Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 72:19 - ಕನ್ನಡ ಸತ್ಯವೇದವು C.L. Bible (BSI)

19-20 ಮಹಿಮಾಯುಕ್ತ ಆತನ ನಾಮಕೆ ಸದಾಕಾಲವು ಸ್ತುತಿ I ಆಮೆನ್ ಆಮೆನ್ ಭೂಮಂಡಲವೆಲ್ಲಾ ಆತನ ಪ್ರಭಾವ ಪೂರ್ತಿ I ಇತಿ, ಜೆಸ್ಸೆಯನ ಕುವರ ದಾವೀದನ ಪ್ರಾರ್ಥನೆಗಳ ಸಮಾಪ್ತಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲಕ್ಕೂ ಸ್ತುತಿ ಇರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲವೂ ಪ್ರಣಾಮವಿರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್, ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆತನ ಪ್ರಭಾವಪೂರ್ಣವಾದ ಹೆಸರನ್ನು ಎಂದೆಂದಿಗೂ ಕೊಂಡಾಡಿರಿ! ಆತನ ಮಹಿಮೆ ಭೂಲೋಕವನ್ನೆಲ್ಲಾ ತುಂಬಿಕೊಳ್ಳಲಿ! ಆಮೆನ್, ಆಮೆನ್!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ದೇವರ ಘನವುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ. ದೇವರ ತೇಜಸ್ಸು ಭೂಮಿಯಲ್ಲೆಲ್ಲಾ ತುಂಬಲಿ. ಆಮೆನ್, ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 72:19
17 ತಿಳಿವುಗಳ ಹೋಲಿಕೆ  

ಆದರೂ ನನ್ನ ಜೀವದಾಣೆ ಸರ್ವೇಶ್ವರನ ಮಹಿಮೆ ಅಖಿಲ ವಿಶ್ವವನ್ನು ತುಂಬಿದೆಯೆಂಬ ಸತ್ಯವಾಕ್ಯದ ಆಣೆ. ನನ್ನನ್ನು ಅಲಕ್ಷ್ಯಮಾಡಿದ ಇವರಲ್ಲಿ ಯಾರೂ ವಾಗ್ದತ್ತ ನಾಡನ್ನು ನೋಡುವುದಿಲ್ಲ.


‘ಸ್ವರ್ಗ ದಲ್ಲಿರುವ ಓ ನಮ್ಮ ತಂದೆಯೇ, ನಿಮ್ಮ ಪವಿತ್ರ ನಾಮ ಪೂಜಿತವಾಗಲಿ; ನಿಮ್ಮ ಸಾಮ್ರಾಜ್ಯ ಬರಲಿ; ನಿಮ್ಮ ಚಿತ್ತ ಸ್ವರ್ಗದಲ್ಲಿ ನೆರವೇರುವ ಪ್ರಕಾರ ಜಗತ್ತಿನಲ್ಲಿಯೂ ನೆರವೇರಲಿ.


ಸಮುದ್ರವು ನೀರಿನಿಂದ ತುಂಬಿ ಇರುವಂತೆ ಜಗವು ಸರ್ವೇಶ್ವರಸ್ವಾಮಿಯ ಮಹಿಮೆಯ ಜ್ಞಾನದಿಂದ ತುಂಬಿರುವುದು.


ಇಸ್ರಯೇಲರ ದೇವರಾದ ಪ್ರಭುವಿಗೆ ಜಯ I ಯುಗಯುಗಾಂತರಕು ಆಮೆನ್ ಆಮೆನ್, ಜಯಜಯ II


ಇದಲ್ಲದೆ, ಸ್ವರ್ಗ, ಭೂಮಿ, ಪಾತಾಳಗಳಲ್ಲೂ ಸಮುದ್ರದಲ್ಲೂ ಇರುವ ಸಮಸ್ತ ಸೃಷ್ಟಿಗಳು ಹೀಗೆ ಹಾಡುವುದನ್ನು ಕೇಳಿಸಿಕೊಂಡೆ : “ಸಿಂಹಾಸನದಲ್ಲಿ ಕುಳಿತವನಿಗೆ, ಯಜ್ಞಕುರಿಮರಿಯಾದಾತನಿಗೆ ಸಲ್ಲಲಿ ಯುಗಯುಗಾಂತರಕ್ಕೆ ಘನಮಾನ, ಗೌರವ, ಪರಾಕ್ರಮ, ಮತ್ತು ಮಹಿಮೆ.”


ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ : “ಪವಿತ್ರ, ಪವಿತ್ರ, ಪವಿತ್ರ ಸೇನಾಧೀಶ್ವರ ಸರ್ವೇಶ್ವರ ಜಗವೆಲ್ಲ ಆತನ ಪ್ರಭಾವಭರಿತ” ಎಂದು ಕೂಗಿ ಹೇಳಿದನು.


ಹಾನಿಯನು, ಕೇಡನು ಮಾಡರಾರೂ ನನ್ನ ಪರ್ವತದ ಮೇಲೆ. ಸಮುದ್ರದಂತೆ ತುಂಬಿರುವುದು ಸರ್ವೇಶ್ವರನ ಜ್ಞಾನ, ಧರೆಯ ಮೇಲೆ.


ಆಮೇಲೆ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು, “ಏಳಿ, ನಮ್ಮ ದೇವರಾದ ಸರ್ವೇಶ್ವರನಿಗೆ ಯುಗಯುಗಕ್ಕೂ ಸ್ತುತಿಸ್ತೋತ್ರ ಎನ್ನಿ,” ಎಂದು ಹೇಳಿ ಹೀಗೆ ಪ್ರಾರ್ಥಿಸಿದರು: “ಸರ್ವೇಶ್ವರಾ, ಸ್ತುತಿಸ್ತೋತ್ರ ನಿಮ್ಮ ಮಹಿಮಾಮಯ ನಾಮಕೆ ಮಿಗಿಲಾದುದು ಆ ಶ್ರೀ ನಾಮ ಸರ್ವಸ್ತುತಿ ಕೀರ್ತನೆಗೆ.


ಇದಕ್ಕೆಲ್ಲಾ ಸಾಕ್ಷಿಯಾಗಿರುವಾತನು, “ಹೌದು, ನಾನು ಬೇಗನೆ ಬರುತ್ತೇನೆ,” ಎಂದು ಹೇಳುತ್ತಾನೆ. ಆಮೆನ್, ಪ್ರಭು ಯೇಸುವೇ, ಬನ್ನಿ.


ಆಗ ಸರ್ವೇಶ್ವರ ಜಗಕ್ಕೆಲ್ಲಾ ಅರಸರಾಗಿರುವರು. ಅವರೊಬ್ಬರೇ ದೇವರೆಂದು, ಅವರ ಹೆಸರೊಂದೇ ಸ್ತುತ್ಯಾರ್ಹವೆಂದು ಎಲ್ಲರಿಗೂ ತಿಳಿದಿರುವುದು.


ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


“ಆಮೆನ್! ಸರ್ವೇಶ್ವರ ಹಾಗೆಯೇ ಮಾಡಲಿ! ಸರ್ವೇಶ್ವರ ತಮ್ಮ ಆಲಯದ ಉಪಕರಣಗಳನ್ನೂ ಸೆರೆಹೋದವರೆಲ್ಲರನ್ನೂ ಬಾಬಿಲೋನಿನಿಂದ ಈ ಸ್ಥಳಕ್ಕೆ ಪುನಃ ಬರಮಾಡಲಿ. ನೀನು ನುಡಿದ ಮಾತುಗಳನ್ನು ನೆರವೇರಿಸಲಿ!


ಯೆಹೋಯಾದಾವನ ಮಗ ಬೆನಾಯನು ಅರಸನಿಗೆ, “ಹಾಗೆಯೇ ಆಗಲಿ; ನನ್ನ ಒಡೆಯರ ಹಾಗು ಅರಸರ ದೇವರಾದ ಸರ್ವೇಶ್ವರ ಇದನ್ನು ಸ್ಥಿರಪಡಿಸಲಿ.


ಶಾಪತರುವ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆ ಉಬ್ಬುವಂತೆ, ಜನನೇಂದ್ರಿಯಗಳು ಬತ್ತಿಹೋಗುವಂತೆ ಮಾಡಲಿ,” ಎಂದು ಹೇಳಬೇಕು. ಅದಕ್ಕೆ ಆ ಹೆಂಗಸು, “ಆಗಲಿ, ಹಾಗೆಯೇ ಆಗಲಿ,” ಎಂದು ಹೇಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು