Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 72:3 - ಕನ್ನಡ ಸತ್ಯವೇದವು C.L. Bible (BSI)

3 ಬೆಟ್ಟಗುಡ್ಡಗಳಿಂದ ಬರಲಿ ಸಮೃದ್ಧಿ I ನಿನ್ನ ಪ್ರಜೆಗೆ ಫಲಿಸಲಿ ನ್ಯಾಯನೀತಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಗುಡ್ಡ ದಿನ್ನೆಗಳೆಲ್ಲವು ನಿನ್ನ ಜನರಿಗೋಸ್ಕರ, ನೀತಿಗನುಸಾರವಾಗಿ ಸುಕ್ಷೇಮವನ್ನು ಫಲಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಗುಡ್ಡದಿನ್ನೆಗಳೆಲ್ಲವು ನಿನ್ನ ಜನರಿಗೋಸ್ಕರ ನೀತಿಗನುಸಾರವಾಗಿ ಸುಕ್ಷೇಮವನ್ನು ಫಲಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಪ್ರಖ್ಯಾತವಾದ ಬೆಟ್ಟಗುಡ್ಡಗಳಲ್ಲೆಲ್ಲಾ, ದೇಶದಲ್ಲೆಲ್ಲಾ ಶಾಂತಿಯೂ ನ್ಯಾಯವೂ ನೆಲೆಸಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಬೆಟ್ಟಗುಡ್ಡಗಳಿಂದ ಸಮೃದ್ಧಿಯೂ ನೀತಿಯ ಫಲವೂ ಜನರಿಗೆ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 72:3
13 ತಿಳಿವುಗಳ ಹೋಲಿಕೆ  

ಶುಭಕರ ಸಮಾಚಾರವನು ತರುವ ಶಾಂತಿಸಮಾಧಾನವನು ಸಾರುವ ಸಂತಸದ ಸಂದೇಶವನು ಅರುಹುವ ಜೀವೋದ್ಧಾರವನು ಪ್ರಕಟಿಸುವ ‘ನಿನ್ನ ದೇವರೇ ರಾಜ್ಯಭಾರ ವಹಿಸುವ ಎಂದು ಸಿಯೋನಿಗೆ ತಿಳಿಯಪಡಿಸುತ್ತ ಪರ್ವತಗಳಿಂದ ಇಳಿದುಬರುವ ಶಾಂತಿದೂತನ ಪಾದಪದ್ಮಗಳು ಎಷ್ಟೊಂದು ಸುಂದರ!


ಆ ದಿನಗಳಲ್ಲಿ ಬೆಟ್ಟಗುಡ್ಡಗಳಿಂದ ದ್ರಾಕ್ಷಾರಸ ಮತ್ತು ಹಾಲುತುಪ್ಪ ಹರಿಯುವುದು. ಜುದೇಯ ನಾಡಿನ ಹಳ್ಳಕೊಳ್ಳಗಳು ನೀರಿನಿಂದ ತುಂಬಿರುವುವು. ದೇವಾಲಯದಿಂದ ನೀರು ಚಿಮ್ಮಿಬಂದು ಆಕಾಚಿಯದ ಹಳ್ಳವನ್ನು ತಂಪಾಗಿಸುವುದು.


“ಅಧರ್ಮವನ್ನು ಕೊನೆಗಾಣಿಸುವುದಕ್ಕೆ ಪಾಪಗಳನ್ನು ತೀರಿಸುವುದಕ್ಕೆ, ಅಪರಾಧವನ್ನು ನಿವಾರಿಸುವುದಕ್ಕೆ, ಸನಾತನ ಧರ್ಮವನ್ನು ಸ್ಥಾಪಿಸುವುದಕ್ಕೆ, ದರ್ಶನವನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥ ಮಾಡುವುದಕ್ಕೆ, ಅತಿಪರಿಶುದ್ಧವಾದುದನ್ನು ಅಭಿಷೇಕಿಸುವುದಕ್ಕೆ ನಿನ್ನ ಜನಕ್ಕೂ ನಿನ್ನ ಪವಿತ್ರನಗರಕ್ಕೂ ಏಳೆಪ್ಪತ್ತು ವರ್ಷಗಳು ಕಳೆಯಬೇಕೆಂದು ನಿಷ್ಕರ್ಷೆಯಾಗಿದೆ.


ಸಮೃದ್ಧಿಯಾಗಲಿ ನಾಡಿನ ದವಸಧಾನ್ಯ ನೆಲಮಲೆಗಳ ಮೇಲೆ I ಸೊಂಪಾಗಲಿ ಅದರ ಹಣ್ಣುಹಂಪಲು ಲೆಬನೋನಿನ ಮರಗಳಂತೆ I ಹುಲುಸಾಗಲಿ ನಗರ ನಿವಾಸಿಗಳ ಸಂಖ್ಯೆ ಬಯಲಿನ ಹುಲ್ಲಿನಂತೆ II


ಮೇವುಗಾಡುಗಳು ಕಂಗೊಳಿಸುತಿವೆ ಪಚ್ಚೆಪಸಿರಿನಿಂದ I ಗುಡ್ಡಗಾಡುಗಳು ಶೋಭಿಸುತಿವೆ ಹರ್ಷಾಡಂಬರದಿಂದ II


ವರ್ಷಿಸಲಿ ಸದ್ಧರ್ಮವನು ಆಕಾಶಮಂಡಲ ಸುರಿಸಲಿ ಮೇಲಿಂದ ಅದನ್ನು ಆ ಗಗನಮಂಡಲ; ಅಂಕುರಿಸಲಿ ಜೀವೋದ್ಧಾರವನು ಭೂಮಂಡಲ ಬೆಳೆಯಲಿ ಅದರೊಡನೆಯೇ ಸದ್ಧರ್ಮದ ಫಲ, ಸರ್ವೇಶ್ವರನಾದ ನಾನೇ ಕರ್ತ ಇದಕ್ಕೆಲ್ಲಾ.”


ಒದಗಿಸುವೆ ನಿನಗೆ ಮರವಿದ್ದಲ್ಲಿ ತಾಮ್ರವನು ಹಿತ್ತಾಳೆಗೆ ಬದಲಾಗಿ ಬಂಗಾರವನು ಕಬ್ಬಿಣಕ್ಕೆ ಪ್ರತಿಯಾಗಿ ಬೆಳ್ಳಿಯನು ಕಲ್ಲುಗಳ ಸ್ಥಾನದಲ್ಲಿ ಕಬ್ಬಿಣವನು ಮಾಡುವೆ ಶಾಂತಿಯನ್ನೇ ನಿನಗೆ ಅಧಿಪತಿಯನ್ನಾಗಿ ಸದ್ಧರ್ಮವನ್ನೇ ನಿನಗೆ ಅಧಿಕಾರಿಯನ್ನಾಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು