Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 72:11 - ಕನ್ನಡ ಸತ್ಯವೇದವು C.L. Bible (BSI)

11 ರಾಜರುಗಳು ಸಾಷ್ಟಾಂಗವೆರಗಲಿ ಆತನಿಗೆ I ರಾಷ್ಟ್ರ, ಘನರಾಷ್ಟ್ರಗಳು ಸೇವೆಸಲ್ಲಿಸಲಿ ಆತನಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ; ಸರ್ವಜನಾಂಗಗಳು ಆತನನ್ನು ಸೇವಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ; ಸರ್ವಜನಾಂಗಗಳು ಅವನನ್ನು ಸೇವಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅರಸರುಗಳೆಲ್ಲಾ ನಮ್ಮ ರಾಜನಿಗೆ ಅಡ್ಡಬೀಳಲಿ. ಜನಾಂಗಗಳೆಲ್ಲಾ ಅವನ ಸೇವೆಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹೌದು, ಎಲ್ಲಾ ಅರಸರು ನಮ್ಮ ಅರಸನ ಮುಂದೆ ಅಡ್ಡಬೀಳಲಿ. ಎಲ್ಲಾ ಜನಾಂಗಗಳು ಅರಸನಿಗೆ ಸೇವೆಸಲ್ಲಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 72:11
15 ತಿಳಿವುಗಳ ಹೋಲಿಕೆ  

ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ಬರುವುವು ನೀನುಂಟುಮಾಡಿದ ಸಕಲ ಜನಾಂಗಗಳು I ನಿನ್ನ ನಾಮವನು ಘನಪಡಿಸಲು, ನಿನಗೆ ಅಡ್ಡಬೀಳಲು II


ರಾಷ್ಟ್ರಗಳ ಸಿರಿಸಂಪತ್ತನ್ನೂ ಘನಮಾನವನ್ನೂ ಅಲ್ಲಿಗೆ ತರಲಾಗುವುದು.


ಅದರ ಬೆಳಕಿನಲ್ಲಿ ಸರ್ವಜನಾಂಗಗಳು ಸಂಚರಿಸುವರು. ಭೂರಾಜರು ತಮ್ಮ ಸಿರಿಸಂಪತ್ತನ್ನು ಅಲ್ಲಿಗೆ ತರುವರು.


ಅವರು ಯಜ್ಞದ ಕುರಿಮರಿಯ ಮೇಲೆ ಯುದ್ಧಮಾಡುವರು. ಆದರೆ ಯಜ್ಞದ ಕುರಿಮರಿಗೆ ಜಯವಾಗುವುದು. ಆ ಕುರಿಮರಿಯು ಒಡೆಯರಿಗೆಲ್ಲಾ ಒಡೆಯನೂ ರಾಜಾಧಿರಾಜನೂ ಆಗಿರುವುದೇ ಇದಕ್ಕೆ ಕಾರಣ. ದೇವರ ಕರೆ ಹೊಂದಿದವರೂ ದೇವರು ಆಯ್ದುಕೊಂಡವರೂ ಆದ ಪ್ರಾಮಾಣಿಕ ಅನುಯಾಯಿಗಳು ಆ ಜಯದಲ್ಲಿ ಪಾಲುಗಾರರಾಗುವರು,” ಎಂದನು.


ನಿನ್ನ ಸೃಷ್ಟಿಕರ್ತನೆ ನಿನಗೆ ಪತಿಯು ‘ಸೇನಾಧೀಶ್ವರನಾದ ಸರ್ವೇಶ್ವರ’ ಆತನ ಹೆಸರು. ಇಸ್ರಯೇಲಿನ ಪರಮಪಾವನನೆ ನಿನ್ನ ಉದ್ಧಾರಕನು. ‘ಸರ್ವಲೋಕದ ದೇವ’ ಆತನ ನಾಮಧೇಯ.


ಪ್ರಿಯ ಸಹೋದರರೇ, ನೀವೇ ಬುದ್ಧಿವಂತರೆಂದು ಉಬ್ಬಿಹೋಗಬೇಡಿ. ನಿಮಗೊಂದು ನಿಗೂಢ ರಹಸ್ಯವನ್ನು ತಿಳಿಸಬಯಸುತ್ತೇನೆ. ಅದೇನೆಂದರೆ, ಇಸ್ರಯೇಲರ ಮೊಂಡುತನವು ತಾತ್ಕಾಲಿಕವಾದುದು. ಇಸ್ರಯೇಲರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವ ತನಕ ಮಾತ್ರ ಅದು ಇರುತ್ತದೆ.


ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು : “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”


ಹಾನಿಯನು, ಕೇಡನು ಮಾಡರಾರೂ ನನ್ನ ಪರ್ವತದ ಮೇಲೆ. ಸಮುದ್ರದಂತೆ ತುಂಬಿರುವುದು ಸರ್ವೇಶ್ವರನ ಜ್ಞಾನ, ಧರೆಯ ಮೇಲೆ.


ನೀರು ಹರಿಯುತ್ತಲೇ ಇದೆ ಅವರ ಕಪಿಲೆಗಳಿಂದ ಅವರ ಬಿತ್ತನೆಗೆ ನೀರಿನ ಕೊರತೆಯೆಂಬುದಿಲ್ಲ. ಅಗಾಗ್ ರಾಜನಿಗಿಂತ ಶ್ರೇಷ್ಠ ಅವರ ಅರಸ ಅಭಿವೃದ್ಧಿಯಾಗುತ್ತಿದೆ ಅವರ ರಾಜ್ಯ.


ನೆಲದ ಮೇಲೆ ಹರಿದಾಡುವ ಹಾವುಹಲ್ಲಿಗಳಂತೆ ಅವರು ಮಣ್ಣು ಮುಕ್ಕುವರು; ಗಡಗಡನೆ ನಡುಗುತ್ತಾ ಬಿಲದಿಂದ ಈಚೆ ಬರುವರು. ಸರ್ವೇಶ್ವರ ಎಂಬ ನಮ್ಮ ದೇವರಾದ ನಿಮ್ಮ ಕಡೆಗೆ ಭಯಭಕ್ತಿಯಿಂದ ತಿರುಗಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು