿಸುವುದರಲ್ಲಿ ಸರ್ವಶ್ರೇಷ್ಠರು. ಧರ್ಮಪಾಲನೆಯಲ್ಲಿ ಪರಮಪರಿಶುದ್ಧರು ಎಂದು ಕಾಣಿಸಿಕೊಳ್ಳುತ್ತಾರೆ.


ವಿವೇಕಿಗಳ ಮಾರ್ಗ ಏರಿಸುವುದು ಸಜ್ಜೀವಕ್ಕೆ; ಅದನ್ನು ಕೈಗೊಳ್ಳುವವರು ಇಳಿಯರು ಪಾತಾಳಕ್ಕೆ.


ನನ್ನ ಕುರಿತು ನಿನಗಿರುವ ಅರಿವು ಅಗಾಧ I ನನ್ನ ಬುದ್ಧಿಗದು ಸಿಲುಕದಷ್ಟು ಉನ್ನತ II


ಜ್ಞಾನವು ಮೂರ್ಖನಿಗೆ ಎಟುಕದಷ್ಟು ಎತ್ತರ; ನ್ಯಾಯಸ್ಥಾನದಲ್ಲಿ ಅವನು ಬಾಯಿಬಿಡಲಾರ.


ನಿನ್ನಚಲ ಪ್ರೀತಿ, ಹೇ ದೇವಾ, ಎಷ್ಟೋ ಅಮೂಲ್ಯ I ನಿನ್ನಕ್ಕರೆಯ ರೆಕ್ಕೆಗಳಡಿ ನರಮಾನವರಿಗಾಶ್ರಯ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು