Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 72:18 - ಕನ್ನಡ ಸತ್ಯವೇದವು C.L. Bible (BSI)

18 ಸುತ್ಯರ್ಹನು ಸ್ವಾಮಿದೇವನು, ಇಸ್ರಯೇಲರ ದೇವನು I ಆತನೋರ್ವನೇ ಮಹತ್ಕಾರ್ಯಗಳನು ಎಸಗುವಂತವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಮಹತ್ಕಾರ್ಯಗಳನ್ನು ನಡೆಸುವುದರಲ್ಲಿ ಅದ್ವಿತೀಯನೂ, ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮಹತ್ಕಾರ್ಯಗಳನ್ನು ನಡಿಸುವದರಲ್ಲಿ ಅದ್ವಿತೀಯನೂ ಇಸ್ರಾಯೇಲ್ಯರ ದೇವರೂ ಆದ ಯೆಹೋವ ದೇವರಿಗೆ ಸ್ತೋತ್ರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಇಸ್ರೇಲರ ದೇವರಾದ ಯೆಹೋವನನ್ನು ಕೊಂಡಾಡಿರಿ. ಅಂಥ ಅದ್ಭುತಕಾರ್ಯಗಳನ್ನು ದೇವರೊಬ್ಬನೇ ಮಾಡಬಲ್ಲನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅದ್ಭುತಗಳನ್ನು ಮಾಡುವುದರಲ್ಲಿ ಸರಿಸಾಟಿಯಿಲ್ಲದ ಇಸ್ರಾಯೇಲರ ದೇವರಾಗಿರುವ ಯೆಹೋವ ದೇವರಿಗೆ ಸ್ತೋತ್ರವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 72:18
14 ತಿಳಿವುಗಳ ಹೋಲಿಕೆ  

ಇಸ್ರಯೇಲರ ದೇವರಾದ ಪ್ರಭುವಿಗೆ ಜಯ I ಯುಗಯುಗಾಂತರಕು ಆಮೆನ್ ಆಮೆನ್, ಜಯಜಯ II


ಇಸ್ರಯೇಲಿನ ದೇವನಾದ ಪ್ರಭುವಿಗೆ ಸ್ತೋತ್ರ I ಅನಾದಿಯಿಂದ ಯುಗಯುಗಾಂತರಕು ಸ್ತೋತ್ರ I ಜನರೆಲ್ಲರು ಹೇಳಲಿ ‘ಆಮೆನ್’, ಪ್ರಭುವಿಗೆ ಸ್ತೋತ್ರ II


ಅನಂತರ ದಾವೀದನು ನೆರೆದ ಸಭೆಯ ಮುಂದೆ ಸರ್ವೇಶ್ವರನನ್ನು ಹೀಗೆ ಸ್ತುತಿಸಿದನು:


ಪ್ರಭು, ನೀನೊಬ್ಬನೇ ದೇವನು I ಅದ್ಭುತಶಾಲಿ, ಮಹೋನ್ನತನು II


ಹೇ ಸರ್ವೇಶ್ವರಾ, ದೇವರುಗಳಲ್ಲಿ ನಿನಗಾರು ಸಮಾನನು? ಎಲ್ಲಿ ನಿನ್ನಂತೆ ಪವಿತ್ರತೆಯಲ್ಲಿ ಸರ್ವೋತ್ತಮನು? ಪ್ರಖ್ಯಾತ ಕಾರ್ಯವೆಸಗುವುದರಲ್ಲಿ ನಿನ್ನಂತೆ ಭಯಂಕರನು? ಅದ್ಭುತಗಳ ನಡೆಸುವುದರಲ್ಲಿ ನಿನ್ನ ಹೋಲುವವನು?


ಮಹತ್ಕಾರ್ಯವೆಸಗಬಲ್ಲ ಆ ಏಕೈಕನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಅದ್ಭುತಗಳನು ನಡೆಸುವಂತಹ ದೇವ ನೀನೆಮಗೆ I ತೋರ್ಪಡಿಸಿದೆ ನಿನ್ನಾ ಪರಾಕ್ರಮವನು ಜನತೆಗೆ II


ಪರಮ ಪವಿತ್ರಾಲಯದಲ್ಲಿಹ ದೇವಭಯಭಕುತಿಗೆ ಪಾತ್ರ I ಪ್ರಜೆಗೆ ಪರಾಕ್ರಮವೀವ ಇಸ್ರಯೇಲ ದೇವನಿಗೆ ಸ್ತೋತ್ರ II


ತರುವಾಯ ದಾವೀದನು ನೆರೆದ ಸಭೆಯವರಿಗೆ, “ನಿಮ್ಮ ದೇವರಾದ ಸರ್ವೇಶ್ವರನನ್ನು ಸ್ತುತಿಸಿರಿ,” ಎಂದು ಹೇಳಿದನು. ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ಸ್ತುತಿಸುತ್ತಾ ತಲೆಬಾಗಿ ಅವರನ್ನೂ ಅರಸನನ್ನೂ ನಮಸ್ಕರಿಸಿದರು.


ದೇವರೆಸಗುತ್ತಾನೆ ಅಸಾಧ್ಯ ಅತಿಶಯಗಳನು ಅಸಂಖ್ಯವಾದ ಅದ್ಭುತಕಾರ್ಯಗಳನು.


ಅಪ್ರತಿಮ ಮಹಾಕಾರ್ಯಗಳನ್ನು ಎಸಗಿರುವನು ಅಸಂಖ್ಯ ಅದ್ಭುತಕರ ಪವಾಡಗಳನ್ನು ಮಾಡಿರುವನು.


ನಿನ್ನ ಭುಜಬಲದಿಂದ ಯಕೋಬ, ಜೋಸೆಫ್ ವಂಶಜರನು I ಉದ್ಧಾರ ಮಾಡಿದೆ ನಿನ್ನ ಪ್ರಜೆಗಳಾಗಿಹ ಆ ಜನರನು II


ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು I ಎಸಗಿಹನಾತನು ಪವಾಡಕಾರ್ಯಗಳನು I ಗಳಿಸಿತಾತನ ಕೈ ಪೂತಭುಜ ಗೆಲುವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು