Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 73:23 - ಕನ್ನಡ ಸತ್ಯವೇದವು C.L. Bible (BSI)

23 ಆದರೂ ನಾನಿರುವೆ ನಿನ್ನ ಸನ್ನಿಧಿಯಲಿ I ನೀ ಹಿಡಿದಿರುವೆ ನನ್ನ ಬಲಗೈಯನು ಭದ್ರವಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದರೂ ಸದಾ ನಿನ್ನ ಸನ್ನಿಧಿಯಲ್ಲಿಯೇ ಇದ್ದೇನೆ. ನೀನು ನನ್ನ ಬಲಗೈಯನ್ನು ಹಿಡಿದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆದರೂ ಸದಾ ನಿನ್ನ ಸನ್ನಿಧಿಯಲ್ಲಿಯೇ ಇದ್ದೇನೆ. ನೀನು ನನ್ನ ಬಲಗೈಯನ್ನು ಹಿಡಿದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೂ ನಾನು ಯಾವಾಗಲೂ ನಿನ್ನ ಸಂಗಡವಿದ್ದೇನೆ. ನನ್ನ ಕೈಯನ್ನು ಹಿಡಿದುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೂ ನಾನು ನಿಮ್ಮ ಸಂಗಡ ಯಾವಾಗಲೂ ಇದ್ದೇನೆ. ನೀವು ನನ್ನ ಬಲಗೈಯನ್ನು ಹಿಡಿದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 73:23
14 ತಿಳಿವುಗಳ ಹೋಲಿಕೆ  

ನಿನ್ನ ದೇವರಾದ ಸರ್ವೇಶ್ವರ ನಾನೇ ಭಯಪಡಬೇಡ, ನಿನಗೆ ನಾನೇ ನೆರವಾಗುವೆ ಎಂತಲೇ, ನಿನ್ನ ಕೈ ಹಿಡಿದುಕೊಳ್ಳುವೆ.


ನನ್ನಾತ್ಮ ನಿನಗಾತುಕೊಂಡಿದೆ I ನಿನ್ನ ಬಲಗೈ ನನಗಿಂಬಾಗಿದೆ II


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಹಣದಾಶೆಗೆ ಬಲಿಯಾಗಬೇಡಿ. ನಿಮಗೆ ಇರುವುದರಲ್ಲಿಯೇ ತೃಪ್ತರಾಗಿರಿ. “ಎಂದೆಂದಿಗೂ ನಾನು ನಿನ್ನ ಕೈಬಿಡಲಾರೆ; ತ್ಯಜಿಸಲಾರೆ,” ಎಂದು ದೇವರೇ ಹೇಳಿದ್ದಾರೆ.


ಇರಿಸಿಕೊಳ್ಳುವೆ ಪ್ರಭುವನು ಸತತ ನನ್ನೆದುರಿಗೆ I ಆತನಿರಲು ಬಲಕ್ಕೆ ನನಗೆಲ್ಲಿಯದು ಹೆದರಿಕೆ II


ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು, ಅಂಜೆನು ಕೇಡಿಗೆ I ನಿನ್ನ ಕುರಿಗೋಲು, ಊರುಗೋಲು, ಧೈರ್ಯವನು ತರುವುದೆನಗೆ I ಕಾಣೆನೆಂದಿಗೂ ನಾ ದಿಗಿಲನು, ನೀನಿರಲು ನನ್ನೊಂದಿಗೆ II


“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.


ಬಿದ್ದರೂ ಅವನೆದ್ದೇ ತೀರುವನು I ಪ್ರಭು ಅವನಿಗೆ ಊರುಗೋಲಾಗಿಹನು II


ಇಗೋ, ನನ್ನ ದಾಸನು ! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ಬತ್ತಿಹೋಗುವುದು ದುರ್ಜನರ ಭುಜಬಲ I ಸತ್ಯವಂತರಿಗೆ ಪ್ರಭುವೇ ಉನ್ನತಬಲ II


ಎಣಿಕೆಗೆ ಅವುಗಳ ಸಂಖ್ಯೆ ಸಮುದ್ರತೀರದ ಮರಳಿನಂತೆ I ಎಚ್ಚತ್ತು ಎಣಿಸಲೆತ್ನಿಸೆ ನಿನ್ನ ಮುಂದಿರುವೆ ಮುಂಚಿನಂತೆ II


ಅಬ್ರಾಮನಿಗೆ ತೊಂಬತ್ತೊಂಬತ್ತು ವರ್ಷಗಳಾಗಿದ್ದಾಗ, ಸರ್ವೇಶ್ವರ ದರ್ಶನವಿತ್ತು ಇಂತೆಂದರು: “ನಾನು ಸರ್ವಶಕ್ತ ಸರ್ವೇಶ್ವರ. ನೀನು ನನ್ನ ಸಮ್ಮುಖದಲ್ಲಿದ್ದು ನಿರ್ದೋಷಿಯಾಗಿ ನಡೆದುಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು