Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 72:17 - ಕನ್ನಡ ಸತ್ಯವೇದವು C.L. Bible (BSI)

17 ಶಾಶ್ವತವಾಗಲಿ ಶ್ರೀನಾಮ ಆತನಿಗೆ I ಬೆಳಗಲಿ ಆತನ ಕೀರ್ತಿ ಸೂರ್ಯನಿರುವವರೆಗೆ I ಆತನಾಶೀರ್ವಾದ ಕೋರಲಿ ಸರ್ವರು ತಮಗೆ I ಶುಭವೆನ್ನಲಿ ಸಕಲ ರಾಷ್ಟ್ರಗಳು ಆತನಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ರಾಜನು ಎಂದೆಂದಿಗೂ ಪ್ರಸಿದ್ಧನಾಗಿರಲಿ. ಸೂರ್ಯನು ಇರುವವರೆಗೂ ಜನರು ಅವನ ಹೆಸರನ್ನು ಜ್ಞಾಪಿಸಿಕೊಳ್ಳಲಿ. ಅವನಿಂದ ಜನರಿಗೆ ಆಶೀರ್ವಾದವಾಗಲಿ. ಜನರೆಲ್ಲರೂ ಅವನನ್ನು ಆಶೀರ್ವದಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅರಸನ ನಾಮವು ಎಂದೆಂದಿಗೂ ಇರಲಿ. ಸೂರ್ಯನಿರುವವರೆಗೂ ಆತನ ಹೆಸರು ಇರಲಿ. ಮನುಷ್ಯರು ಅರಸನಲ್ಲಿ ಆಶೀರ್ವಾದ ಹೊಂದಲಿ. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತನೆಂದು ಕರೆಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 72:17
23 ತಿಳಿವುಗಳ ಹೋಲಿಕೆ  

ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.


“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.


ರವಿಯಂತಿರುವುದು ಎನ್ನ ಮುಂದೆ ಅವನ ಗಾದಿ I ಚಿರ ಶಾಶ್ವತವಾಗಿರುವುದು ಅವನ ಸಂತತಿ II


"ನಿನ್ನನ್ನು ಹರಸುವವರನು ನಾ ಹರಸುವೆ, ನಿನ್ನನ್ನು ಶಪಿಸುವವರನು ನಾ ಶಪಿಸುವೆ. ಧರೆಯ ಕುಲದವರಿಗೆಲ್ಲ ನಿನ್ನ ಮುಖೇನ ದೊರಕುವುದು ನನ್ನಿಂದ ಆಶೀರ್ವಾದ.”


ತನ್ನ ದಾಸಿಯ ದೀನತೆಯನು ನೆನಪಿಗೆ ತಂದುಕೊಂಡನಾತ I ಧನ್ಯಳೆಂದು ಹೊಗಳುವರೆನ್ನನು ಇಂದಿನಿಂದ ಸರ್ವಜನಾಂಗ II


ಯೇಸುವಿನ ಹೆಸರಿಗೆಂದೇ ಮೊಣಕಾಲೂರಿ ಮಣಿವರು ಸ್ವರ್ಗವಾಸಿಗಳು, ಭೂನಿವಾಸಿಗಳು, ಪಾತಾಳ ಜೀವರಾಶಿಗಳು.


ನೀನು ನನ್ನ ಮಾತನ್ನು ಕೇಳಿದ್ದರಿಂದ ವಿಶ್ವದ ಎಲ್ಲ ರಾಷ್ಟ್ರಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಸರ್ವೇಶ್ವರನೇ ಆಣೆಯಿಟ್ಟು ಹೇಳಿದ್ದಾರೆ,” ಎಂದನು.


ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ! ಯೇಸುಕ್ರಿಸ್ತರನ್ನು ಮರಣದಿಂದ ಪುನರುತ್ಥಾನಗೊಳಿಸುವುದರ ಮೂಲಕ ದೇವರು ತಮ್ಮ ಅಪಾರ ಕರುಣೆಯಿಂದ ನಮಗೆ ಹೊಸ ಜನ್ಮವನ್ನು ಮತ್ತು ಜೀವಂತ ನಿರೀಕ್ಷೆಯನ್ನು ನೀಡಿದ್ದಾರೆ.


ನೀವು ಪ್ರಭು ಯೇಸುಕ್ರಿಸ್ತರಲ್ಲಿ ಇಟ್ಟಿರುವ ವಿಶ್ವಾಸ ಹಾಗೂ ದೇವಜನರಲ್ಲಿ ನೀವು ಇರಿಸಿರುವ ಪ್ರೀತಿ ಇವುಗಳ ಬಗ್ಗೆ ನಾವು ಕೇಳಿದ್ದೇವೆ. ಇದಕ್ಕಾಗಿ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಲ್ಲಿ ಪ್ರಾರ್ಥಿಸುವಾಗಲೆಲ್ಲ ನಿಮಗಾಗಿ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.


‘ಸರ್ವೇಶ್ವರ ಸ್ವಾಮಿಯ ಜೀವದಾಣೆ’ ಎಂದು ಸತ್ಯ, ನ್ಯಾಯ, ನೀತಿಗೆ ಅನುಗುಣವಾಗಿ ಪ್ರಮಾಣಮಾಡಿರಿ, ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯಲು ಆಶಿಸುವರು, ನನ್ನಲ್ಲೇ ಹೆಮ್ಮೆಪಡುವರು.”


ಈ ಕಾರಣ ನಾನು ಮೊಣಕಾಲೂರಿ ಪಿತನಲ್ಲಿ ಪ್ರಾರ್ಥಿಸುತ್ತೇನೆ:


ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ಇದರಿಂದಾಗಿ ಅಬ್ರಹಾಮನಿಗೆ ದೊರಕಿದ ಸೌಭಾಗ್ಯ, ಕ್ರಿಸ್ತಯೇಸುವಿನ ಮುಖಾಂತರ ಅನ್ಯಧರ್ಮೀಯರಿಗೂ ದೊರಕುವಂತಾಯಿತು; ವಿಶ್ವಾಸದ ಮೂಲಕವಾಗಿ, ದೇವರು ವಾಗ್ದಾನ ಮಾಡಿದ ಪವಿತ್ರಾತ್ಮ ನಮಗೂ ದೊರಕುವಂತಾಯಿತು.


ನಿಮ್ಮ ಕಣ್ಣೆದುರಿಗಿರುವ ಈ ಮನುಷ್ಯನು ಯಾರೆಂದು ನಿಮಗೆ ಗೊತ್ತಿದೆ. ಯೇಸುವಿನ ನಾಮದಿಂದಲೇ, ಆ ನಾಮದ ಮೇಲಿಟ್ಟ ವಿಶ್ವಾಸದಿಂದಲೇ, ಈತನು ಶಕ್ತಿಪಡೆದಿದ್ದಾನೆ. ಯೇಸುವಿನಲ್ಲಿಟ್ಟ ಆ ವಿಶ್ವಾಸವೇ ಈತನಿಗೆ, ನೀವೇ ನೋಡುವಂತೆ, ಸಂಪೂರ್ಣ ಆರೋಗ್ಯವನ್ನು ದಯಪಾಲಿಸಿದೆ.


ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ‘ಯೇಸು’ ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ,” ಎಂದನು.


ನಿನ್ನ ನಾಮಸ್ಮರಣೆಯನುಳಿಸುವೆನು ಚಿರಕಾಲ I ಹೊಗಳುವರು ಸಕಲ ಜನರು ನಿನ್ನನು ಅನುಗಾಲ II


ದೇವರು ಮೋಶೆಗೆ ಮತ್ತೆ ಇಂತೆಂದರು: “ನೀನು ಇಸ್ರಯೇಲರಿಗೆ, ‘ನಿಮ್ಮ ಪೂರ್ವಜರಾದ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರಾಗಿರುವ ಸರ್ವೇಶ್ವರ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ’ ಎಂದು ಹೇಳು. ಇದು ಸದಾಕಾಲಕ್ಕೂ ನನ್ನ ಹೆಸರು. ಈ ಹೆಸರಿನಿಂದಲೆ ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕು.


ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”


ಅವನು ನನ್ನ ಹೆಸರಿನಲ್ಲಿ ಒಂದು ದೇವಾಲಯವನ್ನು ಕಟ್ಟುವನು. ನಾನು ಅವನ ಸಿಂಹಾಸನವನ್ನು ಸ್ಥಿರಪಡಿಸುವೆನು.


ನಿನ್ನ ಮನೆತನವೂ ಅರಸುತನವೂ ಸದಾಕಾಲ ಸ್ಥಿರವಾಗಿರುವುವು; ನಿನ್ನ ಸಿಂಹಾಸನ ಶಾಶ್ವತವಾಗಿರುವುದು.”


ನನಗಾಗಿ ಒಂದು ದೇವಾಲಯವನ್ನು ಕಟ್ಟುವವನು ಅವನೇ. ನಾನು ಅವನ ಸಿಂಹಾಸನವನ್ನು ಸ್ಥಿರಪಡಿಸುವೆನು.


ಅರಸನಿಗಿದೆ ಭರವಸೆ ಪ್ರಭುವಿನಲಿ I ಅವನಚಲನು, ಪರಾತ್ಪರನ ಕೃಪೆಯಲಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು