Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 71:22 - ಕನ್ನಡ ಸತ್ಯವೇದವು C.L. Bible (BSI)

22 ನಿನ್ನ ಸತ್ಯತೆಗಾಗಿ ಓ ಎನ್ನ ದೇವಾ I ಕಿನ್ನರಿಯನು ನುಡಿಸುತಾ ಭಜಿಸುವೆನಯ್ಯಾ II ಇಸ್ರಯೇಲಿನ ಆ ಪರಮಪಾವನ ಸ್ವಾಮಿಯ I ವೀಣೆವಾದ್ಯದೊಂದಿಗೆ ಕೀರ್ತಿಸುವೆನಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನನ್ನ ದೇವರೇ, ನಿನ್ನ ಸತ್ಯತೆಯನ್ನು ಸ್ಮರಿಸುವೆನು; ಸ್ವರಮಂಡಲದಿಂದ ನಿನ್ನನ್ನು ಸಂಕೀರ್ತಿಸುವೆನು. ಇಸ್ರಾಯೇಲರ ಪರಿಶುದ್ಧ ದೇವರು, ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಭಜಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನನ್ನ ದೇವರೇ, ನಿನ್ನ ಸತ್ಯತೆಯನ್ನು ಸ್ಮರಿಸುವೆನು; ಸ್ವರಮಂಡಲದಿಂದ ನಿನ್ನನ್ನು ಸಂಕೀರ್ತಿಸುವೆನು. ಇಸ್ರಾಯೇಲ್ಯರ ಸದಮಲಸ್ವಾವಿುಯೇ, ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಭಜಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾನು ಹಾರ್ಪ್‌ವಾದ್ಯವನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು. ನನ್ನ ದೇವರೇ, ನಿನ್ನ ನಂಬಿಕೆಗಸ್ತಿಕೆಯನ್ನು ಕೊಂಡಾಡುವೆನು. ಇಸ್ರೇಲಿನ ಪರಿಶುದ್ಧನೇ, ಲೈರ್‌ವಾದ್ಯವನ್ನು ನುಡಿಸುತ್ತಾ ನಿನ್ನನ್ನು ಭಜಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನನ್ನ ದೇವರೇ, ನಾನು ನಿಮ್ಮನ್ನು ಸ್ತುತಿಸುವೆನು. ನಿಮ್ಮ ನಂಬಿಗಸ್ತಿಕೆಗಾಗಿ ವೀಣೆಯಿಂದ ಕೊಂಡಾಡುವೆನು. ಇಸ್ರಾಯೇಲರ ಪರಿಶುದ್ಧರೇ, ಕಿನ್ನರಿಯಿಂದ ನಿಮ್ಮನ್ನು ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 71:22
26 ತಿಳಿವುಗಳ ಹೋಲಿಕೆ  

ನೀನು ನಿಂದಿಸಿ ದೂಷಿಸುತ್ತಿರುವುದು ಯಾರನ್ನು? ಕಿರಿಚಿ ಹೀಯಾಳಿಸುತ್ತಿರುವುದು ಯಾರನ್ನು? ಗರ್ವದಿಂದ ದುರುಗುಟ್ಟಿ ನೋಡಿದುದು ಯಾರನ್ನು? ಇಸ್ರಯೇಲರ ಸದಮಲಸ್ವಾಮಿಯನ್ನು ಅಲ್ಲವೇನು?


ಪ್ರಭುವನು ಕೊಂಡಾಡಿ ಕಿನ್ನರಿಯನು ನುಡಿಸುತ I ಕೀರ್ತಿಸಿ ದಶತಂತಿ ವೀಣೆಯನು ಬಾರಿಸುತ II


ಗುರಾಣಿಯಂತಿಹ ನಮ್ಮ ರಾಜನು ಪ್ರಭುವಿನವನೇ I ಇಸ್ರಯೇಲಿನ ಪರಮಪಾವನ ಸ್ವಾಮಿಗೆ ಸೇರಿದವನೇ II


ನಿರೀಕ್ಷಿಸುತ್ತಿಹರು ನನ್ನನು ದೂರದ ನಿವಾಸಿಗಳು ಮುಂದಾಗಿ ಬರುತಿಹವು ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಸರ್ವೇಶ್ವರನ ಶ್ರೀನಾಮ ನಿಧಿಯಾದ ಇಲ್ಲಿಗೆ; ನಿನ್ನ ಘನಪಡಿಸಿದ ಇಸ್ರಯೇಲಿನ ಪರಮಪಾವನನ ಸನ್ನಿಧಿಗೆ. ಹೊತ್ತು ತರುತಿಹರು ನಿನ್ನ ಮಕ್ಕಳನು ಜೊತೆಗೆ ಅವರ ಬೆಳ್ಳಿಬಂಗಾರಗಳನು.


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯೆಯಿರುವ ಆ ಘನವಂತನ ಇಸ್ರಯೇಲಿನಾ ಸ್ವಾಮಿ ಪರಮಪಾವನ.”


ಹೀಗಿರಲು, ಒಣಗಿದ ಕಳೆಯನ್ನು ಅಗ್ನಿಜ್ವಾಲೆ ಕಬಳಿಸುವಂತೆ, ಒಣಹುಲ್ಲು ಬೆಂಕಿಯಲ್ಲಿ ಬೂದಿಯಾಗುವಂತೆ, ಅವರ ಬೇರು ಕೊಳೆತುಹೋಗುವುದು. ಅವರ ಹೂ ಧೂಳಿನಂತೆ ತೂರಿಹೋಗುವುದು. ಏಕೆಂದರೆ, ಅವರು ಸೇನಾಧೀಶ್ವರಸ್ವಾಮಿಯ ಉಪದೇಶವನ್ನು ನಿರಾಕರಿಸಿದ್ದಾರೆ. ಇಸ್ರಯೇಲಿನ ಪರಮಪಾವನ ಸ್ವಾಮಿಯ ವಾಕ್ಯವನ್ನು ಅಸಡ್ಡೆಮಾಡಿದ್ದಾರೆ.


ಹಾಡುವೆ ದೇವಾ, ನಿನಗೆ ನೂತನ ಕೀರ್ತನೆಯನು I ಪಾಡುವೆ ನುಡಿಸುತ್ತಾ ದಶತಂತಿಯ ವೀಣೆಯನು II


ಕಂಡುಬಂದಿತು ಜಗದ ಎಲ್ಲೆ ಎಲ್ಲೆಗೆ I ನಮ್ಮ ದೇವ ಸಾಧಿಸಿದ ಜಯಗಳಿಕೆ II ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು I ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು II


ಪುರಾತನ ಕಾಲದಲ್ಲಿ ನಮ್ಮ ಪಿತೃಗಳಿಗೆ ಪ್ರಮಾಣಮಾಡಿದಂತೆ ಯಕೋಬ ವಂಶದವರಿಗೆ ನಂಬಿಕಸ್ಥರಾಗಿರಿ. ಅಬ್ರಹಾಮನ ವಂಶದವರಿಗೆ ಪ್ರೀತಿಪರರಾಗಿರಿ.


ನಿನ್ನ ದೇವರಾದ ಸರ್ವೇಶ್ವರ ನಾನು, ಇಸ್ರಯೇಲರ ಪರಮಪಾವನ ಸ್ವಾಮಿ, ನಿನ್ನ ರಕ್ಷಕ ನಾನು. ಈಡುಮಾಡಿದ್ದೇನೆ ಈಜಿಪ್ಟನ್ನು ನಿನ್ನ ವಿಮೋಚನೆಗಾಗಿ ಕೊಟ್ಟಿದ್ದೇನೆ ಸುಡಾನ್ ಸೆಬಾ ನಾಡುಗಳನ್ನು ನಿನಗೆ ಈಡಾಗಿ.


“ಸ್ವಾಮಿ ತ್ವರೆಮಾಡಲಿ, ತನ್ನ ಕಾರ್ಯವನ್ನು ತುರ್ತಾಗಿ ನಡೆಸಲಿ, ನೋಡೋಣ; ಇಸ್ರಯೇಲಿನ ಪರಮ ಪಾವನ ಸ್ವಾಮಿಯ ಯೋಜನೆ ಶೀಘ್ರವಾಗಿ ಕೈಗೂಡಲಿ, ಆಗ ಪರಿಗ್ರಹಿಸೋಣ” ಎಂದು ಹೇಳುವ ಜನರಿಗೆ ಧಿಕ್ಕಾರ !


ಸೇನಾಧೀಶ್ವರ ಸ್ವಾಮಿಯಾದರೋ ನ್ಯಾಯತೀರಿಸುವುದರಲ್ಲಿ ಸರ್ವಶ್ರೇಷ್ಠರು. ಧರ್ಮಪಾಲನೆಯಲ್ಲಿ ಪರಮಪರಿಶುದ್ಧರು ಎಂದು ಕಾಣಿಸಿಕೊಳ್ಳುತ್ತಾರೆ.


ಪೊಗಳುವೆ ನಿನ್ನ ನಾಮವನು ತಲೆಬಾಗಿ ನಿನ್ನ ಪವಿತ್ರಾಲಯದತ್ತ I ನಿನ್ನ ಪ್ರೀತಿಸತ್ಯತೆಗಳ, ನಾಮ ನುಡಿಗಳ ಮಹತ್ವದ ಪ್ರಯುಕ್ತ II


ಪ್ರಭು, ಕೀರ್ತಿಸುವೆನು ಸದಾ ನಿನ್ನಚಲ ಪ್ರೀತಿಯನು I ಸಾರುವೆನು ತಲತಲಾಂತರಕು ನಿನ್ನ ಸತ್ಯತೆಯನು II


ಪದೇಪದೇ ಪರೀಕ್ಷಿಸಿದರು ದೇವರನು I ಕೆಣಕಿದರು ಇಸ್ರಯೇಲರ ಸದಮಲನನು II


ದೇವರಲ್ಲೇ ನಿರ್ಭೀತ ನಂಬಿಕೆ ನನಗೆ I ಹೆಮ್ಮೆ ಪಡುವೆನು ಆತನಿತ್ತ ವಾಗ್ದಾನಕೆ I ನರಮಾನವರು ಏನು ಮಾಡಿಯಾರೆನಗೆ? II


ಪ್ರಭುವಿನೊಪ್ಪಂದಗಳ ಪಾಲಕರಿಗೆ ಆತನ ಮಾರ್ಗಗಳು ಸನ್ನುತ I ಆತನ ವಿಧಿ ನಿಬಂಧನೆಗಳ ಪರಿಪಾಲಕರಿಗೆ ಅವುಗಳು ಸುಪ್ರೀತ II


ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನಗಳನ್ನು ನೆರವೇರಿಸಿ ತಮ್ಮ ಪ್ರಾಮಾಣಿಕತೆಯನ್ನು ವ್ಯಕ್ತಪಡಿಸುವಂತೆ


ಬರುವೆನಾಗ ನಿನ್ನ ಬಲಿಪೀಠದ ಬಳಿಗೆ I ನನ್ನಾನಂದ ನಿಧಿಯಾದ ನಿನ್ನ ಸನ್ನಿಧಿಗೆ I ವೀಣೆ ನುಡಿಸಿ ದೇವಾ, ನಿನ್ನ ಸ್ತುತಿಸಲಿಕೆ II


ಭೂನಿವಾಸಿಗಳೇ, ಮಾಡಿರಿ ಜಯಕಾರ ಪ್ರಭುವಿಗೆ I ಮುದದಿ ಹಾಡಿರಿ, ಮಾಡಿರಿ ಸುಮಧುರ ಭಜನೆ II


ಪ್ರಭುವನು ಸ್ತುತಿಸಿರಿ ಕಿನ್ನರಿಯೊಂದಿಗೆ I ಭಜಿಸಿರಿ ಆತನನು ವಾದ್ಯಮೇಳದೊಂದಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು