Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 72:15 - ಕನ್ನಡ ಸತ್ಯವೇದವು C.L. Bible (BSI)

15 ಅರಸ ಬಾಳಲಿ ಚಿರಕಾಲ; ದೊರಕಲಿ ಆತನಿಗೆ ಶೆಬಾದ ಬಂಗಾರ I ಜರುಗಲಿ ಪ್ರಾರ್ಥನೆ ಸದಾಕಾಲ; ಆಶೀರ್ವಾದ ಸಿಗಲಿ ಅನವರತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವನು ಬಾಳಲಿ; ಶೆಬಾ ಪ್ರಾಂತ್ಯದ ಬಂಗಾರವು ಅವನಿಗೆ ಸಮರ್ಪಣೆಯಾಗಲಿ. ಅವನಿಗೋಸ್ಕರ ಯಾವಾಗಲೂ ದೇವರಲ್ಲಿ ವಿಜ್ಞಾಪನೆಯು ನಡೆಯಲಿ; ದಿನದಿನವೂ ಅವನಿಗೆ ಆಶೀರ್ವಾದಗಳು ಉಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವನು ಬಾಳಲಿ; ಶೆಬಾ ಪ್ರಾಂತದ ಬಂಗಾರವು ಅವನಿಗೆ ಸಮರ್ಪಣೆಯಾಗಲಿ. ಅವನಿಗೋಸ್ಕರ ಯಾವಾಗಲೂ ದೇವರಲ್ಲಿ ವಿಜ್ಞಾಪನೆಯು ನಡೆಯಲಿ; ದಿನದಿನವೂ ಅವನಿಗೆ ಆಶೀರ್ವಾದಗಳುಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ರಾಜನು ಬಹುಕಾಲ ಬಾಳಲಿ! ಅವನಿಗೆ ಶೆಬಾ ಪ್ರಾಂತ್ಯದಿಂದ ಬಂಗಾರವು ಬರಲಿ. ರಾಜನಿಗೋಸ್ಕರ ಯಾವಾಗಲೂ ಪ್ರಾರ್ಥಿಸಿರಿ. ಪ್ರತಿದಿನವೂ ಅವನನ್ನು ಆಶೀರ್ವದಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅರಸನು ಬಾಳಲಿ. ಆತನಿಗೆ ಶೆಬದ ಚಿನ್ನವನ್ನು ಕೊಡಲಿ. ಆತನಿಗೋಸ್ಕರ ಯಾವಾಗಲೂ ಪ್ರಾರ್ಥನೆ ಮಾಡಲಿ. ಇಡೀ ದಿನ ಆತನಿಗೆ ಆಶೀರ್ವಾದಗಳು ಉಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 72:15
29 ತಿಳಿವುಗಳ ಹೋಲಿಕೆ  

ಸೊಲೊಮೋನನಿಗೆ ದೇಶಾಂತರ ವ್ಯಾಪಾರಿಗಳು, ವರ್ತಕರು, ಅರೇಬಿಯದ ಅರಸರು ಹಾಗು ಪ್ರದೇಶಾಧಿಪತಿಗಳು ತರುತ್ತಿದ್ದ ಬಂಗಾರವಲ್ಲದೆ


ನಮ್ಮ ಉದ್ಧಾರಕರಾದ ಏಕೈಕ ದೇವರಿಗೆ ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ಮಹಿಮೆ, ಮಹತ್ವ, ಅಧಿಪತ್ಯ, ಅಧಿಕಾರ ಆದಿಯಲ್ಲಿ ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲಿ! ಆಮೆನ್.


ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.


ಆ ಜೀವ ಪ್ರತ್ಯಕ್ಷವಾಯಿತು. ಅದನ್ನು ನಾವು ನೋಡಿದ್ದೇವೆ. ಆ ಬಗ್ಗೆ ಸಾಕ್ಷಿ ಹೇಳುತ್ತೇವೆ. ಪಿತನ ಬಳಿಯಿದ್ದು ನಮಗೆ ಪ್ರತ್ಯಕ್ಷವಾದಂಥ ನಿತ್ಯಜೀವವನ್ನು ನಿಮಗೆ ಸಾರುತ್ತೇವೆ.


ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.


ಪ್ರಭು ನಿನ್ನೊಂದಿಗಿರಲಿ, ದೇವರ ಅನುಗ್ರಹ ನಿಮ್ಮೆಲ್ಲರಲ್ಲೂ ಇರಲಿ!


ಪಿತನಾದ ದೇವರೂ ಪ್ರಭುವಾದ ಯೇಸುವೂ ನಾವು ನಿಮ್ಮಲ್ಲಿಗೆ ಬರುವಂತೆ ನಮ್ಮ ಮಾರ್ಗವನ್ನು ಸುಗಮಗೊಳಿಸಲಿ.


‘ಕ್ರಿಸ್ತಯೇಸುವೇ ಪ್ರಭು' ಎಂದೆಲ್ಲರಿಗೆ ಅರಿಕೆ ಮಾಡುವರು ಪಿತದೇವನ ಮಹಿಮೆಯನು ಈ ಪರಿ ಹೊಗಳಿ ಸಾರುವರವರು.


ತುಂಬಿರುವುವು ನಿನ್ನೊಳು ಒಂಟೆಗಳ ಗುಂಪುಗಳು ಮಿದ್ಯಾನಿನ, ಏಫದ ಪ್ರಾಯದ ಒಂಟೆಗಳು. ಬರುವರೆಲ್ಲರು ಶೆಬದಿಂದ, ತರುವರು ಬಂಗಾರ, ಧೂಪಗಳನು ಸಾರುವರೆಲ್ಲರು ಸರ್ವೇಶ್ವರನ ಸ್ತುತ್ಯಕಾರ್ಯಗಳನು.


ಇನ್ನು ತುಸುಕಾಲವಾದ ನಂತರ ಲೋಕವು ನನ್ನನ್ನು ಕಾಣದು. ಆದರೆ ನೀವು ನನ್ನನ್ನು ಕಾಣುವಿರಿ. ನಾನು ಜೀವಿಸುವವನಾಗಿರುವುದರಿಂದ ನೀವೂ ಜೀವಿಸುವಿರಿ.


ಯೇಸು, ಅವಳಿಗೆ, “ಪುನರುತ್ಥಾನವೂ ಜೀವವೂ ನಾನೇ; ನನ್ನಲ್ಲಿ ವಿಶ್ವಾಸವಿಟ್ಟವನು ಸಾವಿಗೀಡಾದರೂ ಜೀವಿಸುವನು.


ಏಕೆಂದರೆ, ತಮ್ಮನ್ನು ಗೌರವಿಸುವಂತೆಯೇ ಜನರೆಲ್ಲರು ಪುತ್ರನನ್ನು ಗೌರವಿಸಬೇಕೆಂಬುದು ಅವರ ಬಯಕೆ. ಪುತ್ರನನ್ನು ಗೌರವಿಸದವನು ಆತನನ್ನು ಕಳುಹಿಸಿದ ಪಿತನನ್ನೂ ಗೌರವಿಸುವುದಿಲ್ಲ.


ಯೇಸುವಿನ ಹಿಂದೆಯೂ ಮುಂದೆಯೂ ಗುಂಪುಗುಂಪಾಗಿ ಹೋಗುತ್ತಿದ್ದ ಜನರು : “ದಾವೀದ ಕುಲಪುತ್ರನಿಗೆ ಜಯವಾಗಲಿ! ಸರ್ವೇಶ್ವರನ ನಾಮದಲಿ ಬರುವವನಿಗೆ ಮಂಗಳವಾಗಲಿ! ಮಹೋನ್ನತದಲ್ಲಿ ದೇವರಿಗೆ ಜಯವಾಗಲಿ!” ಎಂದು ಹರ್ಷೋದ್ಗಾರ ಮಾಡುತ್ತಿದ್ದರು.


‘ಸ್ವರ್ಗ ದಲ್ಲಿರುವ ಓ ನಮ್ಮ ತಂದೆಯೇ, ನಿಮ್ಮ ಪವಿತ್ರ ನಾಮ ಪೂಜಿತವಾಗಲಿ; ನಿಮ್ಮ ಸಾಮ್ರಾಜ್ಯ ಬರಲಿ; ನಿಮ್ಮ ಚಿತ್ತ ಸ್ವರ್ಗದಲ್ಲಿ ನೆರವೇರುವ ಪ್ರಕಾರ ಜಗತ್ತಿನಲ್ಲಿಯೂ ನೆರವೇರಲಿ.


ಜ್ಯೋತಿಷಿಗಳು ಆ ಮನೆಯನ್ನು ಪ್ರವೇಶಿಸಿ ಮಗುವನ್ನು ತಾಯಿ ಮರಿಯಳ ಬಳಿ ಕಂಡು ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ತಮ್ಮ ತಮ್ಮ ಬೊಕ್ಕಸಗಳನ್ನು ಬಿಚ್ಚಿ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳ ಇವುಗಳನ್ನು ಮಗುವಿಗೆ ಪಾದಕಾಣಿಕೆಯಾಗಿ ಸಮರ್ಪಿಸಿದರು.


ಮಹಿಮಾಯುಕ್ತ ಆತನ ನಾಮಕೆ ಸದಾಕಾಲವು ಸ್ತುತಿ I ಆಮೆನ್ ಆಮೆನ್ ಭೂಮಂಡಲವೆಲ್ಲಾ ಆತನ ಪ್ರಭಾವ ಪೂರ್ತಿ I ಇತಿ, ಜೆಸ್ಸೆಯನ ಕುವರ ದಾವೀದನ ಪ್ರಾರ್ಥನೆಗಳ ಸಮಾಪ್ತಿ II


ಹೊರಡು ಒಡ್ಡೋಲಗದಿಂದ ವಾಹನಾರೂಢನಾಗಿ I ತೆರಳು ಭುಜಬಲದಿ ಮಹತ್ಕಾರ್ಯವೆಸಗುವವನಾಗಿ I ಹೆಣಗು ಸತ್ಯಕ್ಕಾಗಿ, ನ್ಯಾಯನೀತಿಪರನಾಗಿ II


ಕೋರಿದನಾತನು ಜೀವಮಾನಕಾಲವನು I ನೀನಿತ್ತೆ ಯುಗಯುಗಾಂತರದಾಯುಷ್ಯವನು II


ಶೆಬಾದ ರಾಣಿ ಸೊಲೊಮೋನನ ಕೀರ್ತಿಯನ್ನು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕೆ ಜೆರುಸಲೇಮಿಗೆ ಬಂದಳು. ಆಕೆ ಸುಗಂಧದ್ರವ್ಯ, ಅಪರಿಮಿತವಾದ ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾಪರಿವಾರದೊಡನೆ ಸೊಲೊಮೋನನ ಬಳಿಗೆ ಬಂದಳು. ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಅವನೊಡನೆ ಸಂಭಾಷಿಸಿದಳು.


ಆಕೆ ಅರಸನಿಗೆ ನಾಲ್ಕು ಸಾವಿರ ಕಿಲೋಗ್ರಾಂಗೂ ಹೆಚ್ಚು ಬಂಗಾರವನ್ನು, ಅಪರಿಮಿತ ಸುಗಂಧದ್ರವ್ಯವನ್ನು ಹಾಗು ರತ್ನಗಳನ್ನು ಕೊಟ್ಟಳು. ಶೆಬದ ರಾಣಿ ಅರಸ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವನ್ನು ಬೇರೆ ಯಾರೂ ಈ ನಾಡಿಗೆ ಕೊಟ್ಟಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು