Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 73:11 - ಕನ್ನಡ ಸತ್ಯವೇದವು C.L. Bible (BSI)

11 “ಆ ದೇವನೆಂತು ಕಂಡುಹಿಡಿದಾನು?” ಎಂಬರು I “ಪರಾತ್ಪರನು ಪರಿಜ್ಞನೆ?” ಎಂದುಕೊಳ್ವರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು “ದೇವರು ವಿಚಾರಿಸುವುದೆಲ್ಲಿ? ಪರಾತ್ಪರನಾದ ದೇವರು ಚಿಂತಿಸುವದುಂಟೋ” ಅಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದೇವರು ವಿಚಾರಿಸುವದೆಲ್ಲಿ? ಪರಾತ್ಪರನು ಚಿಂತಿಸುವದುಂಟೋ ಅಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ನಮ್ಮ ಕಾರ್ಯಗಳು ದೇವರಿಗೆ ಗೊತ್ತಿಲ್ಲ! ಮಹೋನ್ನತನಾದ ದೇವರಿಗೆ ಗೊತ್ತೇ ಇಲ್ಲ!” ಎಂದು ಆ ದುಷ್ಟರು ಹೇಳಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು, “ದೇವರಿಗೆ ಹೇಗೆ ಗೊತ್ತಾಗುವುದು? ಮಹೋನ್ನತನಿಗೆ ಏನಾದರೂ ತಿಳಿಯಲು ಸಾಧ್ಯವೇ?” ಎನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 73:11
10 ತಿಳಿವುಗಳ ಹೋಲಿಕೆ  

“ಆಗ ದೀಪವನ್ನು ಹಿಡಿದುಕೊಂಡು ಜೆರುಸಲೇಮನ್ನೆಲ್ಲಾ ಹುಡುಕಿಬಿಡುವೆನು. ‘ಸರ್ವೇಶ್ವರ ಮೇಲನ್ನಾಗಲಿ, ಕೇಡನ್ನಾಗಲಿ ಏನನ್ನೂ ಮಾಡುವುದಿಲ್ಲ’ ಎಂದುಕೊಳ್ಳುವ ಮದ್ಯದ ಮಡ್ಡಿಯಂಥ ಜಡ ಮನಸ್ಕರನ್ನು ದಂಡಿಸುವೆನು.


ಆದರೆ ಅವರ ದುಷ್ಕೃತ್ಯಗಳೆಲ್ಲ ಸರ್ವೇಶ್ವರಸ್ವಾಮಿಯ ಜ್ಞಾಪಕದಲ್ಲಿ ಇರುತ್ತವೆ ಎಂಬುದನ್ನು ಅವರು ಮನದಟ್ಟುಮಾಡಿಕೊಂಡಿಲ್ಲ. ಅವರ ನೀಚಕೃತ್ಯಗಳು ಅವರನ್ನು ಆವರಿಸಿಕೊಂಡಿವೆ; ನನ್ನ ಕಣ್ಮುಂದೆಯೇ ಇವೆ.


ಅವರಾಡಿಕೊಳ್ಳುತಿಹರು ಪ್ರಭು ನೋಡನೆಂದು I ಯಕೋಬ್ಯರ ಸ್ವಾಮಿದೇವ ವಿಚಾರಿಸನೆಂದು II


ಆಗ ದೇವರು ನನಗೆ, “ನರಪುತ್ರನೇ, ಇಸ್ರಯೇಲ್ ವಂಶದ ಹಿರಿಯರೆಲ್ಲರು ನಾನಾ ರೂಪಗಳಿಂದ ಚಿತ್ರಿತವಾದ ತಮ್ಮ ತಮ್ಮ ಕೊಠಡಿಗಳೊಳಗೆ, ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಸರ್ವೇಶ್ವರ ನಮ್ಮನ್ನು ನೋಡನು, ಸರ್ವೇಶ್ವರ ನಾಡನ್ನು ತೊರೆದುಬಿಟ್ಟಿದ್ದಾನೆ,’ ಎಂದು ಮಾತಾಡಿಕೊಳ್ಳುತ್ತಾರಷ್ಟೆ,” ಎಂಬುದಾಗಿ ಹೇಳಿದರು.


ನಾಕವನೆ ತಾಕುತಿದೆ ಅವರ ಗರ್ವದ ನುಡಿ I ಜಗದಲಿ ಹರಡುತಿದೆ ಅವರ ದರ್ಪದ ನುಡಿ II


ದೇವಾ, ನಿನಗದು ಬಯಲಾಗದಿರುತ್ತಿತ್ತೆ? I ನಮ್ಮೆದೆ ಗುಟ್ಟು ನಿನಗೆ ತಿಳಿಯದಿರುತ್ತಿತ್ತೆ? II


ಮನದೊಳಿಂತೆಂದು ನೆನೆದನಾ ದುರುಳನು: I “ದೇವನಿದನು ಮರೆತು ವಿಮುಖನಾಗಿಹನು I ಇನ್ನೆಂದಿಗು ನೋಡನು ಇದೆಲ್ಲವನು” II


ಸೊಕ್ಕೇರಿದ ಮುಖದಾತನು ಪ್ರಭುವನು ಅರಸುವುದಿಲ್ಲ I ಅವನ ಮನದೊಳಿದೊಂದೇ ಭಾವನೆ : “ದೇವರೇ ಇಲ್ಲ"! II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು