Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 72:6 - ಕನ್ನಡ ಸತ್ಯವೇದವು C.L. Bible (BSI)

6 ಹುಲ್ಲುಕೊಯ್ದ ಹೊಲದ ಮೇಲೆ ಸುರಿವ ವೃಷ್ಟಿಯಂತೆ I ಬರಲಿ ಆತ ಒಣನೆಲವ ತೋಯ್ವ ಹದಮಳೆಯಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹುಲ್ಲುಕೊಯ್ದ ಮೇಹುಗಾಡಿನ ಮೇಲೆ ಸುರಿಯುವ ವೃಷ್ಟಿಯಂತೆಯೂ, ಭೂಮಿಯನ್ನು ನೆನಸುವ ಹದಮಳೆಯಂತೆಯೂ ಅವನು ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹುಲ್ಲು ಕೊಯಿದ ಮೇಹುಗಾಡಿನ ಮೇಲೆ ಸುರಿಯುವ ವೃಷ್ಟಿಯಂತೆಯೂ ಭೂವಿುಯನ್ನು ನೆನಸುವ ಹದಮಳೆಯಂತೆಯೂ ಅವನು ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಹುಲ್ಲುಗಾವಲಿನ ಮೇಲೆ ಸುರಿಯುವ ಮಳೆಯಂತೆಯೂ ಭೂಮಿಯನ್ನು ಹದಗೊಳಿಸುವ ಹಿತವಾದ ಮಳೆಯಂತೆಯೂ ನೀನು ಅವನಿಗೆ ಸಹಾಯಕನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಕೊಯ್ದ ಹುಲ್ಲಿನ ಮೇಲೆ ಬೀಳುವ ಮಳೆಯ ಹಾಗೆಯೂ, ಭೂಮಿಯನ್ನು ನೆನಸುತ್ತಾ ಸುರಿಯುವ ಮಳೆಗಳ ಹಾಗೆಯೂ ಅರಸನು ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 72:6
11 ತಿಳಿವುಗಳ ಹೋಲಿಕೆ  

ನಿರಂತರವಾಗಿ ಹುಡುಕಿ ಅವರನ್ನು ಕಂಡುಕೊಳ್ಳೋಣ; ಸರ್ವೇಶ್ವರಸ್ವಾಮಿಯನ್ನು ಅರಿತುಕೊಳ್ಳೋಣ; ಅವರ ಆಗಮನ ಸೂರ್ಯೋದಯದಂತೆ ನಿಶ್ಚಯ. ಭೂಮಿಯನ್ನು ತಣಿಸುವ ಮುಂಗಾರು ಹಿಂಗಾರು ಮಳೆಗಳಂತೆ ಅವರು ನಮ್ಮ ಬಳಿಗೆ ಬಂದೇ ಬರುವರು.


ನನ್ನ ಉಪದೇಶ ಹಸಿಹುಲ್ಲಿನ ಮೇಲೆ ಮೆಲ್ಲನೆ ಸುರಿವ ತುಂತುರುಗಳಂತೆ ನನ್ನ ಬೋಧೆ ಕಾಯಿಪಲ್ಯಗಳ ಮೇಲೆ ಮಂಜಿನಂತೆ ಬೀಳುವ ಹದಮಳೆಯಂತೆ.


ದೇವರಲ್ಲಿ ಭಯಭಕ್ತಿಯುಳ್ಳ ರಾಜನು ನೀತಿಯಿಂದ ಪ್ರಜೆಗಳನಾಳುವಾತನು ಉದಯಕಾಲದ ಸೂರ್ಯನಿಗೆ ಸಮಾನನು ಏರುವನಾತ ಮೇಘರಹಿತ ಪ್ರಾತಃಕಾಲದೊಳು ತೇಜೋಮಯನಾಗಿ ಮೊಳೆಯಿಸುವನು ಪಚ್ಚೆಪಸಿರನು ಮಳೆ ತೋಯ್ದ ನೆಲದೊಳು ಹುಲುಸಾಗಿ.


ನೇಗಿಲ ಗೆರೆಯನು ತೋಯಿಸಿ ಮಣ್ಣಿನ ಹೆಂಟೆಯನು ಕರಗಿಸುತಿ I ಪೊಡವಿಯ ಹೊಲವ ಮಾಚಿಸಿ, ಹುಲುಸಾಗಿ ಪೈರನು ಬೆಳೆಸುತಿ II


ಬಂಜರು ಭೂಮಿಯಾಗಿಸುವೆನು ಅದನ್ನು; ಕುಡಿಕತ್ತರಿಸುವರಾರೂ ಇರರು ಅದಕ್ಕೆ. ಮುಳ್ಳುಕಳೆ ಬೆಳೆಯುವುದು ಅದರೊಳಗೆ. ನೀಡುವೆನು ಆಣತಿಯೊಂದನು ಮೋಡಗಳಿಗೆ; ಸುರಿಸವು ತುಂತುರು ಮಳೆಯನ್ನೂ ಅದಕ್ಕೆ.


ರಾಜನ ರೋಷ ಸಿಂಹದ ಗರ್ಜನೆಯು; ಅವನ ದಯೆ ಹುಲ್ಲಿನ ಮೇಲಣ ಇಬ್ಬನಿಯು.


ಪ್ರಭುವಿನ ಮುಖಪ್ರಸನ್ನತೆ ಜೀವದ ಒರತೆ; ಆತನ ಕರುಣೆ ಮುಂಗಾರು ಮಳೆ.


ಅಸ್ಸೀರಿಯದವರು ಇವರ ಶಸ್ತ್ರಾಸ್ತ್ರಗಳಿಗೆ ತುತ್ತಾಗುವರು. ನಿಮ್ರೋದ್ ಸೀಮೆಯ ಪ್ರವೇಶದ್ವಾರಗಳು ಧ್ವಂಸವಾಗುವುವು. ಅಸ್ಸೀರಿಯದವರು ನಮ್ಮ ನಾಡಿಗೆ ನುಗ್ಗಿ ನಮ್ಮ ಕೋಟೆಯನ್ನು ಆಕ್ರಮಿಸುವಾಗ, ಆ ಶಾಂತಿದಾತನು ನಮ್ಮನ್ನು ರಕ್ಷಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು