Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 72:12 - ಕನ್ನಡ ಸತ್ಯವೇದವು C.L. Bible (BSI)

12 ಏಕೆನೆ ಕಾಪಾಡುವನಾತ ಮೊರೆಯಿಡುವ ಬಡವರನು I ಉದ್ಧರಿಸುವನಾತ ದಿಕ್ಕಿಲ್ಲದ ದೀನದಲಿತರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಏಕೆಂದರೆ ಅವನು ಮೊರೆಯಿಡುವ ಬಡವರನ್ನೂ, ದಿಕ್ಕಿಲ್ಲದೆ ಕುಗ್ಗಿದವರನ್ನೂ ಉದ್ಧರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯಾಕಂದರೆ ಅವನು ಮೊರೆಯಿಡುವ ಬಡವರನ್ನೂ ದಿಕ್ಕಿಲ್ಲದೆ ಕುಗ್ಗಿದವರನ್ನೂ ಉದ್ಧರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಮ್ಮ ರಾಜನು ನಿಸ್ಸಹಾಯಕರಿಗೆ ಸಹಾಯ ಮಾಡುವನು. ನಮ್ಮ ರಾಜನು ಬಡವರಿಗೂ ಅಸಹಾಯಕರಿಗೂ ಸಹಾಯ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಏಕೆಂದರೆ ಅರಸನಿಗೆ ಮೊರೆಯಿಡುವ ಬಡವರನ್ನೂ ಸಹಾಯಕನಿಲ್ಲದ ಬಾಧೆಪಡುವವರನ್ನೂ ಬಿಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 72:12
19 ತಿಳಿವುಗಳ ಹೋಲಿಕೆ  

ಏಕೆಂದರೆ ಮೊರೆಯಿಡುತ್ತಿದ್ದ ಬಡವನನು ಗತಿಯಿಲ್ಲದ ಅನಾಥನನು ಆದರಿಸುತ್ತಿದ್ದೆ ನಾನು.


ತಿರಸ್ಕರಿಸನಾತ ನಿರ್ಗತಿಕರ ಮೊರೆಯನು I ನೆರವೇರಿಸದೆ ಬಿಡನು ಅವರ ಕೋರಿಕೆಯನು II


ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು.


ಇದಾದ ಮೇಲೆ ಈ ಜಗದಲ್ಲಿ ಎಲ್ಲಾ ತರದ ಚಿತ್ರಹಿಂಸೆಗಳನ್ನು ಕುರಿತು ಯೋಚಿಸಿದೆ. ಅಯ್ಯೋ, ಹಿಂಸೆಗೆ ಈಡಾದವರ ಕಣ್ಣೀರನ್ನು ಕುರಿತು ಏನೆಂದು ಹೇಳಲಿ? ಅವರನ್ನು ಸಂತೈಸುವವರು ಯಾರೂ ಇಲ್ಲ. ಹಿಂಸಾಚಾರಿಗಳು ಶಕ್ತಿಸಾಮರ್ಥ್ಯ ಉಳ್ಳವರು. ಸಂತೈಸುವವರಾದರೋ ಒಬ್ಬರೂ ಇರಲಿಲ್ಲ.


ದೀನ ಕೋರಿಕೆಯನು ಪ್ರಭು, ತೀರಿಸುವೆ I ಹುರಿದುಂಬಿಸಿ, ಅವರ ಮೊರೆಗೆ ಕಿವಿಗೊಡುವೆ II


ಪ್ರಭು ಯೇಸುಕ್ರಿಸ್ತರ ಕೃಪಾಶಕ್ತಿಯನ್ನು ನೀವು ಬಲ್ಲಿರಿ. ಅವರು ತಮ್ಮ ಬಡತನದಿಂದ ನಿಮ್ಮನ್ನು ಶ್ರೀಮಂತವಾಗಿಸಲೆಂದು, ತಾವು ಶ್ರೀಮಂತರಾಗಿದ್ದರೂ ನಿಮಗೋಸ್ಕರ ಬಡವರಾದರು.


“ದೇವರಾತ್ಮ ನನ್ನ ಮೇಲಿದೆ ದೀನದಲಿತರಿಗೆ ಶುಭಸಂದೇಶವನ್ನು ಬೋಧಿಸಲೆಂದು ಅವರೆನ್ನನು ಅಭಿಷೇಕಿಸಿದ್ದಾರೆ; ಬಂಧಿತರಿಗೆ ಬಿಡುಗಡೆಯನ್ನು, ಅಂಧರಿಗೆ ದೃಷ್ಟಿದಾನವನ್ನು ಪ್ರಕಟಿಸಲೂ ಶೋಷಿತರಿಗೆ ಸ್ವಾತಂತ್ರ್ಯ ನೀಡಲೂ


ದೀನದರಿದ್ರರು ನೀರಿಗಾಗಿ ಪರದಾಡುವಾಗ ಬಾಯಾರಿ ಅವರ ನಾಲಿಗೆ ಒಣಗಿಹೋದಾಗ ಪ್ರಸನ್ನನಾಗುವೆ ಸರ್ವೇಶ್ವರನಾದ ನಾನೇ. ಇಸ್ರಯೇಲಿನ ದೇವರಾದ ನಾನವರನ್ನು ಕೈಬಿಡುವೆನೆ?


ದೀನದಲಿತರನಾತ ಉದ್ಧರಿಸಲಿ I ಬಡಬಗ್ಗರಿಗೆ ನ್ಯಾಯ ದೊರಕಿಸಲಿ I ಪ್ರಜಾಹಿಂಸಕರನು ಸದೆಬಡಿಯಲಿ II


ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಕಂಡದ್ದನ್ನೂ ಕೇಳಿದ್ದನ್ನೂ ಯೊವಾನ್ನನಿಗೆ ಹೋಗಿ ತಿಳಿಸಿರಿ: ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ.


ಆಲಿಸಿದಾತನು ಬಂಧಿತರ ಗೋಳಾಟವನು I ಬಿಡಿಸಿಹನು ಮರಣತೀರ್ಪಿಗೆ ಗುರಿಯಾದವರನು II


ಇದಲ್ಲದೆ ಶೋಷಿತರು, ಸಾಲಗಾರರು ಹಾಗು ಮನನೊಂದವರು ಆಗಿದ್ದ ಜನಸಾಮಾನ್ಯರು ಬಂದು ಅವನನ್ನು ಆಶ್ರಯಿಸಿಕೊಂಡರು. ಹೀಗೆ ಅವನು ಸುಮಾರು ನಾನೂರು ಜನರಿಗೆ ನಾಯಕನಾದನು.


ಅರಸರು ತಮ್ಮ ಸೇವಕಿಯಾದ ನನ್ನ ಬಿನ್ನಹವನ್ನು ಆಲಿಸಿ, ನನ್ನನ್ನೂ ನನ್ನ ಮಗನನ್ನೂ ದೇವರ ಸ್ವಾಸ್ತ್ಯದಿಂದ ತೆಗೆದು ಹಾಕಬೇಕೆಂದಿರುವವರ ಕೈಗೆ ಸಿಕ್ಕದಂತೆ, ತಪ್ಪಿಸಿ ರಕ್ಷಿಸುವಿರೆಂದು ನಂಬಿಕೊಂಡಿದ್ದೇನೆ.


ಬಾಧೆಪಡುವವರನ್ನು ಅವರ ಬಾಧೆಗಳ ಮೂಲಕವೇ ರಕ್ಷಿಸುವನು ಕಷ್ಟಾನುಭವಗಳ ಮೂಲಕವೆ ದೇವರು ಅವರ ಕಿವಿಯನ್ನು ತೆರೆಯುವನು.


ತ್ರಿಕಾಲದೊಳು ಗೋಗರೆದು ಯಾಚಿಸುವೆನು I ಎನ್ನಯ ಮೊರೆಗಾತನು ಕಿವಿಗೊಡದಿರನು II


ನೀತಿವಂತನು ದಲಿತರ ಹಕ್ಕುಬಾಧ್ಯತೆಯನ್ನು ಕಾದಿರಿಸುವನು; ದುಷ್ಟರಿಗಿಲ್ಲ ಅದನ್ನು ಗ್ರಹಿಸುವಷ್ಟು ಅಕ್ಕರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು