Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 72:1 - ಕನ್ನಡ ಸತ್ಯವೇದವು C.L. Bible (BSI)

1 ತಿಳಿಸು ನಿನ್ನ ನ್ಯಾಯವನು ದೇವಾ, ರಾಜನಿಗೆ I ಕಲಿಸು ನಿನ್ನ ನೀತಿಯನು ರಾಜಕುವರನಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರೇ, ಅರಸನಿಗೆ ನಿನ್ನ ನ್ಯಾಯವನ್ನು; ರಾಜಕುಮಾರನಿಗೆ ನಿನ್ನ ನೀತಿಯನ್ನು ಅನುಗ್ರಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರೇ, ಅರಸನಿಗೆ ನಿನ್ನ ನ್ಯಾಯವನ್ನು ಕಲಿಸಿಕೊಡು; ರಾಜಕುಮಾರನಾದ ಅವನಿಗೆ ನಿನ್ನ ನೀತಿಯನ್ನು ಅನುಗ್ರಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರೇ, ನಿನ್ನಂತೆ ನ್ಯಾಯವಾಗಿ ತೀರ್ಪುನೀಡಲು ರಾಜನಿಗೆ ಕಲಿಸಿಕೊಡು. ನಿನ್ನ ನೀತಿಯನ್ನು ಕಲಿತುಕೊಳ್ಳಲು ರಾಜಕುಮಾರನಿಗೆ ಸಹಾಯಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರೇ, ನಿಮ್ಮ ನ್ಯಾಯವನ್ನು ಅರಸನಿಗೆ ಕಲಿಸಿಕೊಡಿರಿ. ನಿಮ್ಮ ನೀತಿಯನ್ನು ರಾಜಕುಮಾರನಿಗೆ ಕಲಿಸಿಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 72:1
14 ತಿಳಿವುಗಳ ಹೋಲಿಕೆ  

ನೆಲಸುವುದಾತನ ಮೇಲೆ ಜ್ಞಾನವಿವೇಕದಾಯಕ ಆತ್ಮ; ಶಕ್ತಿ ಸಮಾಲೋಚನೆಯನ್ನೀಯುವ ಆತ್ಮ; ಸರ್ವೇಶ್ವರನ ಅರಿವನು, ಭಯವನು ಹುಟ್ಟಿಸುವ ಆತ್ಮ ಅಹುದು, ನೆಲಸುವುದಾತನ ಮೇಲೆ ಸರ್ವೇಶ್ವರನ ಆತ್ಮ.


ನಿಮ್ಮ ಪ್ರಜೆಯಾದ ಈ ಮಹಾಜನಾಂಗವನ್ನು ಆಳುವುದಕ್ಕೆ ಸಮರ್ಥರಾರು! ನಾನು ಈ ಜನರ ನಾಯಕನಾಗಿ ಇವರನ್ನು ಪರಿಪಾಲಿಸುವುದಕ್ಕೆ ಬೇಕಾದ ಜ್ಞಾನ ವಿವೇಕಗಳನ್ನು ನನಗೆ ಅನುಗ್ರಹಿಸಿರಿ,” ಎಂದು ದೇವರನ್ನು ಬೇಡಿಕೊಂಡನು.


ನನ್ನ ಮಗ ಸೊಲೊಮೋನನು ನಿಮ್ಮ ಆಜ್ಞಾವಿಧಿನಿಯಮಗಳನ್ನು ಅನುಸರಿಸುವಂತೆ ಮಾಡಿರಿ; ನಾನು ಯಾವ ಮಂದಿರ ನಿರ್ಮಾಣಕ್ಕಾಗಿ ಇದನ್ನೆಲ್ಲಾ ಸಂಗ್ರಹಿಸಿದ್ದೇನೋ ಆ ನಿಮ್ಮ ಮಂದಿರವನ್ನು ಇವನು ನಿಷ್ಠೆಯಿಂದ ಕಟ್ಟಿಸಿ ಮುಗಿಸುವಂತೆ ಅನುಗ್ರಹಿಸಿರಿ.”


ಯಾಜಕ ಚಾದೋಕನು ದೇವದರ್ಶನದ ಗುಡಾರದಲ್ಲಿದ್ದ ಎಣ್ಣೆಯ ಕೊಂಬನ್ನು ತೆಗೆದುಕೊಂಡು ಸೊಲೊಮೋನನನ್ನು ಅಭಿಷೇಕಿಸಿದನು. ಕೂಡಲೆ ಕೊಂಬನ್ನೂದುತ್ತಾ ಜನರೆಲ್ಲರು, “ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ!” ಎಂದು ಘೋಷಿಸಿದರು.


ಪ್ರಭುವೇ ಮನೆಮಠವನು ಕಟ್ಟದ ಹೊರತು I ಅದನು ಕಟ್ಟುವವರ ಪ್ರಯಾಸ ವ್ಯರ್ಥ II ಪ್ರಭುವೇ ಪಟ್ಟಣವನು ಕಟ್ಟಿದ ಹೊರತು I ಕಾವಲುಗಾರನು ಅದನು ಕಾಯುವುದು ವ್ಯರ್ಥ II


ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ. ಏಕೆಂದರೆ ದೇವರು ಆತನಿಗೆ ಪವಿತ್ರಾತ್ಮ ಅವರನ್ನು ಪೂರ್ಣವಾಗಿ ಕೊಟ್ಟಿರುತ್ತಾರೆ.


ಇಸ್ರಯೇಲರ ದೇವನು, ಅವರಾಶಕ್ತನು, ಹೀಗೆಂದು ನನಗೆ ನುಡಿದನು


ಆದುದರಿಂದ ಅದನ್ನು ಆಳುವುದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸಿರಿ. ಈ ಮಹಾಜನಾಂಗವನ್ನು ಆಳಲು ಯಾರೂ ಸಮರ್ಥರಲ್ಲ,” ಎಂದು ಬೇಡಿಕೊಂಡನು.


ದಾವೀದನು ಇಸ್ರಯೇಲರ ಅರಸನಾಗಿ ಪ್ರಜೆಗಳೆಲ್ಲರನ್ನು ಧರ್ಮಾನುಸಾರ, ನ್ಯಾಯಯುತವಾಗಿ ನಡೆಸುತ್ತಿದ್ದನು.


ನಿನಗೆ ಒಬ್ಬ ಮಗ ಹುಟ್ಟುವನು; ಅವನು ಸಮಾಧಾನ ಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲ ವಿರೋಧಿಗಳನ್ನು ಅಡಗಿಸಿ ಅವನಿಗೆ ಶಾಂತಿ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನ ಎಂಬ ಹೆಸರಿರುವುದು. ಅವನ ಕಾಲದಲ್ಲಿ ಇಸ್ರಯೇಲರಿಗೆ ಶಾಂತಿಸಮಾಧಾನವನ್ನೂ ಸೌಭಾಗ್ಯವನ್ನೂ ದಯಪಾಲಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು