Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 73:14 - ಕನ್ನಡ ಸತ್ಯವೇದವು C.L. Bible (BSI)

14 ಏಕೆನೆ, ದಿನವಿಡಿ ನಾ ಬಾಧೆಪಡುತ್ತಿರುವೆ I ದಿನದಿನವು ದಂಡನೆಗೆ ಗುರಿಯಾಗುತ್ತಿರುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ಯಾವಾಗಲೂ ವ್ಯಾಧಿಪೀಡಿತನಾಗಿದ್ದು, ಪ್ರತಿದಿನವೂ ದಂಡಿಸಲ್ಪಡುತ್ತಾ ಇದ್ದೇನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನು ಯಾವಾಗಲೂ ವ್ಯಾಧಿಪೀಡಿತನಾಗಿದ್ದು ಪ್ರತಿದಿನವೂ ದಂಡಿಸಲ್ಪಡುತ್ತಾ ಇದ್ದೇನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದೇವರೇ ದಿನವೆಲ್ಲಾ ನಾನು ಕಷ್ಟಪಡುತ್ತಿರುವೆ. ಪ್ರತಿ ಮುಂಜಾನೆಯೂ ನೀನು ನನ್ನನ್ನು ಶಿಕ್ಷಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಏಕೆಂದರೆ ನಾನು ದಿನವೆಲ್ಲಾ ಬಾಧೆಪಡುತ್ತಿದ್ದೇನೆ. ಪ್ರತಿ ಉದಯವೂ ನನಗೆ ಹೊಸ ಶಿಕ್ಷೆಯಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 73:14
10 ತಿಳಿವುಗಳ ಹೋಲಿಕೆ  

ಮಕ್ಕಳಿಗೆ ಹೇಳುವಂತೆ ದೇವರು ನಿಮಗೆ ಹೇಳಿರುವ ಎಚ್ಚರಿಕೆಯ ಮಾತನ್ನು ನೀವು ಮರೆತುಬಿಟ್ಟಿರೋ? “ಸುಕುಮಾರಾ, ಸರ್ವೇಶ್ವರ ಕೊಡುವ ಶಿಕ್ಷೆಯನ್ನು ತಾತ್ಸಾರ ಮಾಡದಿರು ಅವರು ನಿನ್ನನ್ನು ದಂಡಿಸುವಾಗ ಧೈರ್ಯಗೆಡದಿರು


ಪ್ರಭು, ನಿನ್ನಿಂದ ಶಿಕ್ಷಿತನಾದ ಮಾನವ ಧನ್ಯ I ನಿನ್ನಿಂದ ಧರ್ಮೋಪದೇಶ ಪಡೆದವನು ಧನ್ಯ II


ಸದ್ಯಕ್ಕೆ ನೀವು ಕೊಂಚಕಾಲ ಹಲವಿಧವಾದ ಪರಿಶೋಧನೆಗಳ ನಿಮಿತ್ತ ದುಃಖವನ್ನು ಅನುಭವಿಸಬೇಕಾಗಿದ್ದರೂ ಪ್ರತ್ಯಕ್ಷವಾಗಲಿರುವ ಆ ಸಿರಿಸಂಪತ್ತನ್ನು ಜ್ಞಾಪಿಸಿಕೊಂಡು ಹರ್ಷಚಿತ್ತರಾಗಿರಿ.


“ಜಗದ ಜನಾಂಗಗಳಲ್ಲಿ ನನಗೆ ಆಪ್ತರಾದವರೆಂದರೆ ನೀವು. ಆದಕಾರಣ ನೀವು ಮಾಡಿರುವ ಎಲ್ಲಾ ಪಾಪಗಳಿಗೆ ತಕ್ಕ ಪ್ರಾಯಶ್ಚಿತ್ತವನ್ನು ಸವಿಯುವಂತೆ ಮಾಡುವೆನು.”


ನನಗೇಕೆ ನಿರಂತರವಾದ ವೇದನೆ? ಗುಣವಾಗದ ಗಡಸು ಗಾಯ? ನೀರು ಇರುವುದಾಗಿ ತೋರಿಸಿಕೊಳ್ಳುವ ಕಳ್ಳ ತೊರೆಯಾಗಬೇಕೆ ನೀವು ನನಗೆ?”


ಸಜ್ಜನನಿಗೊದಗುವ ಸಂಕಟಗಳು ವಿಪರೀತ I ಪ್ರಭುವೆಲ್ಲವನು ನಿವಾರಿಸುವುದು ನಿಶ್ಚಿತ II


ನನಗೆ ವಿರುದ್ಧ ಹೊಸ ಹೊಸ ಸಾಕ್ಷಿಗಳನ್ನು ಬರಮಾಡುವೆ ನನ್ನ ಮೇಲೆ ಹೆಚ್ಚುಹೆಚ್ಚಾಗಿ ಸಿಟ್ಟುಗೊಳ್ಳುವೆ ಅಲೆಅಲೆಯಾಗಿ ಹಗೆಗಳನ್ನು ನನ್ನ ಮೇಲೆ ಧಾಳಿಮಾಡ ಬಿಡುವೆ.


ದುರುಳರ ಯೋಜನೆಯನು ನೀನು ಪುರಸ್ಕರಿಸಬಹುದೆ? ನಿನ್ನ ಕೈಕೃತಿಯಾದ ನನ್ನನು ತಿರಸ್ಕರಿಸಿ ಬಾಧಿಸುವುದು ಸರಿಯೆ?


ದಿನ ಬಿಡದೆ ಅವನನ್ನು ಸಂದರ್ಶಿಸಲು; ಕ್ಷಣಕ್ಷಣಕ್ಕೂ ಅವನನ್ನು ಪರೀಕ್ಷಿಸಲು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು