Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 71:3 - ಕನ್ನಡ ಸತ್ಯವೇದವು C.L. Bible (BSI)

3 ನೀನಾಗಿರು ನನಗಾಶ್ರಯದುರ್ಗ, ಕೋಟೆಕೊತ್ತಲು I ನೀನೇ ನನ್ನ ದುರ್ಗ, ಕೋಟೆ ನನ್ನನು ರಕ್ಷಿಸಲು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ಯಾವಾಗಲೂ ಮರೆಹೋಗುವ ಆಶ್ರಯಗಿರಿಯಾಗಿರು; ನನ್ನ ರಕ್ಷಣೆಗೋಸ್ಕರ ಆಜ್ಞಾಪಿಸಿದ್ದೀಯಲ್ಲವೇ. ನೀನೇ ನನ್ನ ಬಂಡೆಯೂ, ಕೋಟೆಯೂ ಆಗಿದ್ದೀಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾನು ಯಾವಾಗಲೂ ಮರೆಹೊಗುವ ಆಶ್ರಯಗಿರಿಯಾಗಿರು; ನನ್ನ ರಕ್ಷಣೆಗೋಸ್ಕರ ಆಜ್ಞಾಪಿಸಿದ್ದೀಯಲ್ಲವೇ. ನೀನೇ ನನ್ನ ಬಂಡೆಯೂ ಕೋಟೆಯೂ ಆಗಿದ್ದೀಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀನೇ ನನ್ನ ಸಂರಕ್ಷಣೆಯ ಆಶ್ರಯಗಿರಿಯಾಗಿರು. ನನ್ನನ್ನು ರಕ್ಷಿಸಲು ಆಜ್ಞಾಪಿಸು. ನೀನೇ ನನ್ನ ಬಂಡೆಯೂ ಕೋಟೆಯೂ ಆಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ಯಾವಾಗಲೂ ಆಶ್ರಯಿಸಿಕೊಳ್ಳುವ ಬಂಡೆಯಾಗಿರಿ. ನನ್ನನ್ನು ರಕ್ಷಿಸುವುದಕ್ಕೆ ಆಜ್ಞಾಪಿಸಿರಿ. ನನ್ನ ಬಂಡೆಯೂ ನನ್ನ ಕೋಟೆಯೂ ನೀವೇ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 71:3
17 ತಿಳಿವುಗಳ ಹೋಲಿಕೆ  

ಪ್ರಭುವೇ ನನ್ನ ಕಲ್ಲುಕೋಟೆ, ನನಗೆ ವಿಮೋಚಕ I ಆತನೇ ನನ್ನ ದೇವ, ನನ್ನಾಶ್ರಯ ದುರ್ಗ I ಆತನೆನಗೆ ಗುರಾಣಿ, ಗಿರಿ, ರಕ್ಷಣಾಶೃಂಗ II


ಸರ್ವೇಶ್ವರನ ನಾಮ ಬಲವಾದ ಗೋಪುರ; ಅದರೊಳಗೆ ಓಡಿ ಆಶ್ರಯ ಪಡೆದರೆ ಸುಭದ್ರ.


ಪ್ರಭುವನೆ ನಿನ್ನಾಶ್ರಯವಾಗಿಸಿಕೊಂಡಿರುವುದರಿಂದ I ಪರಾತ್ಪರನನೆ ನಿನ್ನ ನಿವಾಸ ಆಗಿಸಿಕೊಂಡದ್ದರಿಂದ II


ಆದಿಯಿಂದ ದೇವರೇ ನಿಮಗೆ ಶ್ರೀನಿವಾಸ ಆತನ ಹಸ್ತವೇ ನಿಮಗೆ ನಿತ್ಯಾಧಾರ! ಶತ್ರುಗಳನು ಹೊರಡಿಸುವನು ನಿಮ್ಮ ಬಳಿಯಿಂದ ಅವರನು ಸಂಹರಿಸಲು ಆಜ್ಞಾಪಿಸಿಹನು ಆತ.


ಯಕೋಬಿಗೆ ವಿಜಯ ಗಿಟ್ಟಿಸಿದಾತ I ನೀನಲ್ಲವೆ ದೇವಾ, ನನ್ನ ಅರಸ? II


ಹಗಲಲಿ ಪ್ರೀತಿಯನುಗ್ರಹಿಸಲಿ ದೇವನೆನಗೆ I ಇರುಳಲಿ ಎನ್ನಯ ಬಾಯಲ್ಲಿರಲಿ ಆತನ ಗೀತೆ I ಪ್ರಾರ್ಥನೆ ಸಲ್ಲಲಿ ಎನ್ನ ಜೀವಾಧಾರ ದೇವಗೆ II


ಅಂಥವನಿಗೆ ಗಿರಿದುರ್ಗವೇ ಆಶ್ರಯ, ಅನ್ನ ಆಹಾರ ಉಚಿತ, ನೀರುನಿಡಿ ನಿಸ್ಸಂದೇಹ.


ನಿನ್ನ ಶಕ್ತಿಸಾಮರ್ಥ್ಯವನು ಹೇ ದೇವಾ, ಪ್ರದರ್ಶಿಸು I ನಮ್ಮ ಪರ ಪ್ರಯೋಗಿಸಿದ ಬಲವನು ಮರಳಿ ತೋರ್ಪಡಿಸು II


ವೃದ್ಧ, ಯುವಕ, ಯುವತಿ, ಮಹಿಳೆ, ಬಾಲಕ ಎನ್ನದೆ ಸಕಲರನ್ನೂ ಸಂಹಾರ ಮಾಡಿಬಿಡಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿ,” ಎಂದು ನನಗೆ ಕೇಳಿಸುವಂತೆ ಅಪ್ಪಣೆಮಾಡಿದರು. ಆಗ ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.


ಆತನೇ ನನಗೆ ಬಂಡೆ, ಕೋಟೆ, ದುರ್ಗ, ಉದ್ಧಾರಕ I ನನಗೆ ರಕ್ಷಾಕವಚ, ಆಶ್ರಯ, ಶತ್ರು ವಿಧ್ವಂಸಕ II


ಪ್ರಭೂ, ತಲತಲಾಂತರಕ್ಕೆ I ಶ್ರೀನಿವಾಸ ನೀನೆಮಗೆ II


ಪ್ರಭು ಸ್ತುತ್ಯಾರ್ಹನು I ಶತ್ರುಗಳಿಂದ ಕಾಪಾಡುವನು, ನಾನವಗೆ ಮೊರೆಯಿಡಲು II


ಮಾಡುವೆನವನನು ಜೇಷ್ಠಪುತ್ರನನ್ನಾಗಿ I ಭೂರಾಜರುಗಳೊಳು ಅತ್ಯುನ್ನತನನ್ನಾಗಿ I


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು