Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 72:9 - ಕನ್ನಡ ಸತ್ಯವೇದವು C.L. Bible (BSI)

9 ಅರಣ್ಯವಾಸಿಗಳು ಅರಸನಿಗೆ ಅಡ್ಡಬೀಳಲಿ I ಆತನ ಕಡುವೈರಿಗಳು ನೆಲದ ಮಣ್ಣು ಮುಕ್ಕಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅರಣ್ಯವಾಸಿಗಳು ಅವನಿಗೆ ಅಡ್ಡಬೀಳಲಿ; ಅವನ ವೈರಿಗಳು ಮಣ್ಣುಮುಕ್ಕಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅರಣ್ಯವಾಸಿಗಳು ಅವನಿಗೆ ಅಡ್ಡ ಬೀಳಲಿ; ಅವನ ವೈರಿಗಳು ಮಣ್ಣುಮುಕ್ಕಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅರಣ್ಯದಲ್ಲಿ ವಾಸಿಸುತ್ತಿರುವ ಜನರು ಅವನಿಗೆ ಅಡ್ಡಬೀಳಲಿ. ಅವನ ವೈರಿಗಳೆಲ್ಲ ಅವನ ಮುಂದೆ ಬಿದ್ದು ಮಣ್ಣುಮುಕ್ಕಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅರಸನ ಮುಂದೆ ಮರುಭೂಮಿಯ ನಿವಾಸಿಗಳು ಎರಗಲಿ. ಅರಸನ ಶತ್ರುಗಳು ಧೂಳನ್ನು ನೆಕ್ಕಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 72:9
12 ತಿಳಿವುಗಳ ಹೋಲಿಕೆ  

ಸಾಕುತಂದೆಗಳಾಗುವರು ರಾಜರು ನಿನಗೆ ಸಾಕುತಾಯಿಯರಾಗುವರು ರಾಣಿಯರು ನಿನಗೆ. ನಿನ್ನ ಪಾದಧೂಳಿಯ ನೆಕ್ಕುವರವರು ಸಾಷ್ಟಾಂಗವೆರಗಿ ನನಗೆ. ಆಗ ನಿನಗೆ ಗೊತ್ತಾಗುವುದು ನಾನೇ ಸರ್ವೇಶ್ವರನೆಂದು ನನ್ನನ್ನು ನಿರೀಕ್ಷಿಸುವವರು ಆಶಾಭಂಗಪಡರೆಂದು.


ನೆಲದ ಮೇಲೆ ಹರಿದಾಡುವ ಹಾವುಹಲ್ಲಿಗಳಂತೆ ಅವರು ಮಣ್ಣು ಮುಕ್ಕುವರು; ಗಡಗಡನೆ ನಡುಗುತ್ತಾ ಬಿಲದಿಂದ ಈಚೆ ಬರುವರು. ಸರ್ವೇಶ್ವರ ಎಂಬ ನಮ್ಮ ದೇವರಾದ ನಿಮ್ಮ ಕಡೆಗೆ ಭಯಭಕ್ತಿಯಿಂದ ತಿರುಗಿಕೊಳ್ಳುವರು.


“ಅಲ್ಲದೆ, ‘ನಾನು ತಮಗೆ ರಾಜನಾಗುವುದು ಬೇಡವೆಂದ ನನ್ನ ಶತ್ರುಗಳನ್ನು ಇಲ್ಲಿಗೆ ಎಳೆದು ತಂದು ನನ್ನ ಮುಂದೆಯೇ ಸಂಹರಿಸಿರಿ,” ಎಂದ.”


ನ್ಯಾಯತೀರಿಸುವನು ಪ್ರಭು ಸಕಲ ಜನಾಂಗಗಳಲಿ I ಛೇಧಿಸುವನು ಶತ್ರುಗಳ ಶಿರಸನು ರಣರಂಗದಲಿ I ತುಂಬಿಸುವನು ಹೆಣಗಳನು ಎಲ್ಲೆಡೆಗಳಲಿ II


ನುಡಿದಿಹನು ಇಂತೆಂದು ಪ್ರಭು ನನ್ನೊಡೆಯನಿಗೆ I “ಆಸೀನನಾಗಿರು ನೀನು ನನ್ನ ಬಲಗಡೆಗೆ I ಹಗೆಗಳನು ನಿನಗೆ ಕಾಲ್ಮಣೆಯಾಗಿಸುವವರೆಗೆ” II


ತಲೆಬಾಗುವರಾತನಿಗೆ ಧರೆಯ ಗರ್ವಿಗಳೆಲ್ಲರು I ಅಡ್ಡಬೀಳುವರವನಿಗೆ ಮರ್ತ್ಯಮಾನವರೆಲ್ಲರು II


ನೀ ಬಡಿದು ಹಾಕುವೆ ಕಬ್ಬಿಣದ ಗದೆಯಿಂದವರನು I ನೀ ಒಡೆದು ಹಾಕುವೆ ಮಣ್ಣಿನ ಮಡಕೆಯಂತವರನು"II


ಬಾಲಾತ್, ಮರುಭೂಮಿಯಲ್ಲಿ ಇರುವ ತಾಮರ್,


ಆಗ. ಸರ್ವೇಶ್ವರರಾದ ದೇವರು, ಇಂತೆಂದರು ಸರ್ಪಕ್ಕೆ: “ಈ ಪರಿಯ ಕೃತ್ಯವನ್ನು ನೀನೆಸಗಿದುದರಿಂದ ಶಾಪಗ್ರಸ್ತನಾದೆ ಎಲ್ಲ ಪಶು ಪ್ರಾಣಿಗಳಿಗಿಂತ; ಹರಿದಾಡುವೆ ಹೊಟ್ಟೆಯ ಮೇಲೆ ಇಂದಿನಿಂದ ತಿನ್ನುವೆ ಮಣ್ಣನೆ ಜೀವಮಾನ ಪರಿಯಂತ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು