Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 72:10 - ಕನ್ನಡ ಸತ್ಯವೇದವು C.L. Bible (BSI)

10 ಕಪ್ಪಗಳನರ್ಪಿಸಲಿ ತಾರ್ಷಿಷ್ ಹಾಗೂ ದ್ವೀಪದ್ವೀಪದ ರಾಜರುಗಳು I ಕಾಣಿಕೆಗಳ ತಂದೊಪ್ಪಿಸಲಿ ಶೆಬಾ ಹಾಗೂ ಸೆಬಾದ ರಾಜರುಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ತಾರ್ಷೀಷ್ ಪ್ರಾಂತ್ಯದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ತಾರ್ಷೀಷ್‍ಪ್ರಾಂತದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ತಾರ್ಷೀಷಿನ ರಾಜರುಗಳೂ ಬಹುದೂರದ ದೇಶಗಳವರೂ ಅವನಿಗೆ ಉಡುಗೊರೆಗಳನ್ನು ಕೊಡಲಿ. ಶೆಬಾ ಮತ್ತು ಸೆಬಾ ಪ್ರಾಂತ್ಯಗಳ ರಾಜರುಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ಅರಸನಿಗೆ ಸಲ್ಲಿಸಲಿ. ಶೆಬ ಮತ್ತು ಸೆಬದ ಅರಸರು ದಾನಗಳನ್ನು ತಂದೊಪ್ಪಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 72:10
19 ತಿಳಿವುಗಳ ಹೋಲಿಕೆ  

ತುಂಬಿರುವುವು ನಿನ್ನೊಳು ಒಂಟೆಗಳ ಗುಂಪುಗಳು ಮಿದ್ಯಾನಿನ, ಏಫದ ಪ್ರಾಯದ ಒಂಟೆಗಳು. ಬರುವರೆಲ್ಲರು ಶೆಬದಿಂದ, ತರುವರು ಬಂಗಾರ, ಧೂಪಗಳನು ಸಾರುವರೆಲ್ಲರು ಸರ್ವೇಶ್ವರನ ಸ್ತುತ್ಯಕಾರ್ಯಗಳನು.


ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು : “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”


ಜೆರುಸಲೇಮಿನ ನಿನ್ನ ಮಹಾದೇವಾಲಯದ ಪ್ರಯುಕ್ತ I ಅರಸರು ನಿನಗೆ ಕಾಣಿಕೆಯನು ತಂದೊಪ್ಪಿಸುವುದು ಅತಿಸೂಕ್ತ II


ಸರ್ವೇಶ್ವರನ ನಾಮಮಹತ್ತಿನಿಂದ ಸೊಲೊಮೋನನ ಕೀರ್ತಿ ಹರಡಿತು. ಇದನ್ನು ಕೇಳಿದ ಶೆಬದ ರಾಣಿ ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕೆ ಬಂದಳು.


ನಿರೀಕ್ಷಿಸುತ್ತಿಹರು ನನ್ನನು ದೂರದ ನಿವಾಸಿಗಳು ಮುಂದಾಗಿ ಬರುತಿಹವು ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಸರ್ವೇಶ್ವರನ ಶ್ರೀನಾಮ ನಿಧಿಯಾದ ಇಲ್ಲಿಗೆ; ನಿನ್ನ ಘನಪಡಿಸಿದ ಇಸ್ರಯೇಲಿನ ಪರಮಪಾವನನ ಸನ್ನಿಧಿಗೆ. ಹೊತ್ತು ತರುತಿಹರು ನಿನ್ನ ಮಕ್ಕಳನು ಜೊತೆಗೆ ಅವರ ಬೆಳ್ಳಿಬಂಗಾರಗಳನು.


ಟೈರ್ ನಾಡಿಗರು ನಿನಗೆ ಕಾಣಿಕೆಯಿತ್ತು ಸನ್ಮಾನಿಸುವರು I ಸಿರಿವಂತ ಪ್ರಜೆಗಳು ನಿನ್ನುಪಕಾರವನು ಕೋರಿಬರುವರು II


ಅರಸನ ಹಡಗುಗಳು ಹೂರಾಮನ ನಾವಿಕರ ಜೊತೆಯಲ್ಲಿ ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ಕಪಿ, ನವಿಲು ಇವುಗಳನ್ನು ತರುತ್ತಿದ್ದವು.


ಕೂಷನ ಮಕ್ಕಳು - ಸೆಬಾ, ಹವೀಲ, ಸಬ್ತಾ, ರಗ್ಮ, ಸಬ್ತಕಾ ಎಂಬ ಜನಾಂಗಗಳು. ರಗ್ಮ ಸಂತಾನದವರು -‍ ಶೆಬಾ, ದೆದಾನ್ ಎಂಬ ಜನಾಂಗಗಳು.


ಜ್ಯೋತಿಷಿಗಳು ಆ ಮನೆಯನ್ನು ಪ್ರವೇಶಿಸಿ ಮಗುವನ್ನು ತಾಯಿ ಮರಿಯಳ ಬಳಿ ಕಂಡು ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ತಮ್ಮ ತಮ್ಮ ಬೊಕ್ಕಸಗಳನ್ನು ಬಿಚ್ಚಿ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳ ಇವುಗಳನ್ನು ಮಗುವಿಗೆ ಪಾದಕಾಣಿಕೆಯಾಗಿ ಸಮರ್ಪಿಸಿದರು.


ರಾಷ್ಟ್ರಗಳು ಬರುವುವು ನಿನ್ನ ಬೆಳಕಿಗೆ ಅರಸರು ನಿನ್ನ ಉದಯದ ಶೋಭೆಗೆ.


ನಾನಪ್ಪಣೆ ಕೊಡುವೆ ‘ಬೀಳ್ಕೊಡು’ ಎಂದು ಬಡಗಲಿಗೆ ‘ತಡೆಯಬೇಡ’ ಎಂದು ನಾನೇ ಹೇಳುವೆ ತೆಂಕಲಿಗೆ. ಹೀಗೆ ಬರಮಾಡುವೆ ನನ್ನ ಕುವರರನ್ನು ದೂರದಿಂದ ಬರಮಾಡುವೆ ನನ್ನ ಕುವರಿಯರನ್ನು ದಿಗಂತಗಳಿಂದ.


ನಿನ್ನ ದೇವರಾದ ಸರ್ವೇಶ್ವರ ನಾನು, ಇಸ್ರಯೇಲರ ಪರಮಪಾವನ ಸ್ವಾಮಿ, ನಿನ್ನ ರಕ್ಷಕ ನಾನು. ಈಡುಮಾಡಿದ್ದೇನೆ ಈಜಿಪ್ಟನ್ನು ನಿನ್ನ ವಿಮೋಚನೆಗಾಗಿ ಕೊಟ್ಟಿದ್ದೇನೆ ಸುಡಾನ್ ಸೆಬಾ ನಾಡುಗಳನ್ನು ನಿನಗೆ ಈಡಾಗಿ.


ಸಮುದ್ರಯಾತ್ರಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ದ್ವೀಪಾಂತರ ನಿವಾಸಿಗಳೇ, ನೂತನ ಗೀತವ ಹಾಡಿ ಹೊಗಳಿ ಸರ್ವೇಶ್ವರನನು, ದಿಗಂತಗಳಲ್ಲಿಯೂ ಕೀರ್ತಿಸಿ ಆತನನು.


ಎಡವಿ ಬೀಳನವನು, ಎದೆಗುಂದನವನು ಜಗದೊಳು ಸ್ಥಾಪಿಸುವ ತನಕ ಸದ್ಧರ್ಮವನು, ಎದುರುನೋಡುವುವು ದ್ವೀಪ-ದ್ವೀಪಾಂತರಗಳು ಆತನ ಧರ್ಮಶಾಸ್ತ್ರವನು.


ಅವರೆಲ್ಲರೂ ಅವನಿಗೆ ವರ್ಷ ವರ್ಷ ಬೆಳ್ಳಿ ಬಂಗಾರದ ಸಾಮಾನು, ಉಡುಪು, ಯುದ್ಧಾಯುಧ, ಸುಗಂಧದ್ರವ್ಯ, ಕುದುರೆ, ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.


ಆಕೆ ಅರಸನಿಗೆ ನಾಲ್ಕು ಸಾವಿರ ಕಿಲೋಗ್ರಾಂಗೂ ಹೆಚ್ಚು ಬಂಗಾರವನ್ನು, ಅಪರಿಮಿತ ಸುಗಂಧದ್ರವ್ಯವನ್ನು ಹಾಗು ರತ್ನಗಳನ್ನು ಕೊಟ್ಟಳು. ಶೆಬದ ರಾಣಿ ಅರಸ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವನ್ನು ಬೇರೆ ಯಾರೂ ಈ ನಾಡಿಗೆ ಕೊಟ್ಟಿರಲಿಲ್ಲ.


ಆಕೆ ಸುಗಂಧದ್ರವ್ಯ, ಅಪರಿಮಿತವಾದ ಬಂಗಾರ, ರತ್ನ, ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾಪರಿವಾರದೊಡನೆ ಜೆರುಸಲೇಮಿಗೆ ಬಂದಳು. ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು.


ಅರಸ ಅಹಷ್ವೇರೋಷನು ತನ್ನ ರಾಜ್ಯಕ್ಕೆ ಸೇರಿದ ಎಲ್ಲಾ ದೇಶಗಳ ಮೇಲೂ ಸಮುದ್ರ-ದ್ವೀಪಗಳ ಮೇಲೂ ತೆರಿಗೆಯನ್ನು ವಿಧಿಸಿದನು.


ದಂಡಿಸು ಜಂಡು ಕಾಡುಮೃಗದಂಥಾ ನಾಡನು I ಗದರಿಸು ಹೋರಿ ದನಕುರಿಗಳಂಥಾ ನಾಡುಗಳನು II ಚದರಿಸು ಕಲಹಕಾಳಗ ಪ್ರಿಯ ಜನಾಂಗಗಳನು I ಅಡ್ಡಬೀಳಿಸು ನಿನಗೆ ಬೆಳ್ಳಿಗಟ್ಟಿ ತಂದವರನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು