Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 71:21 - ಕನ್ನಡ ಸತ್ಯವೇದವು C.L. Bible (BSI)

21 ನನ್ನ ಗೌರವವನು ಅಧಿಕರಿಸಯ್ಯಾ I ಮರಳಿ ನೆಮ್ಮದಿಯನು ಪಾಲಿಸಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನನ್ನ ಗೌರವವನ್ನು ಹೆಚ್ಚಿಸು; ನನಗೆ ಅಭಿಮುಖನಾಗಿ ಸಂತೈಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನನ್ನ ಗೌರವವನ್ನು ಹೆಚ್ಚಿಸು; ನನಗೆ ಅಭಿಮುಖನಾಗಿ ಸಂತೈಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀನು ನನ್ನ ಘನತೆಯನ್ನು ಮೊದಲಿಗಿಂತಲೂ ಹೆಚ್ಚಿಸುವೆ. ನೀನೇ ನನ್ನನ್ನು ಸಂತೈಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀವು ನನ್ನ ಗೌರವವನ್ನು ಹೆಚ್ಚಿಸಿ ನನ್ನನ್ನು ಮತ್ತೊಮ್ಮೆ ಆದರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 71:21
16 ತಿಳಿವುಗಳ ಹೋಲಿಕೆ  

ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಬಹುದಿನಗಳವರೆಗೆ ಯುದ್ಧ ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಸೌಲನ ವಂಶ ದುರ್ಬಲವಾಗುತ್ತಾ ಬಂದಿತು.


ನಿನ್ನ ನೆರವು, ಸಾಂತ್ವನ, ನನಗಿದೆಯೆಂದು I ನೀಡೊಂದು ಪ್ರಭು, ಶುಭಸೂಚನೆಯನು I ಅದನೋಡಿ ಶತ್ರು ಪಡಲಿ ಲಜ್ಜೆಯನು II


ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು, ಅಂಜೆನು ಕೇಡಿಗೆ I ನಿನ್ನ ಕುರಿಗೋಲು, ಊರುಗೋಲು, ಧೈರ್ಯವನು ತರುವುದೆನಗೆ I ಕಾಣೆನೆಂದಿಗೂ ನಾ ದಿಗಿಲನು, ನೀನಿರಲು ನನ್ನೊಂದಿಗೆ II


ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನಮ್ಮನ್ನು ಸದಾ ವಿಜಯೋತ್ಸವದತ್ತ ನಡೆಸುವ ಹಾಗು ಕ್ರಿಸ್ತಜ್ಞಾನವೆಂಬ ಪರಿಮಳವನ್ನು ಎಲ್ಲೆಡೆಯಲ್ಲೂ ನಮ್ಮ ಮೂಲಕ ಪಸರಿಸುವ ದೇವರಿಗೆ ವಂದನೆಗಳು.


ಮತ್ತೆ ಆತ ಇಂತೆಂದನು ನನಗೆ : “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”


ಆ ದಿನದಂದು ಹಾಡುವುದು ಜನತೆ ಹೀಗೆಂದು : “ಹೇ ಸರ್ವೇಶ್ವರಾ, ನಿನಗೆನ್ನ ವಂದನ; ನಿನಗಿತ್ತು ಎನ್ನ ಮೇಲೆ ಕೋಪ ಮನ. ಆದರೆ ಅದೀಗ ಆಗಿದೆ ಶಮನ, ಬಂದಿತೆನ್ನ ಮನಕೆ ಸಾಂತ್ವನ.


‘ದುಷ್ಟರ ಕಷ್ಟನಷ್ಟಗಳು ಅನೇಕ I ಪ್ರಭುವನು ನಂಬಿದವರ ಸುತ್ತ ಮರುಕ’ ” II


ನನ್ನ ಪರ ನೀನೇ ಗುರಾಣಿ ಹಿಡಿದು ರಕ್ಷಿಸಿದೆ I ನಿನ್ನ ಬಲಗೈ ನನಗೆ ಆಧಾರವಾಗಿದೆ I ನಿನ್ನ ಕೃಪಾವರ ತಂದಿತು ನನಗೆ ದೊಡ್ಡಸ್ತಿಕೆ II


ಹರ್ಷಧ್ವನಿಗೈ ಆಕಾಶವೇ ಉಲ್ಲಾಸಪಡು ಪೊಡವಿಯೇ ತಟ್ಟಾಡಿರಿ ಬೆಟ್ಟಗುಡ್ಡಗಳೇ ಏಕೆನೆ ಸಂತೈಸಿಹನು ಸರ್ವೇಶ್ವರ ತನ್ನ ಪ್ರಜೆಯನು ಕನಿಕರಿಸಿಹನು ಶೋಷಿತರಾದ ತನ್ನ ಜನರನು.


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ರಾಜರುಗಳು ಸಾಷ್ಟಾಂಗವೆರಗಲಿ ಆತನಿಗೆ I ರಾಷ್ಟ್ರ, ಘನರಾಷ್ಟ್ರಗಳು ಸೇವೆಸಲ್ಲಿಸಲಿ ಆತನಿಗೆ II


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ನಿಮ್ಮ ನಿಮಿತ್ತ ನಮಗೆ ಲಭಿಸಿರುವ ಆನಂದಕ್ಕಾಗಿ ದೇವರಿಗೆ ಎಷ್ಟು ಕೃತಜ್ಞತೆಯನ್ನು ಸಲ್ಲಿಸಿದರೂ ಸಾಲದು.


ಅಷ್ಟೇ ಅಲ್ಲ, ನೀವೆಲ್ಲರೂ ತೀತನ ಮನಸ್ಸನ್ನು ತಣಿಸಿದ್ದರಿಂದ ಆತನ ಸಂತೋಷವನ್ನು ಕಂಡು ನಾವು ಮತ್ತಷ್ಟು ತೃಪ್ತರಾಗಿದ್ದೇವೆ.


ಆದರೂ ಎದೆಗುಂದಿದವರನ್ನು ಸಂತೈಸುವ ದೇವರು ತೀತನನ್ನು ಕಳುಹಿಸಿ ನಮ್ಮನ್ನು ಸಂತೈಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು