Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 73:26 - ಕನ್ನಡ ಸತ್ಯವೇದವು C.L. Bible (BSI)

26 ನನ್ನ ತನುಮನಗಳೆಲ್ಲವೂ ಸೊರಗಿಹೋದರೂ I ನನ್ನಾತ್ಮದ ಶಕ್ತಿ, ಶಾಶ್ವತ ಸೊತ್ತು ದೇವರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ತನುಮನಗಳು ಕ್ಷಯಿಸಿದರೂ ನನ್ನ ಆತ್ಮಕ್ಕೆ ಬಲವು ನನ್ನ ಶಾಶ್ವತವಾದ ಪಾಲೂ ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ತನುಮನಗಳು ಕ್ಷಯಿಸಿದರೂ ನನ್ನ ಆತ್ಮಕ್ಕೆ ಶರಣನೂ ನನ್ನ ಶಾಶ್ವತವಾದ ಪಾಲೂ ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನನ್ನ ಹೃದಯವೂ ದೇಹವೂ ನಾಶವಾಗುತ್ತವೆ; ಆದರೆ ಎಂದೆಂದಿಗೂ ನೀನೇ ನನಗೆ ಆಶ್ರಯಸ್ಥಾನವೂ ನನ್ನ ದೇವರೂ ಆಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನನ್ನ ತನುಮನಗಳು ಕುಂದುತ್ತವೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ, ನನ್ನ ಪಾಲೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 73:26
21 ತಿಳಿವುಗಳ ಹೋಲಿಕೆ  

ಮೊರೆಯಿಟ್ಟಾಗ ದಯಪಾಲಿಸಿದೆ ಸದುತ್ತರವನು I ಅಧಿಕಮಾಡಿದೆ ನೀನು ನನ್ನಾತ್ಮ ಶಕ್ತಿಯನು II


ಪ್ರಭುವೇ ನನ್ನ ಕಲ್ಲುಕೋಟೆ, ನನಗೆ ವಿಮೋಚಕ I ಆತನೇ ನನ್ನ ದೇವ, ನನ್ನಾಶ್ರಯ ದುರ್ಗ I ಆತನೆನಗೆ ಗುರಾಣಿ, ಗಿರಿ, ರಕ್ಷಣಾಶೃಂಗ II


ಹಂಬಲಿಸಿ ಸೊರಗಿಹೋಗಿದೆ ಎನ್ನ ಮನ I ಕಾಣಬೇಕೆಂದು ಪ್ರಭುವಿನ ಪ್ರಾಂಗಣ II


ದೇವಾ, ನೀಯೆನ್ನ ದೇವ, ನಿನಗಾಗಿ ನಾ ಕಾದಿರುವೆ I ನಿರ್ಜಲ ಮರುಭೂಮಿಯಲಿ ನೀರಿಗಾಗಿ ಹಾತೊರೆವಂತೆ I ನಿನಗೋಸ್ಕರ ಎನ್ನ ತನು ಸೊರಗಿದೆ, ಮನ ಬಾಯಾರಿದೆ II


ಪ್ರಭುವೇ, ನನಗಾಶ್ರಯ ನೀನೇ I ನನ್ನ ಬಾಳಿನ ಸೊತ್ತು ನೀನೇ I ಕೂಗಿ ನಿನಗೆ ಮೊರೆಯಿಡುತ್ತೇನೆ II


“ನನ್ನ ಪಾಲಿನ ಸೊತ್ತು ಸರ್ವೇಶ್ವರನೇ, ನಿರೀಕ್ಷಿಸುತ್ತಿರುವೆನು ನಾನು ಆತನನ್ನೇ” ಇಂತೆಂದುಕೊಳ್ಳುತ್ತದೆ ನನ್ನ ಅಂತರಾತ್ಮ.


ಪ್ರಭುವನು ಎದುರುನೋಡುತ್ತಿರು ಮನವೇ I ಧೈರ್ಯದಿಂದ ನಿರೀಕ್ಷಿಸುತ್ತಿರು ಎದೆಗುಂದದೆ II


ನಾನು ಈ ಗುಡಾರವನ್ನು ತ್ಯಜಿಸುವ ಕಾಲವು ಸಮೀಪಿಸಿತೆಂದು ಬಲ್ಲೆ. ನಮ್ಮ ಪ್ರಭು ಯೇಸುಕ್ರಿಸ್ತರೇ ನನಗಿದನ್ನು ಸ್ಪಷ್ಟಪಡಿಸಿದ್ದಾರೆ.


ನನಗಂತೂ ಬದುಕುವುದೆಂದರೆ ಕ್ರಿಸ್ತಯೇಸುವೇ; ಸಾಯುವುದು ಲಾಭವೇ.


ಹೇ ಪ್ರಭು, ನೀನೇ ನನ್ನ ಪಾಲಿನ ಸ್ವಾಸ್ತ್ಯ I ನಿನ್ನ ವಾಕ್ಯದ ಪಾಲನೆಯೆ ನಾಗೈದ ನಿರ್ಣಯ II


ಲೆಕ್ಕವಿಲ್ಲದಾಪತ್ತುಗಳು ನನ್ನನು ಸುತ್ತಿಕೊಂಡಿವೆ I ದಿಕ್ಕು ತೋಚದಂತೆನ್ನ ಪಾಪಗಳು ನನಗಂಟಿಕೊಂಡಿವೆ I ಸಿಲುಕವು ಎಣಿಕೆಗೆ ತಲೆಗೂದಲಂತೆ, ನಾನೆದೆಗುಂದಿರುವೆ II


ಇಗೋ, ದೇವರು ಕೊಲ್ಲುವನೆನ್ನನು ಅದಕ್ಕಾಗಿ ನಾನು ಕಾದಿರುವೆನು. ಆದರೂ ನನ್ನ ನಡತೆ ಸರಿಯೆಂಬುದನು ಆತನ ಮುಂದೆಯೆ ರುಜುವಾತುಪಡಿಸುವೆನು.


ಜಯಶಾಲಿಯಾದವನು ಆಗುವನು ಇದಕ್ಕೆಲ್ಲಾ ಬಾಧ್ಯನು ನಾನವನಿಗೆ ದೇವನಾಗಿರುವೆನು ಅವನೆನಗೆ ಪುತ್ರನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು