Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 72:5 - ಕನ್ನಡ ಸತ್ಯವೇದವು C.L. Bible (BSI)

5 ಆತನು ಬಾಳಲಿ ಆಚಂದ್ರಾರ್ಕನಾಗಿ I ತಲತಲಾಂತರಕು ಭಯಭಕುತಿಯಿಂದಿರಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸೂರ್ಯನು, ಚಂದ್ರನು ಇರುವವರೆಗೂ, ತಲತಲಾಂತರಗಳವರೆಗೂ ಅವರು ನಿನಗೆ ಭಯಪಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಚಂದ್ರಾರ್ಕವಾಗಿ ತಲತಲಾಂತರಗಳೆಲ್ಲಾ ನಿನಗೆ ಭಯಪಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸೂರ್ಯಚಂದ್ರರು ಆಕಾಶದಲ್ಲಿ ಇರುವವರೆಗೂ ಜನರು ರಾಜನಿಗೆ ಭಯಪಡಲಿ; ಅವನನ್ನು ಗೌರವಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸೂರ್ಯನೂ ಚಂದ್ರನೂ ಇರುವವರೆಗೆ ತಲತಲಾಂತರಗಳು ಜನರು ಅರಸನಿಗೆ ಭಯಪಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 72:5
14 ತಿಳಿವುಗಳ ಹೋಲಿಕೆ  

ಸಕಲ ರಾಷ್ಟ್ರ-ಕುಲ-ಭಾಷೆಗಳವರು ಅವನಿಗೆ ಸೇವೆ ಸಲ್ಲಿಸಲೆಂದು ಅವನಿಗೆ ದೊರೆತನ, ಘನತೆ, ರಾಜ್ಯತ್ವ ಇವುಗಳನ್ನು ಕೊಡಲಾಯಿತು. ಅವನ ಆಳ್ವಿಕೆಗೆ ಅಂತ್ಯವಿಲ್ಲ, ಅದು ಶಾಶ್ವತವಾದುದು, ಅವನ ರಾಜ್ಯ ಎಂದಿಗೂ ಅಳಿಯದು!


ಶಾಶ್ವತವಾಗಲಿ ಶ್ರೀನಾಮ ಆತನಿಗೆ I ಬೆಳಗಲಿ ಆತನ ಕೀರ್ತಿ ಸೂರ್ಯನಿರುವವರೆಗೆ I ಆತನಾಶೀರ್ವಾದ ಕೋರಲಿ ಸರ್ವರು ತಮಗೆ I ಶುಭವೆನ್ನಲಿ ಸಕಲ ರಾಷ್ಟ್ರಗಳು ಆತನಿಗೆ II


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ರಾಜ್ಯಭಾರವೂ ದೊರೆತನವೂ ಸಮಸ್ತ ಲೋಕದಲ್ಲಿನ ರಾಜ್ಯಗಳ ಮಹಿಮೆಯೂ ಮಹೋನ್ನತರ ಭಕ್ತಜನರಿಗೆ ಕೊಡಲಾಗುವುದು. ಅವರ ರಾಜ್ಯ ಶಾಶ್ವತರಾಜ್ಯ. ಎಲ್ಲ ದೇಶಾಧಿಪತಿಗಳೂ ಅವರಿಗೆ ಅಧೀನರಾಗಿ ಸೇವೆಮಾಡುವರು,” ಎಂದು ಹೇಳಿದನು.


ಆ ರಾಜರ ಕಾಲದಲ್ಲಿ ಪರಲೋಕ ದೇವರು ಒಂದು ಸಾಮ್ರಾಜ್ಯವನ್ನು ಸ್ಥಾಪಿಸುವರು. ಅದು ಎಂದಿಗೂ ಅಳಿಯದು. ಅದರ ಪ್ರಾಬಲ್ಯವು ಬೇರೆ ರಾಷ್ಟ್ರಕ್ಕೆ ಜಾರಿಹೋಗದು. ರಾಷ್ಟ್ರಗಳನ್ನೆಲ್ಲಾ ಭಂಗಪಡಿಸಿ, ನಿರ್ನಾಮಮಾಡಿ ಆ ಸಾಮ್ರಾಜ್ಯ ಶಾಶ್ವತವಾಗಿ ನಿಲ್ಲುವುದು.


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಉಳಿಸುವೆನು ಅವನ ಸಂತಾನವನು ನಿರಂತರವಾಗಿ I ಅವನ ಸಿಂಹಾಸನವಿರುವುದು ಗಗನದಂತೆ ಸ್ಥಿರವಾಗಿ II


ಬೆಳೆಯಲಿ ಆತನ ಪಾಲನೆಯಲಿ ನ್ಯಾಯನೀತಿ I ಬೆಳಗಲಿ ಚಂದ್ರನಂತೆ ಸದಾ ಸಂಪೂರ್ಣ ಶಾಂತಿ II


ಇಸ್ರಯೇಲರೆಲ್ಲರೂ ಅರಸನ ಈ ತೀರ್ಪನ್ನು ಕೇಳಿದರು. ನ್ಯಾಯನಿರ್ಣಯಿಸುವುದಕ್ಕೆ ಈತನಲ್ಲಿ ದೇವದತ್ತ ಜ್ಞಾನವಿದೆ ಎಂದು ತಿಳಿದು ಅವನ ಬಗ್ಗೆ ಅಪಾರ ಗೌರವ ಉಳ್ಳವರಾದರು.


ಅಂತೆಯೇ ಸಮುವೇಲನು ಮೊರೆ ಇಡಲು ಸರ್ವೇಶ್ವರ ಗುಡುಗು ಮಳೆಗಳನ್ನು ಕಳುಹಿಸಿದರು. ಜನರೆಲ್ಲರು ಸರ್ವೇಶ್ವರನಿಗೂ ಸಮುವೇಲನಿಗೂ ಬಹಳವಾಗಿ ಭಯಪಟ್ಟು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು