Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 72:2 - ಕನ್ನಡ ಸತ್ಯವೇದವು C.L. Bible (BSI)

2 ಆತನಾಳಲಿ ನಿನ್ನ ಪ್ರಜೆಯನು ನೀತಿಯಿಂದ I ಪರಿಪಾಲಿಸಲಿ ದೀನದಲಿತರನು ನ್ಯಾಯದಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ನಿನ್ನ ಜನರಿಗೆ ನೀತಿಯಿಂದಲೂ, ಕುಗ್ಗಿಹೋದ ನಿನ್ನವರಿಗೆ ನ್ಯಾಯವಾಗಿಯೂ ತೀರ್ಪುಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ನಿನ್ನ ಜನರಿಗೆ ನೀತಿಯಿಂದಲೂ ಕುಗ್ಗಿಹೋದ ನಿನ್ನವರಿಗೆ ನ್ಯಾಯವಾಗಿಯೂ ತೀರ್ಪುಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿನ್ನ ಜನರಿಗೆ ನೀತಿಯಿಂದಲೂ ನಿನ್ನ ಬಡಜನರಿಗೆ ನ್ಯಾಯವಾಗಿಯೂ ತೀರ್ಪುಮಾಡಲು ಅವನಿಗೆ ಸಹಾಯಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅರಸನು ನಿಮ್ಮ ಜನರಿಗೆ ನೀತಿಯಿಂದಲೂ ನಿಮ್ಮ ಬಾಧೆಪಟ್ಟ ಪ್ರಜೆಗೆ ನ್ಯಾಯದಿಂದಲೂ ತೀರ್ಪುಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 72:2
18 ತಿಳಿವುಗಳ ಹೋಲಿಕೆ  

ಇಗೋ, ರಾಜನೊಬ್ಬನು ನೀತಿಗನುಸಾರ ರಾಜ್ಯವಾಳುವನು. ದೇಶಾಧಿಪತಿಗಳು ನ್ಯಾಯದಿಂದ ದೊರೆತನಮಾಡುವರು.


ನಾನು ಈ ದೃಶ್ಯವನ್ನೂ ಕಂಡೆ: ಸ್ವರ್ಗವು ತೆರೆದಿತ್ತು. ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಒಬ್ಬನು ಕುಳಿತಿದ್ದನು. ನಂಬಿಕಸ್ಥನೆಂದೂ ಸತ್ಯವಂತನೆಂದೂ ಆತನ ಹೆಸರು; ಆತನು ನಿಷ್ಪಕ್ಷಪಾತದಿಂದ ನ್ಯಾಯತೀರ್ಪು ಕೊಡುವವನು; ನ್ಯಾಯಬದ್ಧವಾಗಿ ಯುದ್ಧಮಾಡುವವನು.


ಆ ಸತ್ಯಸಂಧತೆಯಿಂದ ಚಿರಶಾಂತಿ ಮತ್ತು ಸುಭದ್ರತೆ ಪರಿಣಮಿಸುವುದು.


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಬಡವರ ಬವಣೆ ತಿಳಿಯಿತೆನಗೆ; ದಲಿತರ ನರಳಾಟ ಕೇಳಿಸಿತೆನಗೆ I ಎದ್ದು ಬರುವೆ, ಹಗೆಗಳಿಂದವರನು ಉದ್ಧರಿಸುವೆ” ಇದು ಪ್ರಭುವಿನ ಹೇಳಿಕೆ II


ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸುವನು ಬಡವ-ಬಲ್ಲಿದನೆಂಬ ಭೇದವನ್ನು ಮಾಡನು. ಏಕೆಂದರೆ ಅವರೆಲ್ಲರು ಆ ದೇವನಿಂದಲೇ ಸೃಷ್ಟಿಯಾದವರು.


ಆ ಕಾಲದಲ್ಲಿ, ಆ ದಿನಗಳಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯೊಂದನ್ನು ಚಿಗುರಿಸುವೆನು. ಆತನು ನಾಡಿನಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.


ಇಸ್ರಯೇಲರ ದೇವನು, ಅವರಾಶಕ್ತನು, ಹೀಗೆಂದು ನನಗೆ ನುಡಿದನು


ಇಸ್ರಯೇಲರೆಲ್ಲರೂ ಅರಸನ ಈ ತೀರ್ಪನ್ನು ಕೇಳಿದರು. ನ್ಯಾಯನಿರ್ಣಯಿಸುವುದಕ್ಕೆ ಈತನಲ್ಲಿ ದೇವದತ್ತ ಜ್ಞಾನವಿದೆ ಎಂದು ತಿಳಿದು ಅವನ ಬಗ್ಗೆ ಅಪಾರ ಗೌರವ ಉಳ್ಳವರಾದರು.


ನಿಮ್ಮನ್ನು ಮೆಚ್ಚಿ ಇಸ್ರಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿಮ್ಮ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ಇಸ್ರಯೇಲರನ್ನು ಸದಾ ಪ್ರೀತಿಸುವವರಾಗಿರುವುದರಿಂದ ಆ ಜನರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕಾಗಿ ನಿಮ್ಮನ್ನು ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದಳು.


ನನ್ನ ಮಗ ಸೊಲೊಮೋನನು ನಿಮ್ಮ ಆಜ್ಞಾವಿಧಿನಿಯಮಗಳನ್ನು ಅನುಸರಿಸುವಂತೆ ಮಾಡಿರಿ; ನಾನು ಯಾವ ಮಂದಿರ ನಿರ್ಮಾಣಕ್ಕಾಗಿ ಇದನ್ನೆಲ್ಲಾ ಸಂಗ್ರಹಿಸಿದ್ದೇನೋ ಆ ನಿಮ್ಮ ಮಂದಿರವನ್ನು ಇವನು ನಿಷ್ಠೆಯಿಂದ ಕಟ್ಟಿಸಿ ಮುಗಿಸುವಂತೆ ಅನುಗ್ರಹಿಸಿರಿ.”


ಬಡಬಗ್ಗರನ್ನು ನ್ಯಾಯವಾಗಿ ಆಳುವ ಅರಸನ ಸಿಂಹಾಸನ ಸದಾ ಸುಭದ್ರ.


“ತಪ್ಪಿಸಿಕೊಂಡಿದ್ದನ್ನು ಹುಡುಕುವೆನು, ದಾರಿತಪ್ಪಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದುದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿನ ಕುರಿಗಳನ್ನಾದರೋ ಧ್ವಂಸಮಾಡುವೆನು; ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು