Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 73:18 - ಕನ್ನಡ ಸತ್ಯವೇದವು C.L. Bible (BSI)

18 ಜಾರು ನೆಲದಲಿ ಆ ಜನರನು ನೀ ನಿಲ್ಲಿಸಿರುವೆ I ನಿಶ್ಚಯವಾಗಿ ನೀ ಬೀಳಿಸಿ ಅವರನು ನಾಶಮಾಡುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹೌದು, ನೀನು ಅವರನ್ನು ಅಪಾಯಕರ ಸ್ಥಳದಲ್ಲಿಟ್ಟು, ಬೀಳಿಸಿ, ನಾಶಮಾಡಿಬಿಡುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹೌದು, ನೀನು ಅವರನ್ನು ಅಪಾಯಕರ ಸ್ಥಳದಲ್ಲಿಟ್ಟು ಬೀಳಿಸಿ ನಾಶಮಾಡಿಬಿಡುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀನು ಅವರನ್ನು ಅಪಾಯಕರವಾದ ಪರಿಸ್ಥಿತಿಯಲ್ಲಿ ಇಟ್ಟಿರುವೆ. ಅವರು ಸುಲಭವಾಗಿ ಬಿದ್ದು ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಿಶ್ಚಯವಾಗಿ ನೀವು ಜಾರುವ ಸ್ಥಳಗಳಲ್ಲಿ ಅವರನ್ನು ಬಿಟ್ಟಿದ್ದೀರಿ. ಅವರನ್ನು ದಂಡಿಸಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 73:18
11 ತಿಳಿವುಗಳ ಹೋಲಿಕೆ  

ಇಳಿಜಾರು, ಕಾರಿರುಳು ಇರುವ ಹಾದಿಯಲಿ I ಪ್ರಭುವಿನ ದೂತನವರನು ಓಡಿಸಿಬಿಡಲಿ II


ಕತ್ತಲೊಳು ಜಾರಿಬೀಳುವ ಇಳುಮೇಡು ಅವರ ಮಾರ್ಗ ತಳ್ಳಲ್ಪಡುವರು, ಅಂಧಕಾರದೊಳು ಬಿದ್ದುಹೋಗುವರು ಕೇಡನ್ನು ಅವರ ಮೇಲೆ ಬರಮಾಡುವೆನು ವಿಚಾರಣೆ ವರುಷದ ಕೇಡನ್ನು ಬರಮಾಡುವೆನು ಸರ್ವೇಶ್ವರನ ನುಡಿ ಇದು.”


ಅವನ ಶತ್ರುಗಳಿಗೆ ಮುಯ್ಯಿತೀರಿಸುವುದು ನನ್ನ ಕೆಲಸ; ಸಮೀಪಿಸಿತವರಿಗೆ ಜಾರಿಬೀಳುವ ಸಮಯ, ವಿಪತ್ಕಾಲ; ಬೇಗಬರುವುದು ಅವರಿಗೆ ಸಿದ್ಧವಾದ ದುರ್ಗತಿಕಾಲ!


ದಂಡಿಸುವನಾ ಕೆಡುಕರನು ಅವರ ಕೆಟ್ಟತನಕ್ಕಾಗಿ I ನಿರ್ಮೂಲ ಮಾಡುವನಾ ಜನರ ದುಷ್ಟತನಕ್ಕಾಗಿ I ನಮ್ಮೊಡೆಯ ದೇವನು ಸಂಹರಿಸಿಬಿಡುವನು ಈ ಕಾರಣಕ್ಕಾಗಿ II


ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ II


ಇವರು ಪ್ರಭುವಿನ ಸನ್ನಿಧಿಯಿಂದಲೂ ಅವರ ಪ್ರಭಾವದ ಮಹಿಮೆಯಿಂದಲೂ ಬಹಿಷ್ಕೃತರಾಗಿ, ನಿತ್ಯದಂಡನೆಗೆ ಗುರಿಯಾಗುವರು.


ದುರುಳರು ಚಿಗುರಬಹುದು ಹುಲ್ಲಿನಂತೆ I ಕೆಡುಕರು ಅರಳಬಹುದು ಹೂವಿನಂತೆ I ಅವರ ಅಳಿವಂತೂ ಕಟ್ಟಿಟ್ಟ ಬುತ್ತಿಯಂತೆ II


ದುರುಳರ ಬೆಡಗೋ ಬಾಡಿಹೋಗುವುದು ಹುಲ್ಲಿನಂತೆ I ಪ್ರಭುವಿನ ಶತ್ರುಗಳು ತೇಲಿಹೋಗುವರು ಹೊಗೆಯಂತೆ II


ಬಿದ್ದರೂ ಅವನೆದ್ದೇ ತೀರುವನು I ಪ್ರಭು ಅವನಿಗೆ ಊರುಗೋಲಾಗಿಹನು II


ನೀನಾದರೊ ಪ್ರಭು, ಸರ್ವದಾ ಇರುವೆ I ಮಹೋನ್ನತದೊಳು ವಿರಾಜಿಸುತ್ತಿರುವೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು