Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 72:8 - ಕನ್ನಡ ಸತ್ಯವೇದವು C.L. Bible (BSI)

8 ಸಾಗರದಿಂದ ಸಾಗರದವರೆಗಿರಲಿ ಆತನ ಆಧಿಪತ್ಯ I ಮಹಾ ನದಿಯಿಂದ ಬುವಿ ಎಲ್ಲೆಯವರೆಗಿರಲಿ ಆತನ ಪ್ರಭುತ್ವ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಸಮುದ್ರದಿಂದ ಸಮುದ್ರದ ವರೆಗೂ, ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಆಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನು ಸಮುದ್ರದಿಂದ ಸಮುದ್ರದವರೆಗೂ [ಯೂಫ್ರೇಟೀಸ್] ನದಿಯಿಂದ ಭೂವಿುಯ ಕಟ್ಟಕಡೆಯವರೆಗೂ ಆಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವನ ರಾಜ್ಯವು ಸಮುದ್ರದಿಂದ ಸಮುದ್ರದವರೆಗೂ ಯೂಫ್ರೇಟೀಸ್ ನದಿಯಿಂದ ಭೂಮಿಯ ಬಹುದೂರದ ಸ್ಥಳದವರೆಗೂ ಬೆಳೆಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಸಮುದ್ರದಿಂದ ಸಮುದ್ರದವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಅರಸನು ಆಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 72:8
10 ತಿಳಿವುಗಳ ಹೋಲಿಕೆ  

ಕಿತ್ತುಹಾಕುವೆನು ಎಫ್ರಯಿಮಿನ ರಥಬಲವನು ನಿಶ್ಶೇಷಮಾಡುವೆನು ಜೆರುಸಲೇಮಿನ ಅಶ್ವಬಲವನು ಮುರಿಯಲಾಗುವುದು ಯುದ್ಧದ ಬಿಲ್ಲುಗಳನು. ಘೋಷಿಸುವೆನು ಶಾಂತಿಯನು ರಾಷ್ಟ್ರಗಳಿಗೆ ಆತನ ರಾಜ್ಯಭಾರ ಸಮುದ್ರದಿಂದ ಸಮುದ್ರದವರೆಗೆ ಯೂಫ್ರೆಟಿಸ್ ನದಿಯಿಂದ ಭುವಿಯ ಕಟ್ಟಕಡೆಯವರೆಗೆ.


ಕೆಂಪು ಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಿರುವ ಸಮುದ್ರದವರೆಗೂ ಮತ್ತು ಈ ಮರುಭೂಮಿಯಿಂದ ಯೂಫ್ರೆಟೀಸ್ ಮಹಾ ನದಿಯವರೆಗೂ ಇರುವ ನಾಡನ್ನೆಲ್ಲಾ ನಿಮಗೆ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು.


ತೊರೆನದಿಗಳಿಂದ ಸಾಗರದವರೆಗೆ I ಅಧಿಕಾರ ನೀಡುವೆ ಅವನ ಕೈಗೆ II


ಹರಡಿವೆ ಅದರ ಕೊಂಬೆಗಳು ಸಮುದ್ರದವರೆಗೆ I ಬೆಳೆದಿವೆ ಆ ರೆಂಬೆಗಳು ಮಹಾನದಿಯವರೆಗೆ II


ಕೇಳಿದೆಯಾದರೆ ನಿನಗಧೀನಮಾಡುವೆನು ರಾಷ್ಟ್ರಗಳನು I ಕೊಡುವೆನು ನಿನಗೆ ಸ್ವಾಸ್ತ್ಯವಾಗಿ ಜಗದ ಆದ್ಯಂತವನು II


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ರವಿಯಂತಿರುವುದು ಎನ್ನ ಮುಂದೆ ಅವನ ಗಾದಿ I ಚಿರ ಶಾಶ್ವತವಾಗಿರುವುದು ಅವನ ಸಂತತಿ II


ದಾವೀದನಿಗೆ ಜೀವಮಾನದಲ್ಲೆಲ್ಲಾ ಆಪ್ತಮಿತ್ರನಾಗಿದ್ದ ಟೈರಿನ ಅರಸನಾದ ಹೀರಾಮನು, ಸೊಲೊಮೋನನು ತಂದೆಗೆ ಬದಲಾಗಿ ಪಟ್ಟಾಭಿಷೇಕ ಪಡೆದಿದ್ದಾನೆಂದು ಕೇಳಿ, ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು