Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 73:16 - ಕನ್ನಡ ಸತ್ಯವೇದವು C.L. Bible (BSI)

16 ಇದರ ಮರ್ಮವನು ನಾ ಬಗೆಹರಿಸಲು ಯತ್ನಿಸೆ I ತೋಚಿತೆನಗಿದು ಬಿಡಿಸಲಾಗದಂಥ ಸಮಸ್ಯೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ಇದನ್ನು ಗ್ರಹಿಸಿಕೊಳ್ಳಬೇಕೆಂದು ಎಷ್ಟು ಚಿಂತಿಸಿದರೂ ಅದು ಒಂದು ಕಷ್ಟಕರವಾದ ಮರ್ಮವೆಂದು ತೋಚಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನು ಇದನ್ನು ಗ್ರಹಿಸಿಕೊಳ್ಳಬೇಕೆಂದು ಎಷ್ಟು ಚಿಂತಿಸಿದರೂ ಅದು ಒಂದು ಕಷ್ಟಕರವಾದ ಮರ್ಮವೆಂದು ತೋಚಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಇವುಗಳನ್ನು ಅರ್ಥಮಾಡಿಕೊಳ್ಳಲು ನಾನು ಬಹಳವಾಗಿ ಪ್ರಯತ್ನಿಸಿದರೂ ನಿನ್ನ ಆಲಯಕ್ಕೆ ಹೋಗುವವರೆಗೂ ಕಷ್ಟಕರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇದನ್ನೆಲ್ಲಾ ತಿಳಿದುಕೊಳ್ಳುವುದಕ್ಕೆ ನಾನು ಪ್ರಯತ್ನಿಸಿದಾಗ, ಅದು ನನಗೆ ಬಹಳವಾಗಿ ಕಷ್ಟಕರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 73:16
10 ತಿಳಿವುಗಳ ಹೋಲಿಕೆ  

ಎಷ್ಟು ಪ್ರಯಾಸಪಟ್ಟು ವಿಚಾರಿಸಿದರೂ ಅವನಿಂದ ಸಾಧ್ಯವಾಗದು. ಹೌದು, ಜ್ಞಾನಿ ತನ್ನಿಂದಾಗುತ್ತದೆ ಎಂದು ಹೇಳಿಕೊಳ್ಳಬಹುದು; ಆದರೆ ಅವನಿಂದಲೂ ಅದು ಸಾಧ್ಯವಾಗದು.


ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ!


ಇವೇ ಮುಗಿಲೂ ಕಾರ್ಮುಗಿಲೂ ಆತನ ಸುತ್ತಲು I ನ್ಯಾಯ-ನೀತಿ ಆತನ ಗದ್ದುಗೆಯಸ್ತಿವಾರಗಳು II


ಸಾಗರವನೆ ನೀ ತುಳಿದು ನಡೆದೆ I ಮಹಾಸಾಗರವನೆ ನೀ ದಾಟಿದೆ I ಹೆಜ್ಜೆಯ ಗುರುತನೂ ಕಾಣಬಿಡದೆ II


ನರಮಾನವನು ಮೆರೆದಾಡುವನು ಮಾಯೆಯಂತೆ I ಅವನ ಸಡಗರವೆಲ್ಲವೂ ನಿರರ್ಥಕದಂತೆ I ಕೂಡಿಪನಾತ ಸಿರಿ ಅದು ಯಾರದಾಗುವುದೆಂದು ಅರಿಯದೆ II


ನಿನ್ನ ನೀತಿ ಸುರಗಿರಿಯಂತೆ, ನಿನ್ನ ನ್ಯಾಯ ಮಹಾಸಾಗರದಂತೆ I ಮಾನವರನು, ಪಶುಪ್ರಾಣಿಗಳನು ಪ್ರಭು, ಸಲಹುವೆ ರಕ್ಷಕನಂತೆ II


ಜ್ಞಾನ ಎಂದರೇನು? ಮೂಢತನವೆಂದರೇನು? ಬುದ್ಧಿಹೀನತೆ ಎಂದರೇನು? ಇವುಗಳನ್ನು ಅರಿತುಕೊಳ್ಳಲು ಮನಸ್ಸು ಮಾಡಿದೆ. ಆದರೆ ಇದೂ ಸಹ ಗಾಳಿಯನ್ನು ಹಿಡಿಯಲು ಬೆನ್ನಟ್ಟಿಹೋದಂತೆ ವ್ಯರ್ಥ ಎಂದು ಅರಿತುಕೊಂಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು