Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 73:24 - ಕನ್ನಡ ಸತ್ಯವೇದವು C.L. Bible (BSI)

24 ಸೂಕ್ತ ಸಲಹೆಯನಿತ್ತು ಮುಂದಕೆನ್ನ ನಡೆಸು I ಅಂತ್ಯದಲಿ ನಿನ್ನ ಮಹಿಮೆಗೆನ್ನ ಸೇರ್ಪಡಿಸು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಿನ್ನ ಚಿತ್ತವನ್ನು ತಿಳಿಯಪಡಿಸಿ, ನನ್ನನ್ನು ನಡೆಸಿ ತರುವಾಯ ಮಹಿಮೆಗೆ ಸೇರಿಸಿಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಿನ್ನ ಚಿತ್ತವನ್ನು ತಿಳಿಯಪಡಿಸಿ ನನ್ನನ್ನು ನಡಿಸಿ ತರುವಾಯ ಮಹಿಮೆಗೆ ಸೇರಿಸಿಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನನಗೆ ಉಪದೇಶಿಸುತ್ತಾ ನನ್ನನ್ನು ಮುನ್ನಡೆಸು. ಬಳಿಕ ನಿನ್ನ ಮಹಿಮೆಗೆ ನನ್ನನ್ನು ಸೇರಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನಿಮ್ಮ ಆಲೋಚನೆಯಂತೆ ನನ್ನನ್ನು ನಡೆಸಿ, ತರುವಾಯ ಮಹಿಮೆಗೆ ನನ್ನನ್ನು ಸೇರಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 73:24
25 ತಿಳಿವುಗಳ ಹೋಲಿಕೆ  

ಪ್ರಭು ಇಂತೆಂದನು : “ಕಲಿಸುವೆನು, ನಾ ನಿನಗೆ ತಿಳಿಸುವೆನು ಸನ್ಮಾರ್ಗವನು I ಕಟಾಕ್ಷಿಸಿ ನಿನ್ನನು, ಈವೆನು ಸದಾಲೋಚನೆಯನು II


ಸರ್ವೇಶ್ವರ ಸ್ವಾಮಿ ನಿಮ್ಮನ್ನು ನಿರಂತರವಾಗಿ ಮುನ್ನಡೆಸುವರು; ಮರುಭೂಮಿಯಲ್ಲೂ ನಿಮಗೆ ಮನಃತೃಪ್ತಿಯನ್ನು ನೀಡುವರು; ನಿಮ್ಮ ಎಲುಬುಗಳನ್ನು ಬಲಪಡಿಸುವರು; ನೀರೆರೆದ ತೋಟದಂತೆಯೂ ಬತ್ತಿಹೋಗದ ಬುಗ್ಗೆಯಂತೆಯೂ ನೀವು ಇರುವಿರಿ.


ಆಗ ತಿಳಿಸಿರಿ ಮುಂದಣ ಪೀಳಿಗೆಗಿಂತೆಂದು - “ಈತನೀತನೇ ನಮ್ಮ ದೇವನು ಯುಗಯುಗಕು I ನಮಗೀತ ಮಾರ್ಗದರ್ಶಕ ತಲತಲಾಂತರಕು” II


ನಿನ್ನ ಜೀವೋದ್ಧಾರಕನು ಇಸ್ರಯೇಲಿನ ಪರಮಪಾವನನು ಆದ ಸರ್ವೇಶ್ವರ ಸ್ವಾಮಿಯೆ ನುಡಿದಿಹನು : “ನಿನಗೆ ಕ್ಷೇಮ‍ಕರವಾದ ಮಾರ್ಗವನು ಬೋಧಿಸುವವನೂ ನೀ ಹೋಗಬೇಕಾದ ಹಾದಿಯಲಿ ನಡೆಯಿಸುವವನೂ ಆದಂಥ ಸರ್ವೇಶ್ವರ ಸ್ವಾಮಿ ದೇವರು ನಾನು.


ನೀವು ಬಲಕ್ಕಾಗಲೀ ಎಡಕ್ಕಾಗಲೀ ತಿರುಗಿದರೆ, ‘ಇದೇ ಮಾರ್ಗ, ಇದರಲ್ಲೇ ನಡೆಯಿರಿ,’ ಎಂಬ ಮಾತು ಹಿಂದಿನಿಂದ ನಿಮ್ಮ ಕಿವಿಗೆ ಕೇಳಿಸುವುದು.


ದೀನರನು ನಡೆಸುವನು ತನ್ನ ವಿಧಿಗನುಸಾರ I ದಲಿತರಿಗೆ ಕಲಿಸುವನು ತನ್ನ ಧರ್ಮಾಚಾರ II


ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.


ಹೇಗೂ ಸತ್ಯಸ್ವರೂಪಿ ಆದ ಪವಿತ್ರಾತ್ಮ ಬಂದಮೇಲೆ ನಿಮ್ಮನ್ನು ಸಮಗ್ರ ಸತ್ಯದೆಡೆಗೆ ಕರೆದೊಯ್ಯುವರು. ಅವರು ತಮ್ಮಷ್ಟಕ್ಕೆ ತಾವೇ ಏನನ್ನೂ ಬೋಧಿಸದೆ ತಾವು ಕೇಳಿದುದನ್ನು ಕುರಿತೇ ಮಾತನಾಡುವರು; ಮುಂದೆ ನಡೆಯಲಿರುವುದನ್ನೂ ನಿಮಗೆ ತಿಳಿಸುವರು.


“ಇದನ್ನು ಆಚರಿಸುವಾಗ ನೀವು ಉದಯಕಾಲದ ಸೂರ್ಯನಂತೆ ಪ್ರಜ್ವಲಿಸುವಿರಿ. ಆರೋಗ್ಯಭಾಗ್ಯವು ನಿಮಗೆ ಬೇಗನೆ ದೊರಕುವುದು. ನಿಮ್ಮ ಸದಾಚಾರವೆ ನಿಮಗೆ ಮುಂಬಲವಾಗಿ ನಡೆಸುವುದು; ಸರ್ವೇಶ್ವರ ಸ್ವಾಮಿಯ ಮಹಿಮೆ ನಿಮಗೆ ಹಿಂಬಲವಾಗಿ ಇರುವುದು.


ದೇವನೆಮಗೆ ಬೆಳಕು ಕೊಡುವ ಸೂರ್ಯನು I ಕಾದಿಟ್ಟು ರಕ್ಷಿಸುವ ಗುರಾಣಿಯು I ಸನ್ಮಾರ್ಗಿಗೆ ಈವನು ಸಕಲ ವರಗಳನು II


ನನ್ನನ್ನಾದರೊ ಸ್ವಾಗತಿಸುವನು ದೇವನು I ಪಾತಾಳದ ಹಿಡಿತದಿಂದ ಬಿಡಿಸುವನು II


ಪ್ರಭುವಿಗೆನ್ನ ಧನ್ಯವಾದ - ಆತನೇ ನನಗೆ ಮಾರ್ಗದರ್ಶಕ I ಅಂಧಕಾರದೊಳೂ ನನ್ನ ಮನಸ್ಸಾಕ್ಷಿಯೆ ನನಗೆ ಬೋಧಕ II


ಪಿತನೇ, ಜಗತ್ತು ಉಂಟಾಗುವ ಮೊದಲೇ ನಿಮ್ಮೊಡನೆ ನನಗಿದ್ದ ಅದೇ ಮಹಿಮೆಯನ್ನು ಕೊಟ್ಟು ನನ್ನನ್ನು ಈಗ ನಿಮ್ಮ ಸನ್ನಿಧಿಯಲ್ಲಿ ಮಹಿಮೆಪಡಿಸಿರಿ.


ಪಿತನೇ, ಇವರನ್ನು ನೀವು ನನಗೆ ಕೊಟ್ಟಿರುವಿರಿ. ಜಗತ್ತು ಉಂಟಾಗುವ ಮೊದಲೇ ನೀವು ನನ್ನನ್ನು ಪ್ರೀತಿಸಿ ನನಗಿತ್ತ ಮಹಿಮೆಯನ್ನು ಇವರೂ ಕಾಣುವಂತೆ ನಾನಿದ್ದಲ್ಲಿ ಇವರೂ ಇರಬೇಕೆಂದು ಆಶಿಸುತ್ತೇನೆ.


ಅಣಿಗೊಳಿಸಿದ ಬಳಿಕ ಹಿಂದಿರುಗಿ ಬಂದು ನಿಮ್ಮನ್ನು ಕರೆದೊಯ್ಯುತ್ತೇನೆ. ನಾನಿರುವೆಡೆಯಲ್ಲಿಯೇ ನೀವೂ ಇರಬೇಕು.


ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅವಕ್ಕಿಂತಲೂ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಪವಿತ್ರಾತ್ಮ ಅವರನ್ನೇ ಅನುಗ್ರಹಿಸಬಲ್ಲರು! ಎಂದು ನಾನು ನಿಮಗೆ ಹೇಳುತ್ತೇನೆ.”


ನಾನು ಹಿಡಿದಿರುವ ಹಾದಿ ನೀತಿಯುತ ನಾನು ನಡೆಯುವುದು ನ್ಯಾಯಪಥ.


ಭೂಮಿಯ ಮೇಲಿನ ನಮ್ಮ ಈ ದೇಹ ಎಂಬ ಗುಡಾರವು ನಾಶವಾಗಿಹೋದರೂ ಸ್ವರ್ಗದಲ್ಲಿ ಶಾಶ್ವತವಾದ ಗೃಹವೊಂದು ನಮಗೆ ದೊರಕುವುದು. ಅದು ಮಾನವರಿಂದ ನಿರ್ಮಿತ ಆದುದಲ್ಲ, ದೇವರಿಂದಲೇ ನಿರ್ಮಿತವಾದುದು. ಇದು ನಮಗೆ ತಿಳಿದ ವಿಷಯ.


ಯೇಸುಸ್ವಾಮಿ, “ಪಿತನೇ, ನನ್ನಾತ್ಮವನ್ನು ನಿಮ್ಮ ಕೈಗೊಪ್ಪಿಸುತ್ತೇನೆ,” ಎಂದು ಗಟ್ಟಿಯಾಗಿ ಕೂಗಿ ಪ್ರಾಣಬಿಟ್ಟರು.


ಅವರು ತನ್ನ ಮೇಲೆ ಕಲ್ಲುಬೀರುತ್ತಿದ್ದಾಗ ಸ್ತೇಫನನು, “ಪ್ರಭು ಯೇಸುವೇ, ನನ್ನಾತ್ಮವನ್ನು ಸ್ವೀಕರಿಸಿ,” ಎಂದು ಪ್ರಾರ್ಥಿಸಿದನು.


ದೇವದರ್ಶನದ ಗುಡಾರದ ಮೇಲೆ ಆ ಮೇಘ ನಿಲ್ಲುವುದು ಎರಡು ದಿನವಾದರೂ ತಿಂಗಳಾದರೂ ಒಂದು ವರ್ಷವಾದರೂ ಸರಿಯೇ ಅಲ್ಲಿಯತನಕ ಇಸ್ರಯೇಲರು ಪ್ರಯಾಣ ಮಾಡದೆ ಅಲ್ಲೇ ಇಳಿದುಕೊಂಡಿರುತ್ತಿದ್ದರು. ಅದು ಮೇಲೆದ್ದಾಗ ಅವರು ಹೊರಡುತ್ತಿದ್ದರು.


ಸ್ವದೇಶದವರಿಗೆ ದೊರಕುವಂತೆ ಅವರಿಗೆ ಸೊತ್ತು ದೊರಕುವುದಿಲ್ಲ. ಸರ್ವೇಶ್ವರ ಸ್ವಾಮಿಯೇ ಲೇವಿಯರ ಸೊತ್ತು. ಇದನ್ನು ಸ್ವಾಮಿಯೇ ಅವರಿಗೆ ಹೇಳಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು