Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 71:24 - ಕನ್ನಡ ಸತ್ಯವೇದವು C.L. Bible (BSI)

24 ನನಗೆ ಕೇಡು ಬಗೆದವರಿದೋ ಪಡೆದರು ನಿಂದೆ ಅಪಮಾನವನು I ದಿನವೆಲ್ಲ ವರ್ಣಿಪುದೆನ್ನ ನಾಲಿಗೆ ನಿನ್ನೀ ನೀತಿಸಾಧನೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನನ್ನ ಕೇಡಿಗೆ ಪ್ರಯತ್ನಿಸಿದವರು ಆಶಾಭಂಗಪಟ್ಟು ಅಪಮಾನ ಹೊಂದಿದ್ದಾರೆ. ಆದುದರಿಂದ ನನ್ನ ನಾಲಿಗೆಯು ದಿನವೆಲ್ಲಾ ನಿನ್ನ ನೀತಿಸಾಧನೆಯನ್ನು ವರ್ಣಿಸುತ್ತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನನ್ನ ಕೇಡಿಗೆ ಪ್ರಯತ್ನಿಸಿದವರು ಆಶಾಭಂಗಪಟ್ಟು ಅಪಮಾನಹೊಂದಿದ್ದಾರೆ. ಆದುದರಿಂದ ನನ್ನ ನಾಲಿಗೆಯು ದಿನವೆಲ್ಲಾ ನಿನ್ನ ನೀತಿಸಾಧನೆಯನ್ನು ವರ್ಣಿಸುತ್ತಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನನ್ನ ನಾಲಿಗೆಯು ನಿನ್ನ ಒಳ್ಳೆಯತನದ ಬಗ್ಗೆ ಹಾಡುತ್ತಲೇ ಇರುವುದು. ನನ್ನನ್ನು ಕೊಲ್ಲಬೇಕೆಂದಿರುವವರು ಸೋತುಹೋಗಿ ಅವಮಾನಕ್ಕೀಡಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನನ್ನ ನಾಲಿಗೆಯು ಸಹ ದಿನವೆಲ್ಲಾ ನಿಮ್ಮ ನೀತಿಯನ್ನು ಮಾತನಾಡುವುದು, ಏಕೆಂದರೆ ನನಗೆ ಕೇಡು ಬಗೆಯುವವರು ನಾಚಿಕೊಂಡು ತಲೆ ತಗ್ಗಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 71:24
13 ತಿಳಿವುಗಳ ಹೋಲಿಕೆ  

ಆಶಾಭಂಗವು ದಹಿಸಿಬಿಡಲಿ ನನ್ನ ಪ್ರಾಣ ಕಂಟಕರನು I ನಿಂದಾಪಮಾನ ಕವಿದುಬಿಡಲಿ ನನಗೆ ಕೇಡು ಬಗೆವವರನು II


ಶತ್ರುಗಳೆಲ್ಲರನ್ನು ತಮ್ಮ ಪಾದಪೀಠವಾಗಿಸಿಕೊಳ್ಳುವ ತನಕ ಅವರು ರಾಜ್ಯವಾಳಬೇಕಾಗಿದೆ.


ನಾ ಕಣ್ಣಾರೆ ಕಂಡಿರುವೆ ಶತ್ರುಗಳಿಗಾದ ದುರ್ಗತಿಯನು I ಕಿವಿಯಾರೆ ಕೇಳಿರುವೆ ನನ್ನ ವಿರೋಧಿಗಳಿಗಾದ ವಿಪತ್ತನು II


ಆಗೆನ್ನ ಜಿಹ್ವೆ ಸಾರುವುದು ನಿನ್ನ ನೀತಿಯನು I ದಿನವೆಲ್ಲಾ ವರ್ಣಿಸುವುದು ನಿನ್ನ ಕೀರ್ತಿಯನು II


ನಿಮ್ಮ ಬಾಯಿಂದ ಕೆಟ್ಟಮಾತುಗಳು ಬಾರದಿರಲಿ. ಪ್ರತಿಯಾಗಿ ನಿಮ್ಮ ಮಾತುಗಳು ಆದರ್ಶಕರವಾಗಿರಲಿ; ಸಮಯೋಚಿತವಾಗಿರಲಿ, ಕೇಳುವವರ ಕಿವಿಗದು ಹಿತಕರವಾಗಿರಲಿ.


ಒಳ್ಳೆಯವನು ತನ್ನ ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ; ಕೆಟ್ಟವನು ತನ್ನ ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ.


ವರ್ಣಿಸುವೆನು ದಿನವೆಲ್ಲ ನಿನ್ನ ನ್ಯಾಯನೀತಿಯನು I ವಿವರಿಸಲು ಅಸದಳವಾದ ನಿನ್ನಗಣಿತ ರಕ್ಷಣೆಯನು II


ನಿನ್ನ ಗುಣಗಾನ ನನ್ನ ಬಾಯ್ತುಂಬ I ನಿನ್ನ ಘೋಷಣೆ ನನಗೆ ದಿನವಾದ್ಯಂತ II


ಸಜ್ಜನರ ಬಾಯಿ ಆಡುವುದು ಸುಜ್ಞಾನವನು I ಅವನ ನಾಲಿಗೆ ನುಡಿಯುವುದು ನ್ಯಾಯನೀತಿಯನು II


ನೀವು ಮನೆಯಲ್ಲಿರುವಾಗಲೂ ಪ್ರಯಾಣದಲ್ಲಿರುವಾಗಲೂ ಮಲಗುವಾಗಲೂ ಏಳುವಾಗಲೂ ಇವುಗಳ ವಿಷಯದಲ್ಲಿ ಮಾತಾಡುತ್ತಾ ನಿಮ್ಮ ಮಕ್ಕಳಿಗೆ ಇವುಗಳನ್ನು ಮನದಟ್ಟಾಗಿಸಬೇಕು.


“ಆಹಾಹಾ” ಎಂದೆನ್ನ ಜರೆಯುವವರು I ಬೆಂಗೊಟ್ಟು ಓಡಲಿ ಆ ಲಜ್ಜೆಗೆಟ್ಟವರು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು